Tuesday, September 1, 2026
spot_img
More
    spot_img
    HomeTop Storyಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ; ಕಳೆದ 20 ದಿನಗಳಲ್ಲಿ ಸಂಗ್ರಹವಾಗಿದ್ದೆಷ್ಟು?

    ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ; ಕಳೆದ 20 ದಿನಗಳಲ್ಲಿ ಸಂಗ್ರಹವಾಗಿದ್ದೆಷ್ಟು?

    ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಕೇವಲ 20 ದಿನಗಳ ಅವಧಿಯಲ್ಲಿ 2.85 ಕೋಟಿ ರೂ. ಸಂಗ್ರಹವಾಗಿದೆ.

    Advertisement

    ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ(ಮಾರ್ಚ್‌.12) ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ ಕೇವಲ 20 ದಿನಗಳ ಅವಧಿಯಲ್ಲಿ 2. 85 ಕೋಟಿ ರೂ. ಸಂಗ್ರಹವಾಗಿದೆ.

    ಮಲೆ ಮಹದೇಶ್ವರ ಬೆಟ್ಟದಲ್ಲಿನ ಬಸ್ ನಿಲ್ದಾಣ ಸಮೀಪದ ವಾಣಿಜ್ಯ ಸಂಕೀರ್ಣದಲ್ಲಿ ನಿನ್ನೆ ರಾತ್ರಿ 8 ಗಂಟೆಗೆ ಎಣಿಕೆ ಕಾರ್ಯ ಮುಕ್ತಾಯಗೊಂಡಿದೆ. ಈ ಎಣಿಕೆಯಲ್ಲಿ 2,85,60,937 ರೂ. ನಗದು ಹಣ, 27 ಗ್ರಾಂ ಚಿನ್ನ ಹಾಗೂ 1800 ಗ್ರಾಂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಭಕ್ತರು ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಇನ್ನು ಶಿವರಾತ್ರಿ ಹಬ್ಬದ ವೇಳೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಅದ್ದೂರಿಯಾಗಿ ಜಾತ್ರೆ ನಡೆದಿತ್ತು. ಈ ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಭಾಗವಹಿಸಿ ಮಾದಪ್ಪನನ್ನು ಕಣ್ತುಂಬಿಕೊಂಡಿದ್ದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading