Wednesday, November 4, 2026
spot_img
More
    spot_img
    HomeLatest newsವಿಧಾನಸಭೆ ಕಲಾಪದಲ್ಲೂ ಕೆ. ಎನ್ ರಾಜಣ್ಣ ವಜಾ ಗದ್ದಲ; ಬಿಜೆಪಿ ನಾಯಕರ ಗುಡುಗು

    ವಿಧಾನಸಭೆ ಕಲಾಪದಲ್ಲೂ ಕೆ. ಎನ್ ರಾಜಣ್ಣ ವಜಾ ಗದ್ದಲ; ಬಿಜೆಪಿ ನಾಯಕರ ಗುಡುಗು

    ಬೆಂಗಳೂರು: ವಿಧಾನಸಭೆ ಕಲಾಪದ ಎರಡನೇ ದಿನವಾದ ಇಂದು ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿದ ಬಗ್ಗೆ ಬಿಜೆಪಿ ನಾಯಕರು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

    ಸದನದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.‌ಅಶೋಕ್‌ ಅವರು, ಯಾವ ಕಾರಣಕ್ಕೆ ರಾಜಣ್ಣ ಅವರನ್ನು ವಜಾ ಮಾಡಲಾಗಿದೆ?. ಈ ಬಗ್ಗೆ ಇಂದೇ ಉತ್ತರ ಕೊಡಿ. ಇದರ ಹಿಂದೆ ಒಂದು ಷಡ್ಯಂತ್ರ ಇದೆ. ಪಿತೂರಿಯೂ ಇದೆ ಎಂದು ಗುಡುಗಿದರು.

    ಇನ್ನು ಶಾಸಕ ಸುನೀಲ್‌ ಕುಮಾರ್‌ ಮಾತನಾಡಿ, ಆ ಪಿತೂರಿ, ಷಡ್ಯಂತ್ರ ಮಾಡಿದವರು ಯಾರು ಎಂದು ಹೇಳಿ ಎಂದು ಆಡಳಿತ ಪಕ್ಷದ ನಾಯಕರಿಗೆ ಆಗ್ರಹಿಸಿದರು.

    ಸದನ ನಡೆಯುವ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಚಿವರ ವಜಾ ಬಗ್ಗೆ ಮಾಹಿತಿ ನೀಡಬೇಕು ಎಂದು ಸ್ಪೀಕರ್‌ ಯು.ಟಿ.ಖಾದರ್‌ ವಿನಂತಿ ಮಾಡಿದರು. ನಿನ್ನೆ ನಡೆದ ಘಟನೆಯ ಬಗ್ಗೆ ಸಿಎಂ ಇನ್ನೂ ಯಾವುದೇ ಮಾಹಿತಿ ನೀಡಿಲ್ಲ ಎಂದು ಅಶೋಕ್‌ ಹೇಳುತ್ತಿದ್ದಂತೆ ಸ್ಪೀಕರ್‌ ಮಧ್ಯಪ್ರವೇಶಿಸಿ, ಇದು ಅವರ ಇಂಟರ್ನಲ್‌ ಮ್ಯಾಟರ್‌ ಎಂದು ಹೇಳಿದರು.

    ಇನ್ನು ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಲಾಗಿದ್ದು, ಇಂದಿನ ಕಲಾಪಕ್ಕೆ ಗೈರಾಗಿದ್ದಾರೆ. ರಾಜಣ್ಣ ವಜಾ ಬಗ್ಗೆ ಪ್ರಶ್ನೋತ್ತರ ಮುಗಿದ ಬಳಿಕ ಮಾಹಿತಿ ನೀಡಲಾಗುವುದು ಎಂದು ಸಚಿವ ಎಚ್.ಕೆ.ಪಾಟೀಲ್‌ ತಿಳಿಸಿದರು.

    ಮೆಟ್ರೊ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ ಯತ್ನ!

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search