ಲಂಡನ್: ಕ್ರಿಕೆಟ್ ಕಾಶಿ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದು, ದಕ್ಷಿಣ ಆಫ್ರಿಕಾಗೆ ಆಸ್ಟ್ರೇಲಿಯಾ 282 ರನ್‌ಗಳ ಗುರಿಯನ್ನು ನೀಡಿದೆ.
ಟಾಸ್ ಸೋತು ಬೌಲಿಂಗ್ ಆರಿಸಿಕೊಂಡ ದಕ್ಷಿಣ ಆಫ್ರಿಕಾ ಎದುರಾಳಿ ಆಸ್ಟ್ರೇಲಿಯಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 212 ರನ್‌ಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು ಆಲ್‌ಔಟ್ ಆಗಿತ್ತು. ಬಳಿಕ ದಕ್ಷಿಣ ಆಫ್ರಿಕಾ 138 ರನ್‌ಗಳಿಗೆ ಆಲ್‌ಔಟ್ ಆಗುವ ಮೂಲಕ 74 ರನ್‌ಗಳ ಹಿನ್ನಡೆ ಅನುಭವಿಸಿತು.
ಹೀಗೆ ಲೀಡ್‌ನೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ 207 ರನ್‌ಗಳಿಗೆ ಆಲ್‌ಔಟ್ ಆಗಿದೆ. ಈ ಮೂಲಕ 282 ರನ್‌ಗಳ ಸವಾಲಿನ ಗುರಿಯನ್ನು ನೀಡಿದೆ. ಇನ್ನು ಇಂದು ( ಜೂನ್ 13 ) ಮೂರನೇ ದಿನದಾಟ ನಡೆಯುತ್ತಿದ್ದು, ದಕ್ಷಿಣ ಆಫ್ರಿಕಾ ಕೈನಲ್ಲಿ ಎರಡೂವರೆ ದಿನವಿದೆ. ಹೀಗಾಗಿ ಎಚ್ಚರಿಕೆಯಿಂದ ಆಟವನ್ನಾಡಿದರೆ ದಕ್ಷಿಣ ಆಫ್ರಿಕಾ ಐತಿಹಾಸಿಕ ದಾಖಲೆ ಬರೆಯಲಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


