Monday, August 3, 2026
spot_img
More
    spot_img
    HomeTop Storyಟೆಸ್ಟ್‌ ಕ್ರಿಕೆಟ್‌ ನಿವೃತ್ತಿ ಬೆನ್ನಲ್ಲೇ ವೃಂದಾವನಕ್ಕೆ ಪತ್ನಿ ಜತೆ ಭೇಟಿ ನೀಡಿದ ವಿರಾಟ್‌ ಕೊಹ್ಲಿ; ವಿಡಿಯೊ

    ಟೆಸ್ಟ್‌ ಕ್ರಿಕೆಟ್‌ ನಿವೃತ್ತಿ ಬೆನ್ನಲ್ಲೇ ವೃಂದಾವನಕ್ಕೆ ಪತ್ನಿ ಜತೆ ಭೇಟಿ ನೀಡಿದ ವಿರಾಟ್‌ ಕೊಹ್ಲಿ; ವಿಡಿಯೊ

    ವೃಂದಾವನ: ನಿನ್ನೆಯಷ್ಟೇ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ವಿರಾಟ್ ಕೊಹ್ಲಿ ಇಂದು ( ಮೇ 13 ) ತಮ್ಮ ಪತ್ನಿ ಅನುಷ್ಕಾ ಶರ್ಮಾ ಜತೆ ಉತ್ತರ ಪ್ರದೇಶದ ವೃಂದಾವನಕ್ಕೆ ಭೇಟಿ ನೀಡಿದ್ದಾರೆ. ದಂಪತಿಗಳು ಪ್ರಸಿದ್ಧ ಆಧ್ಯಾತ್ಮಿಕ ಗುರು ಪ್ರೇಮಾನಂದ್ ಜಿ ಮಹಾರಾಜ್ ಅವರ ಆಶೀರ್ವಾದ ಪಡೆದಿದ್ದಾರೆ.

    Advertisement

    ವೃಂದಾವನದಲ್ಲಿ, ಕೊಹ್ಲಿ ಮತ್ತು ಅನುಷ್ಕಾ ಅವರು ಪ್ರೇಮಾನಂದ್ ಜಿ ಮಹಾರಾಜ್ ಅವರ ಮುಂದೆ ಗೌರವದಿಂದ ಕುಳಿತು ಆಶೀರ್ವಾದ ಪಡೆದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ದಂಪತಿಗಳು ಇತ್ತೀಚಿನ ವರ್ಷಗಳಲ್ಲಿ ಆಧ್ಯಾತ್ಮಿಕತೆಯತ್ತ ಹೆಚ್ಚು ಒಲವು ತೋರಿದ್ದಾರೆ. 2023ರಲ್ಲಿ ಅವರು ಕೈಂಚಿ ಧಾಮದ ನೀಮ್ ಕರೋಲಿ ಬಾಬಾ ಆಶ್ರಮಕ್ಕೆ ಭೇಟಿ ನೀಡಿದ್ದರು.

    ಕೊಹ್ಲಿ ಅವರ ನಿವೃತ್ತಿಯು ಭಾರತೀಯ ಕ್ರಿಕೆಟ್‌ಗೆ ಒಂದು ದೊಡ್ಡ ಬದಲಾವಣೆಯನ್ನು ತರಲಿದೆ. ಜೂನ್ 20 ರಿಂದ ಇಂಗ್ಲೆಂಡ್ ವಿರುದ್ಧ ಆರಂಭವಾಗಲಿರುವ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಅವರ ಅನುಪಸ್ಥಿತಿಯು ತಂಡಕ್ಕೆ ಸವಾಲಾಗಲಿದೆ.

    ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ಒಟ್ಟು 123 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, 210 ಇನ್ನಿಂಗ್ಸ್‌ ಆಡಿ 9230 ರನ್‌ ಬಾರಿಸಿದ್ದಾರೆ. ಟೆಸ್ಟ್‌ನಲ್ಲಿ ಅಜೇಯ 254 ರನ್‌ ಗರಿಷ್ಟ ರನ್‌ ಬಾರಿಸಿರುವ ಕೊಹ್ಲಿ 30 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading