ಹಾಸನ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಇದೇ ಜನವರಿ.9ರಂದು ವಿರಾಟ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಪ್ರಮೋದ್ ಮುತಾಲಿಕ್ ಭಾಗವಹಿಸಿ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ಆರೋಪದ ಮೇಲೆ ಪ್ರಮೋದ್ ಸೇರಿದಂತೆ ಇನ್ನಿತರರ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಮೋದ್ ಮುತಾಲಿಕ್ ಸೇರಿದಂತೆ ಇನ್ನಿತರರ ವಿರುದ್ಧ ಸಕಲೇಶಪುರ ಠಾಣೆಗೆ ಎಂ.ಕೆ.ಶ್ರೀಧರ್ ಎಂಬುವವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ನೋಟಿಸ್ ನೀಡುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಏನಿದು ಪ್ರಕರಣ: ಸಕಲೇಶಪುರದಲ್ಲಿ ವಿರಾಟ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು, ದೇಶದಲ್ಲಿ ಅನ್ಯಧರ್ಮದವರಿಗಿಂತ ಹಿಂದೂಗಳೇ ಜಾಸ್ತಿ ಇರೋದು. ಆದರೆ ಇದ್ಯಾವುದು ಯಾರಿಗೂ ಕೂಡ ಅರ್ಥವಾಗುತ್ತಿಲ್ಲ. ದೇಶದ ಬೆಳವಣಿಗೆ ನೋಡಿಯಾದರೂ ಎಲ್ಲಾ ಹಿಂದೂಗಳು ಎಚ್ಚೆತ್ತುಕೊಳ್ಳಬೇಕಿದೆ ಎಂದು ಪ್ರಚೋದನಕಾರಿ ಭಾಷಣ ಮಾಡಿದ್ದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


