ಜೈಪುರ: ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ನ 28ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲಿಂಗ್ ಆರಿಸಿಕೊಂಡು ರಾಜಸ್ಥಾನ್ ರಾಯಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿರುವ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 173 ರನ್ ಕಲೆಹಾಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 174 ರನ್‌ಗಳ ಗುರಿಯನ್ನು ನೀಡಿದೆ.
ರಾಜಸ್ಥಾನ್ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ ಹಾಗೂ ನಾಯಕ ಸಂಜು ಸ್ಯಾಮ್ಸನ್ ಆರಂಭಿಕರಾಗಿ ಕಣಕ್ಕಿಳಿದರು. ಅಬ್ಬರದ ಆರಂಭ ಮಾಡದ ಈ ಜೋಡಿ ನಿಧಾನಗತಿಯಲ್ಲೇ ಇನ್ನಿಂಗ್ಸ್ ಆರಂಭಿಸಿತು. ಸಂಜು ಸ್ಯಾಮ್ಸನ್ 19 ರನ್ ಗಳಿಸಿ ಔಟ್ ಆದರೆ, ಯಶಸ್ವಿ ಜೈಸ್ವಾಲ್ 47 ಎಸೆತಗಳಲ್ಲಿ 10 ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ 75 ರನ್ ಬಾರಿಸಿದರು. ಇನ್ನುಳಿದಂತೆ ರಿಯಾನ್ ಪರಾಗ್ 30, ಶಿಮ್ರಾನ್ ಹೆಟ್ಮಾಯೆರ್ 9, ನಿತಿಶ್ ರಾಣಾ ಅಜೇಯ 4 ಹಾಗೂ ಧ್ರುವ್ ಜುರೆಲ್ ಅಜೇಯ 35 ರನ್ ಬಾರಿಸಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಭುನವೇಶ್ವರ್ ಕುಮಾರ್, ಯಶ್ ದಯಾಳ್, ಜೋಶ್ ಹೇಜಲ್‌ವುಡ್ ಹಾಗೂ ಕೃನಾಲ್ ಪಾಂಡ್ಯ ತಲಾ ಒಂದೊಂದು ವಿಕೆಟ್ ಪಡೆದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


