Monday, November 2, 2026
spot_img
More
    spot_img
    HomeBreaking Newsಗಡ್ಡಪ್ಪ ಖ್ಯಾತಿಯ ಕನ್ನಡ ನಟ ಚನ್ನೇಗೌಡ ಇನ್ನಿಲ್ಲ

    ಗಡ್ಡಪ್ಪ ಖ್ಯಾತಿಯ ಕನ್ನಡ ನಟ ಚನ್ನೇಗೌಡ ಇನ್ನಿಲ್ಲ

    ಕನ್ನಡ ಚಿತ್ರರಂಗದಲ್ಲಿ ‘ಗಡ್ಡಪ್ಪ’ ಪಾತ್ರದ ಮೂಲಕ ಗಮನ ಸೆಳೆದಿದ್ದ ನಟ ಚನ್ನೇಗೌಡ ವಿಧಿವಶರಾದರು. ಹಲವಾರು ಚಿತ್ರಗಳಲ್ಲಿ ನಟಿಸಿದ್ದ ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.

    89 ವರ್ಷದ ಚನ್ನೇಗೌಡ ಮಂಡ್ಯ ಜಿಲ್ಲೆಯ ನೊದೆ ಕೊಪ್ಪಲು ಗ್ರಾಮದವರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಸಾವನ್ನಪ್ಪಿದ್ದಾರೆ.

    ನಟ ಚನ್ನೇಗೌಡ ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದರು. ಕೆಲವು ತಿಂಗಳ ಹಿಂದೆ ಬಿದ್ದು ಸೊಂಟಕ್ಕೆ ಪೆಟ್ಟು ಮಾಡಿಕೊಂಡಿದ್ದರು. ಬಳಿಕ ಅವರಿಗೆ ಆಪರೇಷನ್ ಮಾಡಲಾಗಿತ್ತು.

    ಬುಧವಾರ ಚನ್ನೇಗೌಡರು ಮೃತಪಟ್ಟಿದ್ದಾರೆ ಎಂದು ಅವರ ಪುತ್ರಿ ಶೋಭಾ ಮಾಹಿತಿ ನೀಡಿದ್ದಾರೆ. ಸಂಜೆ ನೊದೆಕೊಪ್ಪಲು ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

    ಚನ್ನೇಗೌಡರು ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ ಕನ್ನಡದ ‘ತಿಥಿ’ ಸಿನಿಮಾದ ಗಡ್ಡಪ್ಪನ ಪಾತ್ರ ಅವರಿಗೆ ಭಾರೀ ಜನಪ್ರಿಯತೆ ತಂದುಕೊಟ್ಟಿತ್ತು. ಈ ಚಿತ್ರಕ್ಕೆ ಹಲವಾರು ಪ್ರಶಸ್ತಿಗಳು ಸಹ ಬಂದಿದ್ದವು.

    ಚನ್ನೇಗೌಡರು ತರ್ಲೆ ವಿಲೇಜ್, ಏನ್ ನಿನ್ ಪ್ರಾಬ್ಲಮ್, ಹಳ್ಳಿ ಪಂಚಾಯಿತಿ ಸೇರಿದಂತೆ 8 ಚಿತ್ರಗಳಲ್ಲಿ ನಟಿಸಿದ್ದರು. ಅವರ ಏನ್ ನಿನ್ ಪ್ರಾಬ್ಲಮ್ ಎಂಬ ಸಿಕ್ಟರ್‌ಗಳು ವಾಟ್ಸಪ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

    2018ರಲ್ಲಿಯೂ ಚನ್ನೇಗೌಡರ ಆರೋಗ್ಯ ಕೈ ಕೊಟ್ಟಿತ್ತು. ಕಾಲಿಗೆ ಸಹ ಅವರು ಪೆಟ್ಟು ಮಾಡಿಕೊಂಡಿದ್ದರು. ಚಿಕಿತ್ಸೆ ಬಳಿಕ ಚೇತರಿಕೆ ಕಂಡು ಬಂದಿತ್ತು, ನೊದೆಕೊಪ್ಪಲು ಗ್ರಾಮದಲ್ಲಿಯೇ ಅವರು ವಾಸವಾಗಿದ್ದರು.

    ನಟ ಚನ್ನೇಗೌಡ 80ನೇ ವಯಸ್ಸಿನಲ್ಲಿ ‘ತಿಥಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಈ ಚಿತ್ರದಲ್ಲಿ ಅವರ ಪಾತ್ರ, ಏನ್ ನಿನ್ ಪ್ರಾಬ್ಲಮ್ ಎಂಬ ಡೈಲಾಗ್ ಭಾರೀ ಮೆಚ್ಚುಗೆಗೆ ಕಾರಣವಾಗಿತ್ತು.

    ಗಡ್ಡಪ್ಪ ಎಂಬ ಪ್ರಾತ್ರದ ಹೆಸರಿನಿಂದಲೇ ಖ್ಯಾತಿಗಳಿಸಿದ್ದ ನಟ ಚನ್ನೇಗೌಡ ‘ನಾನ್ ಕನ್ನಡಿಗ’, ‘ಕೆಎ-01’ ಅಲ್ಬಂ ಸಾಂಗ್‌ಗಳಲ್ಲಿ ಸಹ ನಟಿಸಿದ್ದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search