ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬದಲಾವಣೆ ಗಾಳಿ ಜೋರಾಗಿಯೇ ಬೀಸುತ್ತಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಚರ್ಚೆಗಳು ಏರ್ಪಟ್ಟಿದ್ದು, ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆಗಳು ಸ್ವತಃ ಪಕ್ಷದ ಶಾಸಕರಿಂದಲೇ ಕೇಳಿಬಂದಿದೆ.
ಅಲ್ಲದೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಸಹ ಬೆಂಗಳೂರಿಗೆ ಆಗಮಿಸಿ ಶಾಸಕರ ಜತೆ ಚರ್ಚಿಸಿ ಅಸಮಾಧಾನ ತಿಳಿಗೊಳಿಸಲು ಮುಂದಾಗಿದ್ದಾರೆ.
ಇದರ ಬೆನ್ನಲ್ಲೇ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ದೆಹಲಿ ಭೇಟಿ ನೀಡಿ ಹೈಕಮಾಂಡ್ ಭೇಟಿಯಾಗಿದ್ದು, ಈ ಭೇಟಿ ಬಳಿಕ ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕುರಿತು ಬಿಜೆಪಿ ಶಾಸಕ ಸುರೇಶ್ ಕುಮಾರ್ ಮಾತನಾಡಿದ್ದು, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಡಿಕೆ ಶಿವಕುಮಾರ್ ಅವರಿಂದ, ಒಂದೆಡೆ ಸಿದ್ದರಾಮಯ್ಯ ಈ ಅವಧಿ ಪೂರ್ತಿ ನಾನೇ ಸಿಎಂ ಅಂತಾರೆ, ಸತೀಶ್ ಜಾರಕಿಹೊಳಿ 2028ಕ್ಕೆ ನಾನೇ ಸಿಎಂ ಅಂತಾರೆ, ಇವರ ನಡುವೆ ಡಿಕೆ ಶಿವಕುಮಾರ್ ಕಡ್ಲಿಕಾಯಿ ತಿನ್ನಬೇಕಾ? ಎಂದು ಪ್ರಶ್ನೆ ಹಾಕಿದ್ದಾರೆ.
ಪೊಲೀಸ್ ಮುಂದೆ ಬಂದಿರುವ ಹೆಣ ಹೂಳುತ್ತಿದ್ದ ವ್ಯಕ್ತಿ ಯಾರು? ಧರ್ಮಸ್ಥಳದಿಂದ ಆತ ತಪ್ಪಿಸಿಕೊಂಡಿದ್ದೇಗೆ?
ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


