Monday, November 2, 2026
spot_img
More
    spot_img
    HomeLatest newsಪ್ರತಿ ವರ್ಷ ರಸ್ತೆ ಅಪಘಾತಗಳಿಂದ ರಾಜ್ಯದಲ್ಲಿ ಎಷ್ಟು ಮಂದಿ ಸಾವು? ಸಾರಿಗೆ ಸಚಿವರ ಮಾಹಿತಿ

    ಪ್ರತಿ ವರ್ಷ ರಸ್ತೆ ಅಪಘಾತಗಳಿಂದ ರಾಜ್ಯದಲ್ಲಿ ಎಷ್ಟು ಮಂದಿ ಸಾವು? ಸಾರಿಗೆ ಸಚಿವರ ಮಾಹಿತಿ

    ಬೆಂಗಳೂರು: ರಾಜ್ಯದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಗಳಿಂದ 1 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‍ಗೆ ತಿಳಿಸಿದರು.

    ಸದಸ್ಯ ನವೀನ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ದ್ವಿಚಕ್ರ ವಾಹನ, ಬಸ್, ಕಾರು, ಟ್ರ್ಯಾಕ್ಟರ್ ಮತ್ತಿತರ ವಾಹನಗಳ ಅಪಘಾತದಿಂದ ದೇಶಾದ್ಯಂತ 1,25,000 ಜನ ಸಾವನ್ನಪ್ಪಿದರೆ, ರಾಜ್ಯದಲ್ಲಿ ಸಾವಿರಕ್ಕೂ ಅಧಿಕ ಜನ ಸಾಯುತ್ತಾರೆ ಎಂದು ಹೇಳಿದರು.

    ಅಪಘಾತಗಳ ಪ್ರಕರಣಗಳನ್ನು ತಡೆಗಟ್ಟಲು ನಾವು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಕಟ್ಟುನಿಟ್ಟಿನ ದಂಡ ವಿಧಿಸುವುದು, ಡಿಎಲ್ ರದ್ದುಪಡಿಸುವುದು, ಕಾನೂನು ಕ್ರಮಗಳಂತಹ ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದರೂ ಅಪಘಾತಗಳು ಕಡಿಮೆಯಾಗುತ್ತಿಲ್ಲ ಎಂದು ವಿಷಾದಿಸಿದರು.

    ಶಾಲಾ ಕಾಲೇಜುಗಳಲ್ಲಿ ಮಕ್ಕಳು ಮತ್ತು ವಿದ್ಯಾರ್ಥಿಗಳಿಂದ ಜಾಗೃತಿ ಅಭಿಯಾನ, ಮದ್ಯಪಾನ ಮಾಡಿ ವಾಹನ ಚಾಲನೆ ನಿಷೇಧ, ವೀಲ್ಹಿಂಗ್ ಮಾಡಿದವರ ಡಿಎಲ್ ರದ್ದು ಸೇರಿದಂತೆ ಹತ್ತಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ನಾವು ಎಷ್ಟೇ ಕಾನೂನು ಕ್ರಮ ವಿಧಿಸಿದರೂ ಜನರಲ್ಲಿ ಜಾಗೃತಿ ಬರದೆ ಇದ್ದರೆ ನಾವೇನು ಮಾಡಲು ಸಾಧ್ಯ? ಎಂದರು.

    ರಾಜ್ಯದಲ್ಲಿ 1,30,000 ದ್ವಿಚಕ್ರ ವಾಹನಗಳು, 1,25,000 ಮೋಟಾರ್ ವಾಹನಗಳು, 28 ಲಕ್ಷ ಸಾರಿಗೆ ಬಸ್‍ಗಳಿವೆ ಎಂದು ಮಾಹಿತಿ ನೀಡಿದರು.

    ಸದಸ್ಯ ಸುನೀಲ್ ವಲ್ಯಾಪುರೆ ಅವರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ತಿಂಗಳ ಅಂತ್ಯಕ್ಕೆ ಸುಮಾರು 175 ವಿದ್ಯುತ್ ಚಾಲಿತ ವಾಹನಗಳನ್ನು ಖರೀದಿ ಮಾಡಲು ನಿರ್ಧರಿಸಿದ್ದೇವೆ ಎಂದರು.

    ಕೆಎಸ್‍ಆರ್‍ಟಿಸಿಯಿಂದ 100 ಬಸ್‍ಗಳು, ಕಲ್ಯಾಣ ಕರ್ನಾಟಕಕ್ಕೆ 65 ಹಾಗೂ ಕಿತ್ತೂರು ಕರ್ನಾಟಕಕ್ಕೆ 15 ವಿದ್ಯುತ್ ಚಾಲಿತ ಬಸ್‍ಗಳು ಸಂಚಾರ ಮಾಡಲಿವೆ. ಈ ಭಾಗಕ್ಕೆ ಹೆಚ್ಚಿನ ವಿದ್ಯುತ್ ಚಾಲಿತ ಬಸ್‍ಗಳನ್ನು ಖರೀದಿ ಮಾಡಲು ಟೆಂಡರ್ ಕರೆಯಲಾಗಿತ್ತು. ಆದರೆ ಟೆಂಡರ್‍ನಲ್ಲಿ ಭಾಗವಹಿಸಿರಲಿಲ್ಲ ಎಂದು ಮಾಹಿತಿ ನೀಡಿದರು.

    ಧರ್ಮಸ್ಥಳ: ಅಪಪ್ರಚಾರ ಮಾಡುವವರನ್ನು ಗುಂಡಿಕ್ಕಿ ಕೊಲ್ಲಬೇಕು; ರೇಣುಕಾಚಾರ್ಯ ಕಿಡಿ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search