ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ 2,85,000 ಮೆಟ್ರಿಕ್ ಟನ್ ರಸಗೊಬ್ಬರ ಪೂರೈಕೆಯಾಗಬೇಕಿದ್ದು, ಸಕಾಲಕ್ಕೆ ಬಂದರೆ ರೈತರ ಸಮಸ್ಯೆ ನಿವಾರಣೆಯಾಗುತ್ತದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಧಾನಪರಿಷತ್‌ನಲ್ಲಿ ತಿಳಿಸಿದರು.
ಶೂನ್ಯವೇಳೆಯಲ್ಲಿ ಬಿಜೆಪಿಯ ಬಿ.ಎಚ್.ಪೂಜಾರ್ ಅವರು, ರಾಜ್ಯದಲ್ಲಿ ರೈತರಿಗೆ ರಸಗೊಬ್ಬರದಿಂದ ಉಂಟಾಗಿರುವ ಸಮಸ್ಯೆ ಕುರಿತು ಸಚಿವರ ಗಮನಸೆಳೆದರು.
ಇದಕ್ಕೆ ಸುದೀರ್ಘ ಉತ್ತರ ನೀಡಿದ ಸಚಿವರು, ಜುಲೈ-ಆಗಸ್ಟ್ ತಿಂಗಳ ಅವಧಿಯಲ್ಲಿ 2,85,000 ಮೆಟ್ರಿಕ್ ಟನ್ ರಸಗೊಬ್ಬರ ರಾಜ್ಯಕ್ಕೆ ಬರಬೇಕಿದೆ. ನಮಗೆ ನಿಗದಿತ ಸಮಯಕ್ಕೆ ಸರಿಯಾಗಿ ಪೂರೈಕೆಯಾಗದ ಕಾರಣ ಕೆಲವು ಭಾಗಗಳಲ್ಲಿ ಕೊರತೆಯಾಗಿದೆ. ಇದಕ್ಕೆ ಕೇಂದ್ರ ಸರ್ಕಾರ ಕಾರಣ ಹೊರತು ರಾಜ್ಯ ಸರ್ಕಾರವಲ್ಲ ಎಂದು ತಿರುಗೇಟು ನೀಡಿದರು.
ಪ್ರಸಕ್ತ ವರ್ಷ ಮುಂಗಾರು ಆರಂಭವಾಗುವ ಮುನ್ನವೇ ಕೇಂದ್ರ ರಸಗೊಬ್ಬರ ಸಚಿವ ಜೆ.ಪಿ.ನಡ್ಡಾ ಹಾಗೂ ಕೃಷಿ ಸಚಿವ ಶಿವರಾಜ್ ಸಿಂಗ್ ಚವ್ಹಾಣ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಈ ಬಾರಿ 12,95,000 ಮೆಟ್ರಿಕ್ ಟನ್ ಗೊಬ್ಬರವನ್ನು ಪೂರೈಕೆ ಮಾಡಬೇಕೆಂದು ಕೋರಿದ್ದವು. ಆದರೆ ಕೇಂದ್ರ ಸರ್ಕಾರ 11,19,000 ನಿಗದಿಪಡಿಸಿತ್ತೆಂದು ಅಂಕಿಸಂಖ್ಯೆಗಳ ವಿವರ ನೀಡಿದರು.
ಜೂನ್-ತಿಂಗಳ ಅವಧಿಯಲ್ಲೇ ನಮಗೆ 1,22,000 ಮೆಟ್ರಿಕ್ ಟನ್ ರಸಗೊಬ್ಬರ ಕೊರತೆ ಎದುರಾಯಿತು. ನಾವು ನಿಗದಿಪಡಿಸಿದ ಗೊಬ್ಬರವನ್ನು ಪೂರೈಕೆ ಮಾಡುವಂತೆ ಸಂಬಂಧಪಟ್ಟ ಸಚಿವರಿಗೆ ಮತ್ತು ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರೂ ಪ್ರಯೋಜನವಾಗಲಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಪ್ರಸಕ್ತ ಮುಂಗಾರಿನಲ್ಲಿ ಡಿಎಪಿ ಗೊಬ್ಬರವನ್ನು ಬಳಕೆ ಮಾಡಬೇಕೆಂದು ಸೂಚನೆ ಕೊಟ್ಟಿದ್ದರು. ಜಿಲ್ಲಾಧಿಕಾರಿಗಳು, ಸಿಇಒ, ಕೃಷಿ ಅಧಿಕಾರಿಗಳು ಮತ್ತಿತರರು ವಿಡಿಯೋ ಕಾನ್ಫರೆನ್‌್ಸ, ಜಾಗೃತಿ ಶಿಬಿರಗಳು, ಜನಜಾಗೃತಿ ಕಾರ್ಯಕ್ರಮ ರೂಪಿಸಿದ್ದೆವು ಎಂದು ಮಾಹಿತಿ ನೀಡಿದರು.
ಮೆಟ್ರೊ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ ಯತ್ನ!
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


