Friday, November 6, 2026
spot_img
More
    spot_img
    HomeLatest newsಮತ್ತೆ ಚುರುಕುಗೊಂಡ ಮುಂಗಾರು; ರಾಜ್ಯದಲ್ಲಿ ಇನ್ನೂ ಎಷ್ಟು ದಿನ ಮಳೆಯಾಗಲಿದೆ ಗೊತ್ತಾ?

    ಮತ್ತೆ ಚುರುಕುಗೊಂಡ ಮುಂಗಾರು; ರಾಜ್ಯದಲ್ಲಿ ಇನ್ನೂ ಎಷ್ಟು ದಿನ ಮಳೆಯಾಗಲಿದೆ ಗೊತ್ತಾ?

    ಬೆಂಗಳೂರು: ರಾಜ್ಯದಲ್ಲಿ ಇನ್ನೊಂದು ವಾರ ಕಾಲ ಮುಂಗಾರು ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ. ಕಳೆದ ವಾರ ದುರ್ಬಲಗೊಂಡಿದ್ದ ನೈರುತ್ಯ ಮುಂಗಾರು ಕ್ರಿಯಾಶೀಲವಾಗಿದ್ದು, ಇನ್ನೊಂದು ವಾರ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ.

    ಮತ್ತೆ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ. ಆದರೆ, ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಾಣ ಮಳೆಯಾಗುವ ಲಕ್ಷಣಗಳು ಕಂಡುಬಂದಿವೆ.

    ರಾಜ್ಯದ ಒಳನಾಡಿನಲ್ಲಿ ಮಳೆ ಕೊರತೆಯಿಂದ ಮುಂಗಾರು ಹಂಗಾಮಿನ ಬಿತ್ತನೆಗೆ ಹಿನ್ನಡೆಯಾಗಿತ್ತು. ಅದರಲ್ಲೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜೂನ್‌ ತಿಂಗಳಲ್ಲಿ ಮಳೆ ಕೊರತೆ ಉಂಟಾಗಿತ್ತು. ಜೂನ್‌ ತಿಂಗಳಿನಂತೆಯೇ ಜುಲೈ ತಿಂಗಳ ಎರಡು ವಾರಗಳಲ್ಲಿ ಮಳೆ ಪ್ರಮಾಣ ವಾಡಿಕೆಗಿಂತ ಕಡಿಮೆಯಾಗಿದೆ. ಹೀಗಾಗಿ ರೈತ ಸಮುದಾಯ ಬಿತ್ತನೆಗಾಗಿ ಮಳೆಯನ್ನೇ ಎದುರು ನೋಡುತ್ತಿದ್ದಾರೆ.

    ಅರಬ್ಬಿ ಸಮುದ್ರದಲ್ಲಿ ಟ್ರಫ್‌ ನಿರ್ಮಾಣವಾಗಿರುವ ಪರಿಣಾಮ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ. ಕರ್ನಾಟ ಮತ್ತು ಮಹಾರಾಷ್ಟ್ರದ ಕರಾವಳಿ ಉದ್ದಕ್ಕೂ ಟ್ರಫ್‌ ನಿರ್ಮಾಣವಾಗಿದ್ದು, ಪಶ್ಚಿಮದಿಂದ ಪೂರ್ವಾಭಿಮುಖವಾಗಿ ಬಲವಾದ ಗಾಳಿ ಅಂದರೆ ಪ್ರತಿ ಗಂಟೆಗೆ ಸುಮಾರು 40 ಕಿ.ಮೀ. ವೇಗದಲ್ಲಿ ಬೀಸಲಿದೆ.

    ಟ್ರಫ್‌ನ ಪ್ರಭಾವದಿಂದ ಜುಲೈ.18ವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ.

    ಕರಾವಳಿಯ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಭಾರಿ ಮಳೆಯಾಗಲಿದ್ದು, ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಜು.16ರಿಂದ 18ರವರೆಗೆ ಮೂರು ದಿನಗಳ ಕಾಲ ಆರೆಂಜ್‌ ಅಲರ್ಟ್‌ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

    ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ. ಒಳನಾಡಿನಲ್ಲಿ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. ನಾಳೆಯಿಂದ ಜು.18ರವರೆಗೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡುಗು ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್‌ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ರಾಜಧಾನಿ ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಹೆಚ್ಚು ಕಡಿಮೆ ಮುಂದಿನ ಐದು ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಲಿದೆ. ಕೆಲವೆಡೆ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಅವರು ಹೇಳಿದ್ದಾರೆ.

    ಸಿದ್ದರಾಮಯ್ಯ, ಸತೀಶ್‌ ಜಾರಕಿಹೊಳಿ ನಾನು ಅಂತಾರೆ, ಡಿಕೆಶಿ ಕಡ್ಲೆಕಾಯಿ ತಿನ್ನಬೇಕಾ?; ಬಿಜೆಪಿ ಶಾಸಕ ಗರಂ

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search