Tuesday, November 3, 2026
spot_img
More
    spot_img
    HomeLatest newsಇ-ಸ್ವತ್ತು ಮೂಲಕ ನಮೂನೆ 11 ಬಿ ಖಾತೆ ವಿತರಿಸಲು ಕ್ರಮ: ಪ್ರಿಯಾಂಕ್‌ ಖರ್ಗೆ

    ಇ-ಸ್ವತ್ತು ಮೂಲಕ ನಮೂನೆ 11 ಬಿ ಖಾತೆ ವಿತರಿಸಲು ಕ್ರಮ: ಪ್ರಿಯಾಂಕ್‌ ಖರ್ಗೆ

    ಬೆಂಗಳೂರು: ಇನ್ನು ಒಂದೂವರೆ ತಿಂಗಳಲ್ಲಿ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ 11 ಬಿ ಖಾತೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಗೆ ತಿಳಿಸಿದರು.

    ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಆರ್.ಪಾಟೀಲ್ ಯತ್ನಾಳ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್‍ರಾಜ್ ತಿದ್ದುಪಡಿ ವಿಧೇಯಕಕ್ಕೆ ಸಂಬಂಧಿಸಿದಂತೆ 29 ಆಕ್ಷೇಪಣೆಗಳು ಬಂದಿದ್ದು, ಅವುಗಳನ್ನು ಪರಿಶೀಲಿಸಿ ಇನ್ನು 15 ದಿನಗಳಲ್ಲಿ ನಿಯಮಗಳನ್ನು ರೂಪಿಸಲಾಗುವುದು. ಸದ್ಯಕ್ಕೆ ನಮೂನೆ 11, ಬಿ ಖಾತೆ ನೀಡುತ್ತಿಲ್ಲ ಎಂದರು.

    ಕಳೆದ ಎರಡು ವರ್ಷದಲ್ಲಿ 1237 ಕೋಟಿ ರೂ. ತೆರಿಗೆ ಸಂಗ್ರಹಿಸಲಾಗಿದೆ. ಇದು ದೇಶದಲ್ಲೇ ರಾಜ್ಯ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಗ್ರಹಿಸಿದ ಅತಿಹೆಚ್ಚು ತೆರಿಗೆಯಾಗಿದೆ. ಈ ತೆರಿಗೆ ಹಣವನ್ನು ಪಂಚಾಯ್ತಿಗಳ ಅಭಿವೃದ್ಧಿಗೆ ಬಳಕೆ ಮಾಡಲಾಗುತ್ತದೆ ಎಂದು ಹೇಳಿದರು.
    ಇ-ಸ್ವತ್ತು ಸಮಸ್ಯೆಗಳ ಸುಧಾರಣೆಗೆ ಸಮಿತಿ ರಚಿಸಲಾಗಿದೆ. ಅಲ್ಲದೆ ದಿಶಾಂಕ ಆ?ಯಪ್ ಲೋಪದೋಷಗಳನ್ನು ಗಮನಕ್ಕೆ ತಂದರೆ ಸರಿಪಡಿಸಲಾಗುವುದು ಎಂದು ಅವರು ತಿಳಿಸಿದರು.

    ಪಂಚಾಯ್ತಿ ವ್ಯಾಪ್ತಿಯಲ್ಲಿ ಮೈಕ್ರೋಗ್ರಿಡ್
    ರಾಜ್ಯದ ಎಲ್ಲಾ ಪಂಚಾಯ್ತಿಗಳಲ್ಲೂ ಮೈಕ್ರೋಗ್ರಿಡ್ ಪರಿಕಲ್ಪನೆ ಜಾರಿಗೆ ತಂದು ವಿದ್ಯುತ್ ಖರೀದಿಸಲಾಗುವುದು. ಈ ಮೈಕ್ರೋಗ್ರಿಡ್ ವಿನೂತನ ಯೋಜನೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಟೆಂಡರ್ ಕರೆಯಲಾಗಿದೆ. ಈ ಯೋಜನೆಯಡಿ ಬೀದಿದೀಪ, ಪಂಚಾಯ್ತಿ ಕಚೇರಿಗಳಿಗೆ ವಿದ್ಯುತ್ ಬಳಕೆ ಮಾಡಿ ಉಳಿದ ವಿದ್ಯುತ್‍ನ್ನು ಗ್ರಿಡ್‍ಗೆ ಒಪ್ಪಿಸಲಾಗುವುದು ಎಂದರು.

    ಬಿಜೆಪಿ ಶಾಸಕ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಖರ್ಗೆ, ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಕ್ರಮಬದ್ಧ ಆಸ್ತಿಗಳಿಗೆ ನಿಗದಿತ ನಮೂನೆ 9 ಹಾಗೂ 11ಎಗಳನ್ನು ನೀಡಲಾಗುತ್ತಿದ್ದು, ಕ್ರಮಬದ್ಧವಲ್ಲದ ಆಸ್ತಿಗಳಿಗೆ ನಮೂನೆ 11ಬಿ ಅನ್ನು ಪಂಚಾಯ್ತಿ ಅಭಿವೃದ್ದಿ ಅಧಿಕಾರಿಯ ಡಿಜಿಟಲ್ ಸಹಿ ಮೂಲಕ ವಿತರಿಸಲಾಗುತ್ತಿದೆ ಎಂದು ಹೇಳಿದರು.

    ಕೆಲ ಸಮುದಾಯ, ಪಂಗಡಗಳ ಆಚರಣೆಯಿಂದ ಬಾಲ್ಯವಿವಾಹ ಹೆಚ್ಚು: ಲಕ್ಷ್ಮಿ ಹೆಬ್ಬಾಳ್ಕರ್‌

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search