ಪ್ರಧಾನಿ ನರೇಂದ್ರ ಮೋದಿ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಬೆಳ್ಳೆ ಗಣೇಶನ ಪ್ರತಿಮೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಶಾಸಕ ತಂದಿರುವ ಬೆಳ್ಳಿ ಗಣಪತಿ ಪ್ರತಿಯಮೆಯನ್ನು ಡಿಕೆ ಶಿವಕುಮಾರ್ ಮೋದಿಗೆ ಕೊಟ್ಟು ಕ್ರೆಡಿಟ್ ತೆಗೆದುಕೊಂಡಿದ್ದಾರೆ ಅಂತೆಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಆಗುತ್ತಿವೆ. ಇದಕ್ಕೆ ಇದೀಗ ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣಗಳ ಮೂಲಕವೇ ಸ್ಪಷ್ಟನೆ ನೀಡಿದ್ದಾರೆ.
ಬೇರೆಯವರ ಉಡುಗೊರೆಯನ್ನು ಮತ್ತೊಬ್ಬರಿಗೆ ನೀಡುವ ದುಸ್ಥಿತಿ ಬಂದಿಲ್ಲ. ನಾನು ಪ್ರಧಾನಿ ಅವರಿಗೆ ನೀಡಿದ ಪ್ರತಿಮೆ ಬಿಜೆಪಿ ಶಾಸಕ ಎಂ ಕೃಷ್ಣಪ್ಪ ಅವರು ತಂದದ್ದು ಎಂಬ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ವರದಿ ಸತ್ಯಕ್ಕೆ ದೂರವಾದದ್ದು ಹಾಗೂ ಸಂಪೂರ್ಣ ಸುಳ್ಳು. ಆ ಪ್ರತಿಮೆಯನ್ನು ನನ್ನ ಸ್ವಂತ ಹಣದಿಂದ ಖರೀದಿಸಿದ್ದಾಗಿದೆ. ಇದಕ್ಕೆ ಇಲಾಖೆಯ ಹಣವನ್ನೂ ಬಳಸಿಲ್ಲ. ಮನೆಯಿಂದ ತೆಗೆದುಕೊಂಡು ಹೋಗಿ, ಕಚೇರಿ ಸಿಬ್ಬಂದಿ ಮೂಲಕ ಎಸ್‌ಪಿಜಿ ತಪಾಸಣೆಗೆ ಒಳಪಡಿಸಿ ಪ್ರಧಾನಿಯವರಿಗೆ ನೀಡಲಾಯಿತು ಎಂದಿದ್ದಾರೆ. ಈ ಮೂಲಕ ಗಣೇಶನ ಪ್ರತಿಮೆ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ಈ ಸಂಬಂಧ ವಿವರಣೆ ನೀಡಿದ್ದು, ವಾಸ್ತವವಾಗಿ ಡಿಸಿಎಂ ಅವರೇ ಆ ಬೆಳ್ಳಿ ಗಣಪತಿ ವಿಗ್ರಹವನ್ನು ಅವರ ಮನೆಯಿಂದ ತೆಗೆದುಕೊಂಡು ಬಂದದ್ದು. ಅವರ ಕಚೇರಿ ಸಿಬ್ಬಂದಿಯೇ ಪ್ರಧಾನಿಯವರ ಭದ್ರತೆ ಹೊಣೆ ಹೊತ್ತ ಎಸ್ಪಿಜಿಯವರಿಗೆ ಕೊಟ್ಟು ತಪಾಸಣೆ ನಡೆಸಿದ್ದು, ಎಸ್ಪಿಜಿ ಸಿಬ್ಬಂದಿಯೇ ಈ ವಿಗ್ರಹವನ್ನು ಪ್ರಧಾನಿ ಅವರಿಗೆ ಡಿಸಿಎಂ ಅವರು ನೀಡಲು ನೆರವಾದದ್ದು.
ಶಾಸಕ ಎಂ. ಕೃಷ್ಣಪ್ಪ ಅವರೇ ನನಗೆ ದೂರವಾಣಿ ಕರೆ ಮಾಡಿ, “ಪೇಪರ್ ನಲ್ಲಿ ಸುಳ್ಳು ಸುದ್ದಿ ಹಾಕಿದ್ದಾರೆ. ನಾನು ಯಾರಿಗೂ ಈ ರೀತಿ ಹೇಳಿಲ್ಲ. ನಾನು ಸ್ಟೇಜ್ ಮೇಲೆ ಹೋಗೋಕೇ ಅವಕಾಶ ಇರಲಿಲ್ಲ. ಇನ್ನು ಪ್ರಧಾನಿಗೆ ಗಣೇಶ ವಿಗ್ರಹ ಹೇಗೆ ಕೊಡಲಿ? ಈ ಬಗ್ಗೆ ಸುದ್ದಿ ಮಾಡಿದವರಿಗೆ ಸ್ಪಷ್ಟನೆ ಕೊಡ್ತೇನೆ” ಅಂತ ಹೇಳಿದ್ರು. ಹಾಗಾದರೆ ಈ ಸುದ್ದಿ ಸೃಷ್ಟಿಯಾದದ್ದು ಹೇಗೆ? ಸುದ್ದಿ ಕೆತ್ತುವ ಮುನ್ನ ಖಚಿತ ಮಾಡಿಕೊಳ್ಳಬೇಕು ಎನ್ನುವ ಸಾಮಾನ್ಯ ಪರಿಜ್ಞಾನ ಬೇಡವೇ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


