Thursday, November 5, 2026
spot_img
More
    spot_img
    HomeLatest newsವಿಜಯಪುರ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ

    ವಿಜಯಪುರ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ

    ವಿಜಯಪುರ: ಕಳೆದ ಆರೇಳು ತಿಂಗಳಿನಿಂದ ಏಳು-ಬೀಳು ಕಾಣುತ್ತಲೇ ಇದ್ದ ವಿಜಯಪುರ ಮಹಾನಗರ ಪಾಲಿಕೆ ಮೇಯರ್- ಉಪಮೇಯರ್ ಚುನಾವಣೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದ್ದು, ಗದ್ದುಗೆ ಅಲಂಕರಿಸುವಲ್ಲಿ ಬಿಜೆಪಿ ಸಫಲವಾಗಿದೆ.

    ಮೇಯರ್ ಸ್ಥಾನಕ್ಕೆ ಬಿಜೆಪಿ ಸದಸ್ಯ ಎಂ.ಎಸ್. ಕರಡಿ ಹಾಗೂ ಉಪಮೇಯ‌ ಸ್ಥಾನಕ್ಕೆ ಸುಮಿತ್ರಾ ಜಾಧವ ಆಯ್ಕೆಯಾಗಿದ್ದಾರೆಂದು ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟೆಣ್ಣವರ ಸೋಮವಾರ ಅಧಿಕೃತವಾಗಿ ಘೋಷಣೆ ಹೊರಡಿಸಿದರು.

    ಮುಚ್ಚಿದ ಲಕೋಟೆಯಲ್ಲಿದ್ದ ಫಲಿತಾಂಶವನ್ನು ಕೋರ್ಟ್ ಆದೇಶದ ಮೇರೆಗೆ ಪ್ರಕಟಿಸಲಾಗಿದೆ. ಜ.27ರಂದು ಮೇಯರ್ ಸ್ಥಾನಕ್ಕೆ ಚುನಾವಣೆ ನಡೆದು ಬಿಜೆಪಿಯ ಎಂ.ಎಸ್. ಕರಡಿ 24 ಮತ ಪಡೆದಿದ್ದರೆ, ಕಾಂಗ್ರೆಸ್‌ನ ಅಶೋಕ ನ್ಯಾಮಗೊಂಡ 22 ಮತ ಪಡೆದಿದ್ದರು.

    ಫೆ.12ರಂದು ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಬಿಜೆಪಿಯ ಸುಮಿತ್ರಾ ಜಾಧವ 24 ಮತ ಗಳಿಸಿದರೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವಿಮಲಾ ರಫೀಕ ಖಾನೆ ಚುನಾವಣೆ ಪ್ರಕ್ರಿಯೆಯಿಂದಲೇ ದೂರ ಉಳಿದಿದ್ದರು. ನ್ಯಾಯಾಲಯದ ಆದೇಶದಂತೆ ಫಲಿತಾಂಶ ಗೌಪ್ಯವಾಗಿರಿಸಲಾಗಿತ್ತು.

    ಆ.13ರಿಂದ ಕರ್ನಾಟಕದಲ್ಲಿ ವ್ಯಾಪಕ ಮಳೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search