ಬೆಂಗಳೂರು: ಏ.3 ರಂದು ಸದ್ದುಗುಂಟೆ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭಾರತಿ ಬಡಾವಣೆಯ ಒಂದನೇ ಕ್ರಾಸ್‍ನಲ್ಲಿ ಬೆಳಗಿನ ಜಾವ 2 ಗಂಟೆ ಸುಮಾರಿಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಇಬ್ಬರು ಯುವತಿಯರ ಜೊತೆ ಅಪರಿಚಿತ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸಿದ್ದ ಆರೋಪಿ ಹತ್ತು ದಿನಗಳ ಬಳಿಕ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಅನುಚಿತ ವರ್ತನೆಯ ದೃಶ್ಯಗಳ ಆಧಾರದ ಮೇಲೆ ಸ್ಥಳೀಯ ವ್ಯಕ್ತಿ ಲೋಕೇಶ್‍ಗೌಡ ಎನ್ನುವವರು ಕಿಡಿಗೇಡಿ ವಿರುದ್ಧ ಸದ್ದುಗುಂಟೆಪಾಳ್ಯ ಪೊಲೀಸರಿಗೆ ದೂರು ನೀಡಿದ್ದರು.
ಈ ದೂರಿನ ಮೇರೆಗೆ ಕಾರ್ಯಪ್ರವೃತ್ತರಾದ ಪೊಲೀಸರು ಸದ್ಯ ಆರೋಪಿ ಸಂತೋಷ್‌ನನ್ನು ಕೇರಳದಲ್ಲಿ ಬಂಧಿಸಲಾಗಿದ್ದು, ಬೆಂಗಳೂರಿಗೆ ಕರೆ ತರಲಾಗುತ್ತಿದೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಈ ವಿಡಿಯೊ ಕುರಿತು ದೊಡ್ಡ ಮಟ್ಟದಲ್ಲಿ ಟೀಕೆಗಳು ವ್ಯಕ್ತವಾಗಿದ್ದವು.
ನಗರದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗಿದೆ, ಇಂತಹ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿದರೆ ಇತರರಿಗೂ ಬುದ್ಧಿ ಬರಲಿದೆ ಎಂದು ನೆಟ್ಟಿಗರು ದೊಡ್ಡ ಮಟ್ಟದಲ್ಲಿ ಸುದ್ದಿಯನ್ನು ವೈರಲ್ ಮಾಡಿದ್ದರು. ಹೀಗೆ ಭಾರೀ ಚರ್ಚೆಗೆ ಒಳಗಾಗಿದ್ದ ಈ ಪ್ರಕರಣದ ಆರೋಪಿ ಸದ್ಯ ಸಿಕ್ಕಿಬಿದ್ದಿದ್ದು, ವಿಚಾರಣೆ ವೇಳೆ ಏನೆಲ್ಲ ಮಾಹಿತಿ ಹೊರಬೀಳಲಿದೆ ಎಂಬುದನ್ನು ನೋಡಬೇಕಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


