ಹನೂರು: ತಾಲೂಕಿನ ಧಾರ್ಮಿಕ ಪುಣ್ಯ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ 18ರಂದು ನಡೆಯಲಿರುವ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ 95 ಜೋಡಿಗಳು ಹಸಮಣೆ ಏರಲಿವೆ.
ಇದಕ್ಕಾಗಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಸಕಲ ಸಿದ್ಧತೆ ನಡೆದಿದೆ. ಜಿಲ್ಲೆಯಿಂದ 55, ಮೈಸೂರಿನಿಂದ 13, ಮಂಡ್ಯದಿಂದ 11 ಸೇರಿ 95 ಜೋಡಿಗಳು ನೋಂದಣಿಯಾಗಿವೆ.
ಇದರಲ್ಲಿ 16 ಜೋಡಿಗಳು ಅಂತರ್ಜಾತಿ ವಿವಾಹವಾಗಲಿವೆ. ಸುತ್ತೂರು ಮಠದ ಶ್ರೀ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಕಾರ್ಯಕ್ರಮ ನೆರವೇರಲಿದೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಉಪಸ್ಥಿತರಿರುವರು. ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಮಾಂಗಲ್ಯ ವಿತರಣೆ ಮಾಡಲಿದ್ದಾರೆ.
ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ನಿಶ್ಚಿತಾರ್ಥ ಉಂಗುರದ ಬೆಲೆ ಎಷ್ಟು?
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


