Saturday, July 4, 2026
spot_img
More
    spot_img
    HomeHomeಕಲ್ಯಾಣ ಕರ್ನಾಟಕದ 1008 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ʻಪೂರ್ವ ಪ್ರಾಥಮಿಕ ತರಗತಿʼಗಳು ಪ್ರಾರಂಭ : ರಾಜ್ಯ...

    ಕಲ್ಯಾಣ ಕರ್ನಾಟಕದ 1008 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ʻಪೂರ್ವ ಪ್ರಾಥಮಿಕ ತರಗತಿʼಗಳು ಪ್ರಾರಂಭ : ರಾಜ್ಯ ಸರ್ಕಾರ ಆದೇಶ

    ಬೆಂಗಳೂರು : ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ 1008 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

    Advertisement

    ರಾಜ್ಯ ಯೋಜನಾ ನಿರ್ದೇಶಕರು, ಸಮಗ್ರ ಶಿಕ್ಷಣ ಕರ್ನಾಟಕ ಇವರು ಮೇಲೆ ಓದಲಾದ ಏಕ ಕಡತದಲ್ಲಿ, ಕಲ್ಯಾಣ ಕರ್ನಾಟಕ ಪ್ರದೇಶದ ಎಲ್ಲಾ 7 ಜಿಲ್ಲೆಗಳಲ್ಲಿ ಆಯ್ದ 1008 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (ECCE) ಪ್ರಾರಂಭಿಸಲು ಅನುಮತಿ ನೀಡುವಂತೆ ಮತ್ತು ಇವುಗಳಿಗೆ ಅಗತ್ಯವಿರುವ ಪಠ್ಯಪುಸ್ತಕ, ಕಲಿಕಾ ಸಾಮಗ್ರಿ ಹಾಗೂ ಕಲಿಕಾ ಕಿಟ್ಗಳನ್ನು ಸಮಗ್ರ ಶಿಕ್ಷಣ ಕರ್ನಾಟಕ ಕಛೇರಿಯ ವತಿಯಿಂದ ಒದಗಿಸುವಂತೆ ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಕಲಬುರಗಿ, ಇವರು ಕೋರಿದ್ರು. ಸದರಿ ಕಿಟ್‌ಗಳಿಗೆ ಅಗತ್ಯವಿರುವ ಅನುದಾನದ ವಿವರ ಈ ಕೆಳಕಂಡಂತಿದೆ ಎಂದು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.

    ಸದರಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಕಲ್ಯಾಣ ಕರ್ನಾಟಕ ಪ್ರದೇಶದ ಎಲ್ಲಾ 7 ಜಿಲ್ಲೆಗಳಲ್ಲಿ ಆಯ್ದ 1008 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (ECCE) ಪ್ರಾರಂಭಿಸಲು ತೀರ್ಮಾನಿಸಿ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ. ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಎಲ್ಲಾ 7 ಜಿಲ್ಲೆಗಳಲ್ಲಿ ಆಯ್ಕೆ 1008 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (ECCE) ಪ್ರಾರಂಭಿಸಲು ಅನುಬಂಧದಲ್ಲಿರುವಂತೆ ಅನುಮತಿ ನೀಡಿ ಆದೇಶಿಸಿದೆ.

    ಸದರಿ ಕಾರ್ಯಕ್ರಮದ ಅನುಷ್ಠಾನಕ್ಕೆ ತಗಲುವ ವೆಚ್ಚವನ್ನು KKRDB ಯಿಂದ ಭರಿಸತಕ್ಕದ್ದು.

    ಮುಂದುವರೆದು, ಕಲ್ಯಾಣ ಕರ್ನಾಟಕ ಪ್ರದೇಶದ ಎಲ್ಲಾ 7 ಜಿಲ್ಲೆಗಳಲ್ಲಿ ಆಯ್ದ 1008 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾಯೋಗಿಕವಾಗಿ ಪ್ರಾರಂಭಿಸುವ ಸಂಬಂಧದಲ್ಲಿ ಈ ಕೆಳಗಿನಂತೆ ವಿವರವಾದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು:-

    1. 2024-25ನೇ ಸಾಲಿನಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಎಲ್ಲಾ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳತಕ್ಕದ್ದು.

    2. ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಕುರಿತು ಸರ್ಕಾರಿ ಪ್ರಾಥಮಿಕ ಶಾಲೆಗಳ ಎಸ್.ಡಿ.ಎಂ.ಸಿಯವರು ಮತ್ತು ಶಿಕ್ಷಕರು ಸ್ಥಳೀಯ ಮಟ್ಟದಲ್ಲಿ ಪ್ರಚಾರವನ್ನು ಮಾಡತಕ್ಕದ್ದು.

    3. ಪೂರ್ವ ಪ್ರಾಥಮಿಕ ತರಗತಿಯನ್ನು ಪ್ರಾರಂಭಿಸಲು ಒಂದು ಕೊಠಡಿಯನ್ನು ಗುರುತಿಸಿಕೊಳ್ಳುವುದು ಹಾಗೂ ಕೊಠಡಿ ಸಜ್ಜುಗೊಳಿಸುವುದು ಅವಶ್ಯ ಸಾಧನ ಸಾಮಗ್ರಿಗಳನ್ನು ನಿಯಮಾನುಸಾರ ಖರೀದಿಸುವುದು. ಕೊಠಡಿ ಸಜ್ಜುಗೊಳಿಸಲು ಸ್ಥಳೀಯ ಚಿತ್ರಕಲಾ ಶಿಕ್ಷಕರನ್ನು / ಚಿತ್ರಕಲಾ ಪರಿಣಿತರನ್ನು ಬಳಸಿಕೊಂಡು ಮಕ್ಕಳಿಗೆ ಆಕರ್ಷಕವಾದ ಚಿತ್ರಗಳ ರಚನೆ, ಗೋಡೆ ಮೇಲೆ ನೆಲ ಮಟ್ಟದಿಂದ 2 ಅಡಿಯವರೆಗೆ ಮಕ್ಕಳು ಬರೆಯಲು/ ಚಿತ್ರ ರಚಿಸಲು ಸಾಧ್ಯವಾಗುವಂತೆ ಗ್ರೀನ್ ಬೋರ್ಡ/ಕಪ್ಪು ಹಲಗೆ ರಚನೆ ಮುಂತಾದ ಕಾರ್ಯಗಳನ್ನು ಮಾಡುವುದು. ಖರೀದಿಸಬೇಕಾದ ಸಾಧನ ಸಾಮಗ್ರಿಗಳ ಪಟ್ಟಿಯನ್ನು ಹಾಗೂ ಕೊಠಡಿಯ ವಿನ್ಯಾಸದ ಕೆಲವು ಮಾದರಿ ಉದಾಹರಣೆಗಳನ್ನು ಕೂಡಲೇ ಒದಗಿಸತಕ್ಕದ್ದು.

    4. ಪ್ರತಿ ಪೂರ್ವ ಪ್ರಾಥಮಿಕ ತರಗತಿಗೆ ಒಬ್ಬ ಶಿಕ್ಷಕಿ/ಶಿಕ್ಷಕ ಮತ್ತು ಒಬ್ಬರು ಆಯಾರವರನ್ನು ಶಾಲಾ ಎಸ್.ಡಿ.ಎಂ.ಸಿ ಹಾಗೂ ಮುಖ್ಯ ಶಿಕ್ಷಕರು ತಾತ್ಕಾಲಿಕವಾಗಿ 10 ತಿಂಗಳುಗಳ ಅವಧಿಗೆ ನೇಮಕ ಮಾಡಿಕೊಳ್ಳತಕ್ಕದ್ದು. ಪೂರ್ವ ಪ್ರಾಥಮಿಕ ತರಗತಿ ಶಿಕ್ಷಕಿ/ಶಿಕ್ಷಕರಿಗೆ ಪ್ರಸ್ತುತ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಸಂಭಾವನೆಯಂತೆಯೇ ಮಾಸಿಕ ರೂ. 10,000,00 ಮತ್ತು ಆಯಾ ಇವರಿಗೆ ಮಾಸಿಕ ರೂ. 5000.00 ಸಂಭಾವನೆಯನ್ನು ನಿಗದಿಪಡಿಸತಕ್ಕದ್ದು.

    5. ವೇತನ ಅನುದಾನವನ್ನು ಸಂಬಂಧಪಟ್ಟ ಉಪ ನಿರ್ದೇಶಕರು ಆಯಾ ಶಾಲಾ ಖಾತೆಗೆ ಬಿಡುಗಡೆ ಮಾಡತಕ್ಕದ್ದು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    ಬೆಂಗಳೂರು: ಡೇ ಕೇರ್‌ನಲ್ಲಿ ಮಕ್ಕಳಿಗೆ ಹಿಂಸೆ, ಐವರು ಮಹಿಳೆಯರ ವಿರುದ್ಧ ಎಫ್‌ಐಆರ್

    ಕ್ಯಾಪ್‌ಜೆಮಿನಿ ಕ್ಯಾಂಪಸ್‌ನ ಡೇ ಕೇರ್‌ನಲ್ಲಿ ಪುಟ್ಟ ಮಕ್ಕಳಿಗೆ ಹಿಂಸೆ ನೀಡಿದ ಆರೋಪದ ವಿಡಿಯೊ ವೈರಲ್; ಐವರು ಮಹಿಳಾ ಆರೈಕೆದಾರರ ವಿರುದ್ಧ ಪ್ರಕರಣ ದಾಖಲು.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading