Tuesday, November 3, 2026
spot_img
More
    spot_img
    HomeTop Storyಏರ್‌ಇಂಡಿಯಾ ದುರಂತ: ಸುಟ್ಟು ಕರಕಲಾದ ಮೃತದೇಹಗಳನ್ನು ಸರಿಯಾಗಿ ಪತ್ತೆಹಚ್ಚಿ ಕುಟುಂಬದವರಿಗೆ ಕೊಡುವುದು ಹೇಗೆ?

    ಏರ್‌ಇಂಡಿಯಾ ದುರಂತ: ಸುಟ್ಟು ಕರಕಲಾದ ಮೃತದೇಹಗಳನ್ನು ಸರಿಯಾಗಿ ಪತ್ತೆಹಚ್ಚಿ ಕುಟುಂಬದವರಿಗೆ ಕೊಡುವುದು ಹೇಗೆ?

    ಅಹ್ಮದಾಬಾದ್:‌ ನಿನ್ನೆ ( ಜೂನ್‌ 12 ) ನಗರದಲ್ಲಿ ಸಂಭವಿಸಿದ ಮಹಾ ವಿಮಾನ ದುರಂತದಲ್ಲಿ 241 ಮಂದಿ ಮೃತಪಟ್ಟಿದ್ದಾರೆ. ಅಹ್ಮದಾಬಾದ್‌ನ ಸರ್ದಾರ್‌ ವಲ್ಲಭಭಾಯ್‌ ಪಟೇಲ್ ವಿಮಾನ ನಿಲ್ದಾಣದಿಂದ ಟೇಕ್‌ಆಫ್‌ ಆದ ಏರ್‌ಇಂಡಿಯಾ ( ಎಐ 171 ) ಕೆಲವೇ ಸೆಕೆಂಡುಗಳಲ್ಲಿ ಧರೆಗಪ್ಪಳಿಸಿತು.

    12 ಸಿಬ್ಬಂದಿಗಳು ಸೇರಿದಂತೆ ಒಟ್ಟು 242 ಮಂದಿಯನ್ನು ಹೊತ್ತೊಯ್ಯತ್ತಿದ್ದ ಈ ವಿಮಾನ ಮೇಘಾನಿ ನಗರ ಪ್ರದೇಶದಲ್ಲಿನ ಬಿಜೆ ಮೆಡಿಕಲ್‌ ಕಾಲೇಜಿನ ಹಾಸ್ಟೆಲ್‌ ಮೆಸ್‌ ಮೇಲೆ ಬಿದ್ದಿತ್ತು. ಈ ಅವಘಡದಲ್ಲಿ ಓರ್ವ ಪ್ರಯಾಣಿಕ ಮಾತ್ರ ಅಚ್ಚರಿ ಎಂಬಂತೆ ಬದುಕುಳಿದಿದ್ದು, ಉಳಿದ ಎಲ್ಲಾ 241 ಮಂದಿಯೂ ಮೃತಪಟ್ಟಿದ್ದಾರೆ. ಇನ್ನು ವಿಮಾನ ಬಿದ್ದ ರಭಸಕ್ಕೆ ಹಾಸ್ಟೆಲ್‌ನಲ್ಲಿ 24 ಮಂದಿ ಮೃತರಾಗಿದ್ದಾರೆ.

    ನಿನ್ನೆಯಿಂದ ರಕ್ಷಣಾ ದಳಗಳು ಮೃತದೇಹಗಳನ್ನು ಹೊರ ತೆಗೆಯಲಾಗುತ್ತಿದ್ದು, ಮೃತರ ಸಂಬಂಧಿಗಳು ತಮ್ಮವರ ಮೃತ ದೇಹ ಪಡೆಯುವುದಕ್ಕಾಗಿ ನಗರದ ಸಿವಿಲ್‌ ಆಸ್ಪತ್ರೆಗೆ ಬಂದಿದ್ದಾರೆ. ಆದರೆ ವಿಮಾನ ದುರಂತದಲ್ಲಿ ದೇಹಗಳು ಸುಟ್ಟು ಕರಕಲಾಗಿದ್ದು, ಯಾರ ದೇಹ ಯಾರದ್ದು ಎಂದು ಪತ್ತೆ ಹಚ್ಚುವುದು ಕಷ್ಟಕರವಾಗಿದೆ.

    ಹೀಗಾಗಿ ಸಂಬಂಧಿಕರ ಡಿಎನ್‌ಎ ಸ್ಯಾಂಪಲ್‌ಗಳನ್ನು ಪಡೆಯಲಾಗುತ್ತಿದೆ. ಈಗಾಗಲೇ ಎಲ್ಲ ಮೃತ ದೇಹಗಳ ಡಿಎನ್‌ಎ ಮಾದರಿಯನ್ನು ಸಂಗ್ರಹಿಸಲಾಗಿದ್ದು, ಅವುಗಳನ್ನು ಹೋಲಿಕೆ ಮಾಡಿ ದೇಹವನ್ನು ಹಸ್ತಾಂತರ ಮಾಡಲಾಗುತ್ತದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search