ಬೆಂಗಳೂರು: ಭಾರತೀಯ ಜೀವ ವಿಮಾ ನಿಗಮದ (LIC) ಭಾಗವಾಗಿರುವ ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC HFL) ಪದವೀಧರ ಅಭ್ಯರ್ಥಿಗಳಿಂದ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಎಲ್‌ಐಸಿ ಎಚ್‌ಎಫ್‌ಎಲ್‌ನ ಅಧಿಕೃತ ವೆಬ್‌ಸೈಟ್ lichousing.com ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 22 ಕೊನೆಯ ದಿನಾಂಕವಾಗಿದ್ದು, ಪರೀಕ್ಷಾ ಶುಲ್ಕ ಪಾವತಿಸಲು ಸೆಪ್ಟೆಂಬರ್ 24 ಕೊನೆಯ ದಿನಾಂಕವಾಗಿದೆ.ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು ಅರ್ಜಿ ಸಲ್ಲಿಕೆ ವಿಧಾನದ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.
ನೇಮಕಾತಿ ಪೂರ್ಣ ಮಾಹಿತಿ ನೇಮಕಾತಿ ಸಂಸ್ಥೆ: ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಕಂಪನಿ
ಹುದ್ದೆಗಳ ಹೆಸರು: ವಿವಿಧ ಅಪ್ರೆಂಟಿಸ್
ಉದ್ಯೋಗಗಳು ಎಷ್ಟು: 192
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: ಸೆಪ್ಟಂಬರ್ 22
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್
ಪೋಸ್ಟಿಂಗ್ ಎಲ್ಲಿ: ಕರ್ನಾಟಕ ಸೇರಿ ಭಾರತಾದ್ಯಂತ ಅಪ್ರೆಂಟಿಸ್ ತರಬೇತಿ: ನವೆಂಬರ್ 01ರಿಂದ 12 ತಿಂಳಗವರೆಗೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಅರ್ಹತೆ ಹೊಂದಿರಬೇಕು.
ವಯೋಮಿತಿ :
ದಿನಾಂಕ 01-09-2025ಕ್ಕೆ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 12,000 ಸ್ಟೈಫಂಡ್ ನೀಡಲಾಗುತ್ತದೆ.
ಆಯ್ಕೆ ವಿಧಾನ :
ಎಂಟ್ರನ್ಸ್ ಎಕ್ಸಾಂ, ದಾಖಲೆಗಳ ಪರಿಶೀಲನೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕದ ವಿವರ
ಸಾಮಾನ್ಯ ವರ್ಗ ಮತ್ತು ಇತರ ಹಿಂದುಳಿದ ವರ್ಗಗಳ (OBC) ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕ: ₹944
ಎಸ್‌ಸಿ (SC), ಎಸ್‌ಟಿ (ST) ಮತ್ತು ಮಹಿಳಾ ಅಭ್ಯರ್ಥಿಗಳಿಗೆ: ₹798
ದಿವ್ಯಾಂಗ (PwD) ಅಭ್ಯರ್ಥಿಗಳಿಗೆ: ₹472
ಅರ್ಜಿ ಸಲ್ಲಿಕೆ ವಿಧಾನ
ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈ ಕೆಳಗಿನ ಹಂತಗಳನ್ನು ಒಳಗೊಂಡಿದೆ:
ಅಧಿಸೂಚನೆ ಪರಿಶೀಲನೆ: ಅರ್ಜಿ ಸಲ್ಲಿಸುವ ಮೊದಲು, ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ. ಅರ್ಜಿ ಸಲ್ಲಿಸಲು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ.
ಆನ್‌ಲೈನ್ ಅರ್ಜಿ ತೆರೆಯಿರಿ: ಎಲ್‌ಐಸಿ ಹೌಸಿಂಗ್ ಫೈನಾನ್ಸ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಥವಾ ನೇರ ಅಪ್ಲೈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ನಮೂನೆಯನ್ನು ತೆರೆಯಿರಿ.
ಮಾಹಿತಿ ಭರ್ತಿ: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು (ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಸರಿಯಾಗಿ ಮತ್ತು ಸಂಪೂರ್ಣವಾಗಿ ಭರ್ತಿ ಮಾಡಿ. ಮುಂದಿನ ಹಂತಕ್ಕೆ ಹೋಗುವ ಮೊದಲು ಭರ್ತಿ ಮಾಡಿದ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ.
ದಾಖಲೆ ಅಪ್‌ಲೋಡ್: ಅಗತ್ಯವಿದ್ದರೆ, ಕೇಳಲಾದ ದಾಖಲೆಗಳನ್ನು (ಪ್ರಮಾಣಪತ್ರಗಳು, ಫೋಟೋ, ಸಹಿ ಇತ್ಯಾದಿ) ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.
ಈ ಹಂತಗಳನ್ನು ಅನುಸರಿಸಿದ ನಂತರ ನಿಮ್ಮ ಅರ್ಜಿ ಸಲ್ಲಿಕೆ ಪೂರ್ಣಗೊಳ್ಳುತ್ತದೆ. ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬಹುದು.
ಎಲ್‌ಐಸಿ ಹೌಸಿಂಗ್ ಫೈನಾನ್ಸ್‌ನ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ವಿವರ ಇಲ್ಲಿದೆ:
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: ಸೆಪ್ಟೆಂಬರ್ 02, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 22, 2025
ಪರೀಕ್ಷಾ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 24, 2025
ಪ್ರವೇಶ ಪರೀಕ್ಷೆಯ ದಿನಾಂಕ (Entrance Exam): ಅಕ್ಟೋಬರ್ 01, 2025
ಭಾಷಣ ಮಾಡುತ್ತಿದ್ದ ಟ್ರಂಪ್ ಆಪ್ತನಿಗೆ ವೇದಿಕೆ ಮೇಲೆ ಗುಂಡಿಕ್ಕಿ ಹತ್ಯೆ; ಇಲ್ಲಿದೆ ಭಯಾನಕ ವಿಡಿಯೊ
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


