Thursday, November 5, 2026
spot_img
More
    spot_img
    HomeLatest newsಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಯಲ್ಲಿ ಅನ್ಯಾಯ ಆರೋಪ; ಲಕ್ಷ್ಮಿ ಹೆಬ್ಬಾಳ್ಕರ್‌ ಪ್ರತಿಕ್ರಿಯೆ

    ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಯಲ್ಲಿ ಅನ್ಯಾಯ ಆರೋಪ; ಲಕ್ಷ್ಮಿ ಹೆಬ್ಬಾಳ್ಕರ್‌ ಪ್ರತಿಕ್ರಿಯೆ

    ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಯಲ್ಲಿ ಯಾವುದೇ ರೀತಿಯ ಅನ್ಯಾಯವಾಗಿಲ್ಲ. ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯಲ್ಲಿ ಪಾರದರ್ಶಕವಾಗಿ ಆಯ್ಕೆ ನಡೆದಿದೆ. ಆಯ್ಕೆಯಲ್ಲಿ ಯಾವುದೇ ಹಸ್ತಕ್ಷೇಪ ಆಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದರು.

    ಮಳೆಗಾಲದ ಅಧಿವೇಶನದ ಮೂರನೇ ದಿನವಾದ ಬುಧವಾರ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ವಿಧಾನಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉಡುಪಿ ಜಿಲ್ಲೆಯಲ್ಲಿ 52 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಈ ಪೈಕಿ 51 ಮಂದಿಗೆ ಆದೇಶ ಪತ್ರ ನೀಡಲಾಗಿದೆ. ಓರ್ವ ಅಭ್ಯರ್ಥಿ ವಿದ್ಯಾ ಗೋವಿಂದ್ ಪೂಜಾರಿ ಅವರ ಆಯ್ಕೆಗೆ ಆಕ್ಷೇಪಣೆ ಬಂದ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ತಡೆಹಿಡಿಯಲಾಗಿತ್ತು. ಇದೀಗ ಅವರಿಗೂ ಆದೇಶ ಪತ್ರ ನೀಡಲಾಗಿದೆ ಎಂದು ಉತ್ತರಿಸಿದರು.

    ಎಲ್ಲರಿಗೂ ನ್ಯಾಯ ಒದಗಿಸಿಕೊಡುವುದೇ ನಮ್ಮ ಸರ್ಕಾರದ ಉದ್ದೇಶ, ಶಿಕ್ಷಕರ ಆಯ್ಕೆಯಲ್ಲಿ ಯಾವುದೇ ಹಸ್ತಕ್ಷೇಪ ನಡೆದಿಲ್ಲ. ಯಾವುದೇ ಒತ್ತಡಕ್ಕೂ ಮಣಿದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

    ಗುಡ್ಡಗಾಡು ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು (ಮಡಿಕೇರಿ) ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ವಾಸಸ್ಥಳದಿಂದ ಅಂಗನವಾಡಿ ಕೇಂದ್ರಕ್ಕೆ ಇರುವ ಅಂತರವನ್ನು 3 ಕಿಲೋಮೀಟರ್‍ನಿಂದ 5 ಕಿಲೋಮೀಟರ್‍ವರೆಗೆ ವಿಸ್ತರಿಸಲಾಗಿದೆ ಎಂದು ಸಚಿವರು ಉತ್ತರಿಸಿದರು.

    ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವಾವಧಿಯಲ್ಲಿ 2 ಸ್ಥಾನಪಲ್ಲಟಗಳಿಗೆ ಅವಕಾಶವಿರುವುದನ್ನು ಮಾರ್ಪಾಡು ಮಾಡಿ ತುರ್ತು ಸಂದರ್ಭಗಳಲ್ಲಿ 3ನೇ ಸ್ಥಾನಪಲ್ಲಟ್ಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

    ಧರ್ಮಸ್ಥಳ: 8 ಶವಗಳನ್ನು ಹೂತಿದ್ದೆ ಎಂದಿದ್ದ 13ನೇ ಪಾಯಿಂಟ್‌ ಶೋಧ ಪೂರ್ಣ; ಸಿಕ್ಕಿದ್ದೇನು?

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search