Wednesday, November 4, 2026
spot_img
More
    spot_img
    HomeStateDistrictಆರ್. ಅಶೋಕ್ ಕಚೇರಿಯಲ್ಲಿ ಬಾಗಿಲು ಮುಚ್ಚಿ ಸಭೆ, ಅಮಿತ್ ಶಾ ಬಳಿಗೆ ನಿಯೋಗ!

    ಆರ್. ಅಶೋಕ್ ಕಚೇರಿಯಲ್ಲಿ ಬಾಗಿಲು ಮುಚ್ಚಿ ಸಭೆ, ಅಮಿತ್ ಶಾ ಬಳಿಗೆ ನಿಯೋಗ!

    ವಿರೋಧ ಪಕ್ಷದ ನಾಯಕ ಆರ್.ಅಶೋಕ ಹಿಂದೂ ಫೈರ್ ಬ್ರಾಂಡ್ ನಾಯಕನನ್ನು ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಆದರೆ ಈ ವಿಚಾರದಲ್ಲಿ ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಅಂತಿಮ ತೀರ್ಮಾನ ಮಾಡಬೇಕಿದೆ.

    ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ ತಮ್ಮ ಕಚೇರಿಯಲ್ಲಿ ಮಾಡಿರುವ ಬಾಗಿಲು ಮುಚ್ಚಿದ ಸಭೆ ಕುತೂಹಲಕ್ಕೆ ಕಾರಣವಾಗಿದೆ.

    ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಳಗಾವಿಯಲ್ಲಿ ಮಾತನಾಡಿದ್ದು, “ಬಿಜೆಪಿಗೆ ವಾಪಸ್ ಬನ್ನಿ ಎಂದು ಆರ್.ಅಶೋಕ ಆಹ್ವಾನ ನೀಡಿದ್ದಾರೆ. ಅವರ ಕಚೇರಿಯಲ್ಲಿ ನಾವು ಬಾಗಿಲು ಮುಚ್ಚಿ ಸಭೆ ನಡೆಸಿದ್ದೇವೆ” ಎಂದು ಹೇಳಿದ್ದಾರೆ.

    “ಬಿಜೆಪಿ ಪಕ್ಷದ ಪರಿಸ್ಥಿತಿ ಕೆಟ್ಟಿದೆ. ಪಕ್ಷ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಹೊಂದಾಣಿಕೆಯಾಗಿದೆ” ಎಂದು ಆರೋಪಿಸಿದರು.

    “ಆರ್.ಅಶೋಕ ತಮ್ಮನ್ನು ಬಿಜೆಪಿಗೆ ವಾಪಸ್ ಬನ್ನಿ ಎಂದು ಆಹ್ವಾನಿಸಿದ್ದಾರೆ. ನನ್ನನ್ನು ಮುಖ್ಯಮಂತ್ತಿ ಮಾಡುತ್ತೇನೆ ಎಂದು ಹೇಳಿದರೆ ಮಾತ್ರ ಬಿಜೆಪಿಗೆ ವಾಪಸ್ ಹೋಗುತ್ತೇನೆ. ಅಮಿತ್ ಶಾ ಬಳಿ ನಿಯೋಗ ತೆಗೆದುಕೊಂಡು ಹೋಗೋಣ ಎಂದು ಅವರು ಹೇಳಿದ್ದಾರೆ” ಎಂದು ಯತ್ನಾಳ್ ತಿಳಿಸಿದರು.

    ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸದಾ ಟೀಕೆಗಳನ್ನು ಮಾಡುತ್ತಿದ್ದ, ವಿಜಯೇಂದ್ರ ಬದಲಾವಣೆ ಮಾಡಬೇಕು ಎಂದು ಹೋರಾಟ ಆರಂಭಿಸಿದ್ದ ಬಸನಗೌಡ ಪಾಟೀಲ್ ಯತ್ನಾಳ್‌ರನ್ನು ಪಕ್ಷದಿಂದ ಬಿಜೆಪಿ ಉಚ್ಛಾಟನೆ ಮಾಡಿದೆ.

    ಅಂದಿನಿಂದಲೂ ಅವರು ಬಿಜೆಪಿಗೆ ವಾಪಸ್ ಆಗುವ ಮಾತುಗಳನ್ನು ಆಡುತ್ತಿದ್ದಾರೆ. ಶ್ರೀರಂಗಪಟ್ಟಣದಲ್ಲಿ ತಾವು ಹೊಸ ಪಕ್ಷವನ್ನು ಸ್ಥಾಪನೆ ಮಾಡುತ್ತೇವೆ ಎಂದು ಹೇಳಿದ್ದರು. ಆದರೆ ಈಗ ಪುನಃ ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

    ಬಿಜೆಪಿ ನಾಯಕರ ವಿರುದ್ಧ ಸದಾ ವಾಗ್ದಾಳಿ ನಡೆಸುವ ಯತ್ನಾಳ್ ವಿಧಾನಸಭೆಯಲ್ಲಿ ಮಂಗಳವಾರ, “ನಾನು ನಿಜವಾದ ವಿರೋಧ ಪಕ್ಷದ ನಾಯಕ. ಉಪಾಧ್ಯಕ್ಷರ ಪಕ್ಕದ ಕುರ್ಚಿಯನ್ನು ನನಗೆ ನೀಡಿ” ಎಂದು ಬೇಡಿಕೆ ಇಟ್ಟಿದ್ದರು.

    “ಬಿ.ವೈ.ವಿಜಯೇಂದ್ರ ಟೀಕಿಸಿದ ಕಾರಣಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಮಾಡಲಾಗಿದೆ. ಇದು ದುರದೃಷ್ಟಕರ ಆದರೆ ಶೀಘ್ರದಲ್ಲೇ ಅದನ್ನು ಹಿಂಪಡೆಯಲಾಗುವುದು” ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದರು.

    ಈ ವರ್ಷದ ಮಾರ್ಚ್‌ನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಮಾಡಲಾಗಿತ್ತು. ಬಳಿಕ ಕರ್ನಾಟಕ ಬಿಜೆಪಿಯ ರೆಬಲ್ ಟೀಮ್ ಚಟುವಟಿಕೆ ಸ್ವಲ್ಪ ಕಡಿಮೆಯಾಗಿತ್ತು. ಆದರೆ ಈಗ ಮತ್ತೆ ರೆಬಲ್ ನಾಯಕರು ದೆಹಲಿಗೆ ಹೋಗಿ, ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿ ಎಂದು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.

    ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆಯಾದ ಬಳಿಕ ಮಾತನಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್ , “ಸತ್ಯವಂತರಿಗೆ ಇದು ಕಾಲವಲ್ಲ. ದುಷ್ಟ ಜನರಿಗೆ ಸುಭಿಕ್ಷಕಾಲ, ಉಪಕಾರ ಮಾಡಿದರೆ ಅಪಕರಿಸುವ ಕಾಲ. ಸಕಲವು ತಿಳಿದವನಿಗೆ ದುರ್ಭಿಕ್ಷ ಕಾಲ” ಎಂದು ಹೇಳಿದ್ದರು.

    “ನಾನು ಪಕ್ಷದೊಳಗಿನ ಸರ್ವಾಧಿಕಾರ, ಭ್ರಷ್ಟಾಚಾರದ ಕುರಿತು ಮಾತನಾಡಿದ್ದಕ್ಕೆ 6 ವರ್ಷ ಉಚ್ಛಾಚನೆ ಮಾಡಿದ್ದಾರೆ. ಪಕ್ಷದೊಳಗಿನ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ಅಜೆಂಡಾವನ್ನು ಯಶಸ್ವಿಯಾಗಿ ಸಾಧಿಸಿಕೊಂಡಿವೆ. ಈ ಉಚ್ಛಾಟನೆಯಿಂದ ನನ್ನ ಹೋರಾಟ ನಿಲ್ಲುವುದಿಲ್ಲ. ಭ್ರಷ್ಟಾಚಾರ, ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ ನಿರಂತರ” ಎಂದು ಹೇಳಿದ್ದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search