ಬೆಂಗಳೂರು: ಕಳೆದೆರಡು ದಿನಗಳಿಂದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪಿತೂರಿ ನಡೆಸುತ್ತಿದ್ದು, ಅವರ ವಿರುದ್ಧ ದಾಖಲಾಗಿರುವ ಎಲ್ಲ ಎಫ್‌ಐಆರ್‌ಗಳನ್ನು ಕ್ರೂಢೀಕರಿಸುವಂತೆ ಎಲ್ಲ ವರಿಷ್ಠಾಧಿಕಾರಿಗಳಿಗೂ ಸೂಚನೆ ನೀಡಿದೆ ಎಂಬ ಆರೋಪ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರಿಂದ ಕೇಳಿಬರುತ್ತಿದ್ದು, ಮೊನ್ನೆ (ಜೂನ್ 10 ) ಶಿವಮೊಗ್ಗದಲ್ಲಿ ಭಾಷಣದ ನಡುವೆ ಸ್ವತಃ ಚಕ್ರವರ್ತಿ ಸೂಲಿಬೆಲೆ ಸಹ ಈ ಬಗ್ಗೆ ಮಾತನಾಡಿ ರಾಜ್ಯ ಕಾಂಗ್ರೆಸ್ ವಿರುದ್ಧ ಆರೋಪಿಸಿದ್ದರು.
ಈ ಬಗ್ಗೆ ರಾಜ್ಯ ರಾಜಕೀಯದಲ್ಲಿ ಚರ್ಚೆಗಳು ಜೋರಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಹ ಈ ಕುರಿತು ಟ್ವೀಟ್ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಆರ್ ಅಶೋಕ್ ಸಹ ಈ ಕುರಿತು ಕಿಡಿಕಾರಿದ್ದರು. ಈ ಗಂಭೀರ ಆರೋಪದ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳು ಪ್ರತಿಕ್ರಿಯೆ ನೀಡಿ ಎಂದು ಶಾಸಕ ಪ್ರದೀಪ್ ಈಶ್ವರ್‌ಗೆ ಪ್ರಶ್ನೆ ಹಾಕಿದ್ದು, ಪ್ರದೀಪ್ ಈಶ್ವರ್ ʼಇಲ್ಲ, ನಾನು ಚಕ್ರವರ್ತಿ ಸೂಲಿಬೆಲೆ ಬಗ್ಗೆ ಮಾತನಾಡಲ್ಲ. ನನ್ನ ಲೆವೆಲ್ ಅಶೋಕ್, ವಿಜಯೇಂದ್ರ ಅವರ ಬಗ್ಗೆ ಮಾತನಾಡ್ತೀನಿ. ನನ್ನ ಲೆವೆಲ್ ಅವ್ರ ಬಗ್ಗೆ ಮಾತನಾಡಿದರೆ ಸೂಕ್ತ ಅಂತ. ನಮ್ಮ ಕಾರ್ಯಕರ್ತರು ಮಾತನಾಡುತ್ತಾರೆʼ ಎಂದು ಹೇಳಿದ್ದಾರೆ.
ಈ ಮೂಲಕ ಪ್ರದೀಪ್ ಈಶ್ವರ್ ಚಕ್ರವರ್ತಿ ಸೂಲಿಬೆಲೆ ಓರ್ವ ಕಾರ್ಯಕರ್ತ ಆತನ ಕುರಿತು ತಾನು ಮಾತನಾಡುವುದಿಲ್ಲ ತನ್ನ ಕಾರ್ಯಕರ್ತರು ಮಾತನಾಡುತ್ತಾರೆ ಎಂದು ಕಾಲೆಳೆದಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


