ಸ್ವಪಕ್ಷದ ವಿರುದ್ಧವೇ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಸಹಕಾರ ಸಚಿವ ಕೆ.ಎನ್ ರಾಜಣ್ಣಗೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚಿಸಿತ್ತು. ತಮ್ಮ ಸ್ಥಾನಕ್ಕೆ ಕೆ.ಎನ್ ರಾಜಣ್ಣ ಅವರು ರಾಜೀನಾಮೆ ನೀಡುತ್ತಿದ್ದಂತೆ ಅತ್ತ ಮಹಿಳಾ ಸದಸ್ಯೆ ಒಬ್ಬರು ಪುರಸಭೆ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಕೆಎನ್ ರಾಜಣ್ಣ ರಾಜೀನಾಮೆ ಹಿನ್ನಲೆಯಲ್ಲಿ ಮಧುಗಿರಿ ಪುರಸಭೆ ಸದಸ್ಯತ್ವಕ್ಕೆ ಗಿರಿಜಾ ಮಂಜುನಾಥ್ ರಾಜೀನಾಮೆ ನೀಡಿದ್ದಾರೆ.ಕಾಂಗ್ರೆಸ್ಗೆ ಮತ್ತೊಂದು ಹಿನ್ನಡೆಯಾಗಿದೆ. ಕೆಎನ್ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿರುವುದಕ್ಕೆ ಗಿರಿಜಾ ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಸ್ವ ಇಚ್ಚೆಯಿಂದ ರಾಜೀನಾಮೆ ನೀಡಿರುವುದಾಗಿ ಗಿರಿಜಾ ಮಂಜುನಾಥ್ ಹೇಳಿದ್ದಾರೆ. ಮಧುಗಿರಿ ಉಪ ವಿಭಾಗಾಧಿಕಾರಿಗೆ ಗಿರೀಜಾ ಮಂಜುನಾಥ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಕೆಎನ್ ರಾಜಣ್ಣ ತುಮಕೂರಿನ ಮಧುಗಿರಿ ಶಾಸಕರಾಗಿದ್ದಾರೆ. ಸಹಕಾರ ಸಚಿವರಾಗಿದ್ದ ರಾಜಣ್ಣ ಅವರನ್ನು ಪಕ್ಷ ವಿರೋಧಿ ಹೇಳಿಕೆ ಅಡಿ ವಜಾ ಮಾಡಿದ್ದಾರೆ. ಈ ನಿರ್ಧಾರದಿಂದ ಕೆಎನ್ ರಾಜಣ್ಣ ಬೆಂಬಲಿಗರು ತೀವ್ರ ಅಸಮಾಧಾನಗೊಂಡಿದ್ದಾರೆ. ರಾಜಣ್ಣ ಬೆಂಬಲಿಗರಾಗಿರುವ ಮಧುಗಿರಿ ಪುರಸಭೆಯ 10ನೇ ವಾರ್ಡ್ ಸದಸ್ಯೆ ಗಿರಿಜಾ ಮಂಜುನಾಥ್ ರಾಜೀನಾಮೆ ನೀಡಿದ್ದಾರೆ. ರಾಜಣ್ಣ ಅವರನ್ನು ವಜಾ ಮಾಡಿರುವ ನಿರ್ಧಾರ ತೀವ್ರ ಬೇಸರ ತಂದಿದೆ ಎಂದು ಗಿರಿಜಾ ಮಂಜುನಾಥ್ ಹೇಳಿದ್ದಾರೆ.
,ಧರ್ಮಸ್ಥಳ: ಪದ್ಮಲತಾ ಪ್ರಕರಣದ ಬಗ್ಗೆ ತನ್ನ ಬಳಿ ಸಾಕ್ಷ್ಯಗಳಿವೆ ಎಂದ ದೂರುದಾರ ಜಯಂತ್!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


