ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಕಿತ್ತಾಟ, ಪವರ್ ಶೇರಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ನೀವು ಒಗ್ಗಟ್ಟಿನ ಸರ್ಕಾರದ ಬಗ್ಗೆ ಪ್ರಶ್ನೆ ಕೇಳುತ್ತಿದ್ದೀರಿ. ನಮ್ಮದು ಒಗ್ಗಟ್ಟಿನ ಸರ್ಕಾರ. ನಮ್ಮಲ್ಲಿ ಒಗ್ಗಟ್ಟಿದೆ. ಏನೇ ಇದ್ದರೂ ಹೈಕಮಾಂಡ್‌ನಿಂದ ಸಂದೇಶ ಬರುತ್ತದೆ. ಇದೆಲ್ಲಾ ಒಂದು ಗುಂಪಿನ ಮಾಧ್ಯಮಗಳ ಸೃಷ್ಟಿಯಷ್ಟೇ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು ಸರ್ಕಾರದ ಗ್ಯಾರಂಟಿಗಳು ಜನರಲ್ಲಿ ವಿಶ್ವಾಸ ಮೂಡಿಸಿದೆ. ಆದರೆ ಬಿಜೆಪಿಯಲ್ಲಿ ಎಲ್ಲಾ ನಾಯಕರು ಭಿನ್ನಾಭಿಪ್ರಾಯ ಹೊಂದಿದ್ದಾರೆ. ಅವರು ತಮ್ಮ ಭಿನ್ನಾಭಿಪ್ರಾಯ ಮುಚ್ಚಿಕೊಳ್ಳಲು ಕಾಂಗ್ರೆಸ್ ಗ್ಯಾರಂಟಿಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಬಿಜೆಪಿಯವರಿಗೆ ಕಾಂಗ್ರೆಸ್ ಸರ್ಕಾರ, ಡಿಕೆಶಿ, ಸಿದ್ದರಾಮಯ್ಯ ವಿರುದ್ಧ ಅಟ್ಯಾಕ್ ಮಾಡಲು ಆಗುತ್ತಿಲ್ಲ. ಹಾಗಾಗಿ ಕರ್ನಾಟಕದ ಜನರ ಮೇಲೆ ರಾಜಕೀಯ ದಾಳಿ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಕರ್ನಾಟಕ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ದೇಶದ ದೊಡ್ಡ ರಾಜ್ಯವಾಗಿದೆ. ಇದರಿಂದ ಬಿಜೆಪಿಗೆ ಹತಾಶೆ ಶುರುವಾಗಿದೆ. ಅವರ ವೈಪಲ್ಯವನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ಮೇಲೆ ಆರೋ ಮಾಡುತ್ತದ್ದಾರೆ ಎಂದು ವಾಗ್ದಾಳಿ ನಡೆಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


