Tuesday, June 2, 2026
spot_img
More
    spot_img
    HomeStateDistrictಸುಬ್ರಹ್ಮಣ್ಯ: ಜ್ವರ ಎಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ನೀಡಿದ ವೈದ್ಯ!

    ಸುಬ್ರಹ್ಮಣ್ಯ: ಜ್ವರ ಎಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ನೀಡಿದ ವೈದ್ಯ!

    ಸುಬ್ರಹ್ಮಣ್ಯ: ಜ್ವರಕ್ಕೆ ಚಿಕಿತ್ಸೆ ಪಡೆಯಲು ಬಂದ ಬಾಲಕಿಯನ್ನು ಪರಿಶೀಲಿಸಿದ ವೈದ್ಯಾಧಿಕಾರಿ ಆಕೆ ಗರ್ಭಿಣಿ ಎಂಬ ತಪ್ಪು ವರದಿ ನೀಡಿದ್ದ ಹಿನ್ನೆಲೆ ವೈದ್ಯರ ವಿರುದ್ಧ ಆರೋಗ್ಯ ಇಲಾಖೆಗೆ ದೂರು ನೀಡಲಾಗಿದೆ.

    Advertisement

    ಸುಳ್ಯ ತಾಲೂಕಿನ ಗ್ರಾಮವೊಂದರ 13 ವರ್ಷದ ಬಾಲಕಿ ಜ್ವರದ ಹಿನ್ನೆಲೆ ಚಿಕಿತ್ಸೆಗಾಗಿ ಶನಿವಾರ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದರು. ತಪಾಸಣೆ ಮಾಡಿದ ವೈದ್ಯಾಧಿಕಾರಿ, ಮೂತ್ರ ಮತ್ತು ರಕ್ತ ಪರೀಕ್ಷೆಗೆ ಲ್ಯಾಬ್‌ಗೆ ಚೀಟಿ ನೀಡಿದ್ದರು. ತಪಾಸಣೆ ನಂತರ ಯುಪಿಟಿ ಪಾಸಿಟಿವ್ (ಗರ್ಭಿಣಿ) ಎಂದು ಬರೆದು, ಇನ್ನಷ್ಟು ತಪಾಸಣೆಗಾಗಿ ಸುಳ್ಯ ಸರ್ಕಾರಿ ಆಸ್ಪತ್ರೆಗೆ ರೆಫರ್ ಮಾಡಿದ್ದರು.

    ತಬ್ಬಿಬ್ಬಾದ ಬಾಲಕಿಯ ಹೆತ್ತವರು ಆಕೆ ಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ಮಾಡಿಸಿದಾಗ ಮಗಳು ಗರ್ಭಿಣಿ ಅಲ್ಲ ಎಂಬ ವರದಿ ಲಭಿಸಿದೆ. ಸುಳ್ಳು ಮಾಹಿತಿಯಿಂದಾಗಿ ನಮ್ಮ ಕುಟುಂಬಕ್ಕೆ ಭಾರಿ ಮಾನಸಿಕ ನೋವನ್ನು ಉಂಟುಮಾಡಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಬಾಲಕಿಯ ಹೆತ್ತವರು ದೂರು ನೀಡಿದ್ದಾರೆ. ಈ ಹಿನ್ನೆಲೆ ಆರೋಗ್ಯಾಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ.

    ಮತ್ತೆ ಚುರುಕುಗೊಂಡ ಮುಂಗಾರು; ರಾಜ್ಯದಲ್ಲಿ ಇನ್ನೂ ಎಷ್ಟು ದಿನ ಮಳೆಯಾಗಲಿದೆ ಗೊತ್ತಾ?

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಕಾಕ್ರೋಚ್ ಜನತಾ ಪಾರ್ಟಿ: ಸಾಮಾಜಿಕ ಜಾಲತಾಣದಲ್ಲಿ ಬಿರುಗಾಳಿ ಎಬ್ಬಿಸಿದ ವೈರಲ್ ಟ್ರೆಂಡ್!

    ಕಾಕ್ರೋಚ್ ಜನತಾ ಪಾರ್ಟಿ ಎಂಬ ಪದ ಸಾಮಾಜಿಕ ಜಾಲತಾಣದಲ್ಲಿ ಯಾವಾಗ, ಹೇಗೆ ವೈರಲ್ ಆಯಿತು? ಈ ಟ್ರೆಂಡ್ ಹಿಂದಿನ ಸಂಪೂರ್ಣ ಕಥೆ ಓದಿ.

    ಬೆಂಗಳೂರಿನಲ್ಲಿ ಮುಂಗಾರು ಆರ್ಭಟ: ಆಲಿಕಲ್ಲು ಮಳೆ, ಗುಡುಗು-ಸಿಡಿಲಿಗೆ ನಗರ ತತ್ತರ

    ಬೆಂಗಳೂರು: ಸಂಜೆ ಐಟಿ ರಾಜಧಾನಿ ಬೆಂಗಳೂರಿನ ಮೇಲೆ ಪ್ರಕೃತಿ ತನ್ನ ಕೋಪವನ್ನು ಸಂಪೂರ್ಣವಾಗಿ ತೋರಿಸಿತು. ಕಾರ್ಮೋಡ ಕವಿದ ಆಕಾಶದಿಂದ ಮೊದಲು ಗುಡುಗು-ಸಿಡಿಲಿನ ಆರ್ಭಟ, ಬಳಿಕ ಆಲಿಕಲ್ಲು ಮಳೆ ಮತ್ತು ಜೋರು ಗಾಳಿ ನಗರವನ್ನು...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading