Sunday, July 5, 2026
spot_img
More
    spot_img
    HomeLatest newsಸರಕಾರಕ್ಕೆ ಸ್ವಲ್ಪವಾದರೂ ಮಾನ ಮರ್ಯಾದೆ ಇದ್ದರೆ, ಗೂಂಡಾ ಕಾಯ್ದೆ ಹಾಕಲಿ- ಬಿ.ವೈ. ವಿಜಯೇಂದ್ರ

    ಸರಕಾರಕ್ಕೆ ಸ್ವಲ್ಪವಾದರೂ ಮಾನ ಮರ್ಯಾದೆ ಇದ್ದರೆ, ಗೂಂಡಾ ಕಾಯ್ದೆ ಹಾಕಲಿ- ಬಿ.ವೈ. ವಿಜಯೇಂದ್ರ

    ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೇಸರಿ ಕಂಡರೆ ಆಗುವುದಿಲ್ಲ, ಹಿಂದೂ ಕಾರ್ಯಕರ್ತರು ಭಯ ಪಡುವ ಅವಶ್ಯಕತೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಹೇಳಿದ್ದಾರೆ.

    Advertisement

    ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರ ಹೇಳಿಕೆ ಗಮನಿಸಿದರೆ ಇವರು ಹಿಂದೂಗಳ ಮತ ಪಡೆಯದೇ ಅಧಿಕಾರಕ್ಕೆ ಬಂದಂತೆ ಕಾಣುತ್ತಿದೆ, ಮದ್ದೂರು ಗಲಭೆಗೆ ರಾಜ್ಯ ಸರಕಾರವೇ ಸಂಪೂರ್ಣ ಹೊಣೆ ಹೊರಬೇಕು, ರಾಜ್ಯ ಸರಕಾರದ ಕಡೆಯಿಂದ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಆಗುತ್ತಿದೆ. ಇದಕ್ಕಾಗಿ ಮದ್ದೂರು ಘಟನೆ ಬಗ್ಗೆ ನ್ಯಾಯಾಂಗ ತನಿಖೆ ಆಗಲೇಬೇಕು ಎಂದು ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.

    ಕಾಂಗ್ರೆಸ್ ಸರಕಾರದ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವು ಎರಡೂವರೆ ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದೆ. ಗಣಪತಿ ಮಹೋತ್ಸವವನ್ನೂ ವಿಜೃಂಭಣೆಯಿಂದ ಆಚರಿಸಲು ಸಾಧ್ಯವಾಗುತ್ತಿಲ್ಲ. ರಾಜ್ಯದಲ್ಲಿ ತುಘಲಕ್ ದರ್ಬಾರ್ ನಡೆಯುತ್ತಿದೆ. ಇವರು ನಿಜಾಮರ ಆಡಳಿತವನ್ನು ನೆನಪು ಮಾಡಿ ಕೊಡುತ್ತಿದ್ದಾರೆ. ಎಂದು ವಿಜಯೇಂದ್ರ ಸಿಡುಕಿದರು.

    ಸರಕಾರಕ್ಕೆ ಸ್ವಲ್ಪವಾದರೂ ಮಾನ ಮರ್ಯಾದೆ ಇದ್ದರೆ, ಮಸೀದಿ ಒಳಗೆ ಕಲ್ಲು ಸಂಗ್ರಹಿಸಿ ಬಿಸಾಡಿದ, ಮತ್ತೆ ಗೂಂಡಾವರ್ತನೆ ಪ್ರಾರಂಭಿಸಿದ ದೇಶದ್ರೋಹಿಗಳ ವಿರುದ್ಧ ಗೂಂಡಾ ಕಾಯ್ದೆ ಹಾಕಲಿ. ಅವರನ್ನು ಒದ್ದು ಒಳಗೆ ಹಾಕಲಿ. ಎಂದು ಬಿ ವೈ ವಿಜಯೇಂದ್ರ ಹೇಳಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    ಬೆಂಗಳೂರು: ಡೇ ಕೇರ್‌ನಲ್ಲಿ ಮಕ್ಕಳಿಗೆ ಹಿಂಸೆ, ಐವರು ಮಹಿಳೆಯರ ವಿರುದ್ಧ ಎಫ್‌ಐಆರ್

    ಕ್ಯಾಪ್‌ಜೆಮಿನಿ ಕ್ಯಾಂಪಸ್‌ನ ಡೇ ಕೇರ್‌ನಲ್ಲಿ ಪುಟ್ಟ ಮಕ್ಕಳಿಗೆ ಹಿಂಸೆ ನೀಡಿದ ಆರೋಪದ ವಿಡಿಯೊ ವೈರಲ್; ಐವರು ಮಹಿಳಾ ಆರೈಕೆದಾರರ ವಿರುದ್ಧ ಪ್ರಕರಣ ದಾಖಲು.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading