ಬೆಂಗಳೂರು;ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶುಕ್ರವಾರ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-2ರ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಾರಿ ಒಟ್ಟು 87,330 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಶೇಷವೆಂದರೆ, ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ಔಟ್ ಆಫ್ ಔಟ್ ಅಂಕ ಗಳಿಸಿದ್ದಾರೆ. ಈ ನಾಲ್ವರಲ್ಲಿ ಒಬ್ಬರು ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿದ್ದಾರೆ.2025ರ ಪರೀಕ್ಷೆ-2ನ್ನು ರಾಜ್ಯದ 967 ಕೇಂದ್ರಗಳಲ್ಲಿ ಮೇ 26ರಿಂದ ಜೂನ್ 2ರವರೆಗೆ ನಡೆಸಲಾಗಿತ್ತು.
ಸರ್ಕಾರಿ ಶಾಲೆಗಳ ಫಲಿತಾಂಶ ಉತ್ತಮವಾಗಿದ್ದು, ಸರ್ಕಾರಿ ಶಾಲೆಗಳಲ್ಲಿ ಉತ್ತೀರ್ಣತಾ ಪ್ರಮಾಣ ಶೇ. 36.65 ಆಗಿದೆ. ಇದು ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗಿಂತ ಹೆಚ್ಚಿನದು.ಈ ಬಾರಿ 11,818 ವಿದ್ಯಾರ್ಥಿಗಳು ಫಲಿತಾಂಶ ಉತ್ತಮಪಡಿಸಿಕೊಳ್ಳಲು ನೋಂದಾಯಿಸಿದ್ದರು. ಅವರಲ್ಲಿ 6,635 ವಿದ್ಯಾರ್ಥಿಗಳು (ಶೇ. 56.14) ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಂಡಿದ್ದಾರೆ. ಫಲಿತಾಂಶ ಉತ್ತಮಪಡಿಸಿಕೊಂಡ ವಿದ್ಯಾರ್ಥಿಗಳಲ್ಲಿ ಪ್ರಥಮ ಭಾಷೆಯಲ್ಲಿ 82, ದ್ವಿತೀಯ ಭಾಷೆಯಲ್ಲಿ 37, ತೃತೀಯ ಭಾಷೆಯಲ್ಲಿ 55, ಗಣಿತದಲ್ಲಿ 10, ವಿಜ್ಞಾನದಲ್ಲಿ 32 ಮತ್ತು ಸಮಾಜ ವಿಜ್ಞಾನದಲ್ಲಿ 44 ವಿದ್ಯಾರ್ಥಿಗಳು ಶೇ.100 ಅಂಕಗಳನ್ನು ಪಡೆದಿದ್ದಾರೆ.

2025ರ ಪರೀಕ್ಷೆ-1ರಲ್ಲಿ ಫಲಿತಾಂಶ ಪೂರ್ಣಗೊಳಿಸದ 2,78,355 ಶಾಲಾ ವಿದ್ಯಾರ್ಥಿಗಳು (Regular Freshers) ಪರೀಕ್ಷೆ-2ಕ್ಕೆ ಹಾಜರಾಗಿದ್ದಾರೆ. ಪ್ರತಿ ಜಿಲ್ಲೆಯ ಉಪನಿರ್ದೇಶಕರು, ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಮುಖ್ಯಶಿಕ್ಷಕರ ಸಮನ್ವಯದಿಂದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಯಿತು. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪತ್ರಿಕಾ ಪ್ರಕಟಣೆಗಳು ಹಾಗೂ ಗೋಷ್ಠಿಗಳನ್ನು ಆಯೋಜಿಸಲಾಗಿದ್ದು, ಇದರಿಂದ ಬಹುತೇಕ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿ ಹಾಜರಾಗುವಂತೆ ಪ್ರೋತ್ಸಾಹಿಸಲಾಯಿತು.ಶಾಲಾ ಹಂತದಲ್ಲಿ ಫಲಿತಾಂಶ ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಪರಿಹಾರ ಬೋಧನಾ ತರಗತಿಗಳನ್ನು (Remedial classes) ಕೂಡ ನಡೆಸಲಾಯಿತು.
ಫಲಿತಾಂಶವನ್ನು ಪರಿಶೀಲಿಸುವ ವಿಧಾನ:
ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.
ಮುಖ್ಯಪುಟದಲ್ಲಿ “Karnataka SSLC 2 Result 2025” ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ ನೋಂದಣಿ ಸಂಖ್ಯೆ (registration number) ಮತ್ತು ಜನ್ಮ ದಿನಾಂಕ (date of birth) ನಮೂದಿಸಿ, ನಂತರ ಸಬ್‌ಮಿಟ್ ಮಾಡಿ.
ನಿಮ್ಮ ಫಲಿತಾಂಶ ಪರದೆಯ ಮೇಲೆ ಕಾಣಿಸುತ್ತದೆ.
ವಿದ್ಯಾರ್ಥಿಗಳು ಫಲಿತಾಂಶವನ್ನು ಡೌನ್‌ಲೋಡ್ ಮಾಡಿ ಭವಿಷ್ಯಕ್ಕಾಗಿ ಉಳಿಸಿಕೊಳ್ಳಬಹುದು
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


