ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ರೈಲ್ವೆ ನಿಲ್ದಾಣದಲ್ಲಿ ಹಸಿರು ಮಾರ್ಗದ ಕಡೆಗೆ ಹೋಗುವ ಟ್ರ್ಯಾಕ್ ಗೆ ಯುವಕನೊಬ್ಬ ಹಾರಿ ಆತ್ಮಹತ್ಯೆಗೆ ಮುಂದಾದ ಘಟನೆ ನಡೆದಿದೆ. ಇದರಿಂದ ಅರ್ಧ ಗಂಟೆಗೂ ಹೆಚ್ಚು ಕಾಲ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಿ ಪ್ರಯಾಣಿಕರು ಪರದಾಡಿದ್ದಾರೆ.
ನಮ್ಮ ಮೆಟ್ರೋ ಮೆಜಿಸ್ಟಿಕ್ ಸ್ಟೇಷನ್ ನಲ್ಲಿ ರೈಲು ಬರುವಾಗ ಹಳಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿ ಗಾಯಗೊಂಡ ದುರ್ಘಟನೆ ಇಂದು ರಾತ್ರಿ 10.15ರ ಸುಮಾರಿಗೆ ನಡೆದಿದೆ ಎಂದು ತಿಳದುಬಂದಿದೆ. ಮೆಟ್ರೊ ಸಿಬ್ಬಂದಿ ಕೂಡಲೇ ವಿದ್ಯುತ್ ಸರಬರಾಜು ಸ್ಥಗಿತ ಗೊಳಿಸಿ ರಕ್ಷಿಸಿದ್ದಾರೆ. ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಸಿರು ಮಾರ್ಗದಲ್ಲಿ ರೇಷ್ಮೆ ಸಂಸ್ಥೆ ಕಡೆಗೆ ತೆರಳುವ ಮಾರ್ಗದಲ್ಲಿ ಘಟನೆ ನಡೆದಿದ್ದು, ರೈಲಿನ ಮುಂಭಾಗ ವ್ಯಕ್ತಿಯೊಬ್ಬರು ಹಾರಿ,ರೈಲು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ರಕ್ಷಿಸಿ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. 10.28ಕ್ಕೆ ಪುನಃ ಸೇವೆ ಆರಂಭಿಸಲಾಗಿದೆ ಎಂದು ಮೆಟ್ರೋ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಈ ವೇಳೆ ಮಾದಾವರದಿಂದ ಬರುವ ರೈಲು, ಕೆಂಗೇರಿ ಕಡೆಯಿಂದ, ವೈಟ್‌ಫಿಲ್ಡ್ ಹಾಗೂ ರೇಷ್ಮೆ ಸಂಸ್ಥೆಯಿಂದ ಬರುವ ರೈಲುಗಳಲ್ಲಿ ಅಡಚಣೆ ಉಂಟಾಯಿತು. ಪ್ರಯಾಣಿಕನ ಮೇಲೆ ಹತ್ತಿದ ರೈಲಿನಲ್ಲಿದ್ದ ಪ್ರಯಾಣಿಕರನ್ನು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಇಳಿಯಲು ಬಿಡಲಿಲ್ಲ. ಕೆಲ ಹೊತ್ತಿನ ಬಳಿಕ ಪ್ರಯಾಣಿಕರನ್ನು ಇಳಿಸಲಾಯಿತು. ಈ ವೇಳೆ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದು ಕಂಡು ಬಂತು. ಸುಮಾರು ಅರ್ಧಗಂಟೆ ತಡವಾಗಿ ಪ್ರಯಾಣಿಕರು ಗಮ್ಯಸ್ಥಾನ ತಲುಪುವಂತಾಯಿತು.
,ಪ್ರತಾಪ್ ಸಿಂಹ ಮೊಬೈಲ್ ಎಸ್‌ಐಟಿ ತನಿಖೆ ನಡೆಸಿದ್ರೆ ಜೈಲುಶಿಕ್ಷೆ ಪಕ್ಕಾ: ಎಂ.ಲಕ್ಷ್ಮಣ್ ಹೊಸ ಬಾಂಬ್
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


