ಶಿವಮೊಗ್ಗ: ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬ ನುಂಗಿದ್ದ ಮೊಬೈಲ್ ಫೋನ್ ಅನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಲಾಗಿದೆ. ದೌಲತ್ ಅಲಿಯಾಸ್ ಗುಂಡ(30) ಮೊಬೈಲ್ ನುಂಗಿದ್ದ ಕೈದಿ.
ಪ್ರಕರಣವೊಂದರಲ್ಲಿ ಶಿವಮೊಗ್ಗ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಜೈಲಧಿಕಾರಿಗಳ ತಪಾಸಣೆ ವೇಳೆ ಮೊಬೈಲ್ ಬಳಸುತ್ತಿರುವುದು ಗೊತ್ತಾಗಬಾರದೆಂಬ ಕಾರಣಕ್ಕೆ ಜೂ.24ರಂದು ಕೀ-ಪ್ಯಾಡ್ ಮೊಬೈಲ್ ನುಂಗಿದ್ದ. ಬಳಿಕ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಆತ ಜೈಲಿನ ಆಸ್ಪತ್ರೆಗೆ ತೆರಳಿದ್ದಾಗ ಕಲ್ಲು ನುಂಗಿದ್ದಾಗಿ ವೈದ್ಯರಿಗೆ ತಿಳಿಸಿದ್ದ. ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ಕಳಿಸಿಕೊಟ್ಟಿದ್ದರು.
ಎಕ್ಸರೇ ಮಾಡಿಸಿದಾಗ ಹೊಟ್ಟೆಯಲ್ಲಿ ವಸ್ತುವೊಂದು ಇರುವುದು ದೃಢಪಟ್ಟಿತ್ತು. ಜೂ.27ರಂದು ಆತನಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದು, ಹೊಟ್ಟೆಯಲ್ಲಿದ್ದ ಒಂದು ಇಂಚು ಅಗಲ, ಮೂರು ಇಂಚು ಉದ್ದದ ಮೊಬೈಲ್ ಫೋನ್ ಹೊರತೆಗೆಯಲಾಗಿದೆ.
ಒಳರೋಗಿಯಾಗಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿರುವ ದೌಲತ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜೈಲಿನೊಳಗೆ ಮೊಬೈಲ್ ಫೋನ್ ನಿಷೇಧವಿದ್ದರೂ ಆತ ಬಳಕೆ ಮಾಡುತ್ತಿದ್ದ ಬಗ್ಗೆ ಹಾಗೂ ಮೊಬೈಲ್ ತಲುಪಿದ ಕುರಿತು ತನಿಖೆ ನಡೆಸುವಂತೆ ಕೇಂದ್ರ ಕಾರಾಗೃಹದ ಅಧೀಕ್ಷಕ ಪಿ.ರಂಗನಾಥ್ ತುಂಗಾನಗರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮತ್ತೆ ಚುರುಕುಗೊಂಡ ಮುಂಗಾರು; ರಾಜ್ಯದಲ್ಲಿ ಇನ್ನೂ ಎಷ್ಟು ದಿನ ಮಳೆಯಾಗಲಿದೆ ಗೊತ್ತಾ?
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


