ಕೋಲ್ಕತ್ತಾ: ಪಶ್ಚಿಮ ಬಂಗಾಳದ ಜಾದವ್‍ಪುರ ವಿಶ್ವವಿದ್ಯಾಲಯದ (ಜೆಯು) ಕ್ಯಾಂಪಸ್ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಕಳೆ ರಾತ್ರಿ ನಡೆದಿದೆ.
ಮೂರನೇ ವರ್ಷದ ಪದವಿಪೂರ್ವ ವಿದ್ಯಾರ್ಥಿನಿ ಕಳೆದ ರಾತ್ರಿ ವಿವಿ ಕ್ಯಾಂಪಸ್‍ನ ನೀರಿನ ಜಲಾಶಯದ ಪಕ್ಕದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ತಕ್ಷಣ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯುದಾಗ ಸಾವನ್ನಪ್ಪಿದ್ದಾರೆ ಎಂದು ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆಕೆ ಅಲ್ಲಿ ತನ್ನ ಸಹಪಾಠಿಗಳೊಂದಿಗೆ ಮಾತನಾಡುತ್ತಿದ್ದಳು ಎಂದು ವಿಶ್ವವಿದ್ಯಾಲಯದ ಮತ್ತೊಬ್ಬ ಅಧಿಕಾರಿ ಹೇಳಿದರು, ಘಟನೆಯ ಸುತ್ತಲಿನ ಆ ಸಂದರ್ಭಗಳು ಸ್ಪಷ್ಟವಾಗಿಲ್ಲ.
ವಿದ್ಯಾರ್ಥಿನಿಯನ್ನು ಆಕೆಯ ಸ್ನೇಹಿತರು ಮತ್ತು ಇತರ ವಿಶ್ವವಿದ್ಯಾಲಯ ಸಿಬ್ಬಂದಿ ಹತ್ತಿರದ ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ದರು, ಆದರೆ ಅಲ್ಲಿಗೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿ ಹೇಳಿದರು.
ವಿಶ್ವವಿದ್ಯಾಲಯದ ಅಧಿಕಾರಿಗಳು ವಿದ್ಯಾರ್ಥಿನಿಯ ಹೆಸರನ್ನು ಬಹಿರಂಗಪಡಿಸಲಿಲ್ಲ.
ಜಾದವ್‍ಪುರ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಥಾಣೆ: ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಬಾಂಗ್ಲಾ ಪ್ರಜೆಗಳ ಬಂಧನ
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


