Monday, November 2, 2026
spot_img
More
    spot_img
    HomeLatest newsʼಮೈಸೂರು ಮಿತ್ರʼ ಸಂಸ್ಥಾಪಕ ಕೆ.ಬಿ ಗಣಪತಿ ನಿಧನ

    ʼಮೈಸೂರು ಮಿತ್ರʼ ಸಂಸ್ಥಾಪಕ ಕೆ.ಬಿ ಗಣಪತಿ ನಿಧನ

    ಮೈಸೂರು: ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ.ಗಣಪತಿ (85) ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ನಿಧನರಾದರು.

    ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ. ಗಣಪತಿ ಮೂಲತಃ ಕೊಡಗಿನವರು. ತಮ್ಮದೇ ಅಂಕಣದ ಮೂಲಕ ಗಮನ ಸೆಳೆದಿದ್ದ ಗಣಪತಿ ಅವರು, ಸದಾ ಸುದ್ದಿ ಮನೆಯಲ್ಲಿ ಕ್ರೀಯಾಶೀವಾಗಿದ್ದವರು.

    ಹಿರಿಯ ಪತ್ರಕರ್ತರಾದ ಕೆ.ಬಿ.ಗಣಪತಿ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

    ಘನತೆಯಿಂದ ಪತ್ರಿಕೋದ್ಯಮ ನಡೆಸಿದ ಗಣಪತಿ ಅವರ ನಿಧನದಿಂದ ಸುದ್ದಿಮನೆಯ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶೋಕಿಸಿದ್ದಾರೆ. ಗಣಪತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

    ಇಂದು ಮಧ್ಯಾಹ್ನ 3 ಗಂಟೆಯವರಗೆ ಕೆ.ಬಿ.ಗಣಪತಿ ಅವರ ಮೈಸೂರಿನ ಜೆ.ಸಿ.ನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶವಿದ್ದು, ನಂತರ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸ್ಮಶಾನದಲ್ಲಿ ಅಂತಿಮ ಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿವೆ.

    ಪೊಲೀಸ್‌ ಮುಂದೆ ಬಂದಿರುವ ಹೆಣ ಹೂಳುತ್ತಿದ್ದ ವ್ಯಕ್ತಿ ಯಾರು? ಧರ್ಮಸ್ಥಳದಿಂದ ಆತ ತಪ್ಪಿಸಿಕೊಂಡಿದ್ದೇಗೆ?

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search