ಮುಂಬೈ: ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್‌ನಿಂದ ಜೂನ್ ವರೆಗಿನ ಅವಧಿ) ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ವಹಿವಾಟುಗಳಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ ಎರಡನೇ ಸ್ಥಾನ ಅಲಂಕರಿಸಿದೆ.
ನಂತರದ ಸ್ಥಾನಗಳಲ್ಲಿ ಉತ್ತರ ಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ಇವೆ. ಮೇ ತಿಂಗಳಲ್ಲಿ ಮೊದಲ 4 ರಾಜ್ಯಗಳು ಒಟ್ಟು 10 ಲಕ್ಷಕ್ಕೂ ಹೆಚ್ಚು ವಹಿವಾಟುಗಳನ್ನು ಮಾಡಿದ್ದರೆ, ಜೂನ್‌ನಲ್ಲಿ ಈ ಸಂಖ್ಯೆ ಕಡಿಮೆಯಾಗಿದೆ.
ದೇಶಾದ್ಯಂತ ಒಂದು ತಿಂಗಳಲ್ಲಿ 24 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಯುಪಿಐ ವಹಿವಾಟು ನಡೆಯುತ್ತದೆ. ಮೇ ತಿಂಗಳಲ್ಲಿ ಮಹಾರಾಷ್ಟ್ರ 3 ಲಕ್ಷ ಕೋಟಿ ರೂ. ಮೌಲ್ಯದ ಯುಪಿಐ ವಹಿವಾಟು ನಡೆಸಿದ್ದರೆ, ಕರ್ನಾಟಕ ಸುಮಾರು 2 ಲಕ್ಷ ಕೋಟಿ ರೂ. ವಹಿವಾಟು ದಾಖಲಿಸಿದೆ. ಉತ್ತರ ಪ್ರದೇಶದಲ್ಲಿ 1.8 ಲಕ್ಷ ಕೋಟಿ ರೂ., ತೆಲಂಗಾಣದಲ್ಲಿ 1.75 ಲಕ್ಷ ಕೋಟಿ ರೂ. ಮೌಲ್ಯದ ಯುಪಿಐ ವಹಿವಾಟುಗಳು ನಡೆದಿವೆ.
ಭಾರತ vs ಇಂಗ್ಲೆಂಡ್ 3ನೇ ಟೆಸ್ಟ್: ಅಲ್ಪಮೊತ್ತಕ್ಕೆ ಕುಸಿದ ಇಂಗ್ಲೆಂಡ್; ಭಾರತಕ್ಕೆ ಸುಲಭ ಗುರಿ
ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


