Sunday, November 1, 2026
spot_img
More
    spot_img
    Homeimp newsಕರ್ನಾಟಕದ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆ

    ಕರ್ನಾಟಕದ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆ

    ಕರಾವಳಿ ಜಿಲ್ಲೆಗಳಲ್ಲಿ 18 ರವರೆಗೆ ಭಾರೀ ಮಳೆಯಾಗಲಿದೆ. ಮುಂದಿನ 24 ಗಂಟೆಗಳ ಕಾಲ ಬೆಂಗಳೂರಿಗೆ ಐಎಂಡಿ ಯೆಲ್ಲೋ ಅಲರ್ಟ್ ನೀಡಿದೆ. ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಇಲ್ಲಿನ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರಲಿದೆ.ಮುಂದಿನ ಒಂದು ವಾರದವರೆಗೆ ಕರ್ನಾಟಕದ 19 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.

    ವಿಜಯನಗರ, ಶಿವಮೊಗ್ಗ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮತ್ತು ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಳಕಲ್, ಗಂಗಾವತಿ, ಗಬ್ಬೂರು, ತಾವರಗೇರಾ, ಸಿದ್ದಾಪುರ, ಶೋರಾಪುರ, ಸೈದಾಪುರ, ಕಿಬ್ಬನಹಳ್ಳಿ, ಕದ್ರಾ, ಹುನಗುಂದ, ಗುಬ್ಬಿ, ದಾವಣಗೆರೆ, ಭದ್ರಾವತಿ, ಆಳಂದ, ಶಿರಾಲಿ, ಶಕ್ತಿನಗರ, ಮಂಕಿ, ಕುಮಟಾ, ಜೇವರ್ಗಿ, ಗುಳೇಗೋಡು, ಗೋಕರ್ಣ, ಗಂಗಾಪುರ, ಚಿತ್ತಾಪುರ ಮತ್ತು ಚಿಟಗುಪ್ಪದಲ್ಲಿ ಕೂಡ ಮಳೆಯಾಗಿದೆ.

    ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಒಂದು ವಾರದ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ 19ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 19ರಿಂದ ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ. ಯೆಲ್ಲೋ ಅಲರ್ಟ್ ಘೋಷಿಸಲಾಗಿರುವ ಜಿಲ್ಲೆಗಳೆಂದರೆ ವಿಜಯನಗರ, ಶಿವಮೊಗ್ಗ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ.ಆಗಸ್ಟ್‌ 17 ಮತ್ತು18 ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅತಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದೆ

    ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಪ್ರತಿದಿನವೂ ಮಳೆಯಾಗುತ್ತಿದೆ. ಇಂದು ಕೂಡ ಮೋಡಕವಿದ ವಾತಾವರಣದ ನಡುವೆ ಬೆಳಗ್ಗಿನಿಂದಲೇ ತುಂತುರು ಮಳೆ ಆರಂಭವಾಗಿದೆ. ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸುತ್ತಿದೆ.ಎಚ್‌ಎಎಲ್‌ನಲ್ಲಿ ಗರಿಷ್ಠ ತಾಪಮಾನ 28.0°ಸೆ., ಕನಿಷ್ಠ 19.9°ಸೆ. ದಾಖಲಾಗಿದೆ. ನಗರದ ಕೇಂದ್ರ ಭಾಗದಲ್ಲಿ ಗರಿಷ್ಠ 27.2°ಸೆ., ಕನಿಷ್ಠ 20.2°ಸೆ. ದಾಖಲಾಗಿದೆ. ಕೆಐಎಎಲ್‌ನಲ್ಲಿ ಗರಿಷ್ಠ 27.1°ಸೆ., ಕನಿಷ್ಠ 20.4°ಸೆ., ಜಿಕೆವಿಕೆಯಲ್ಲಿ ಗರಿಷ್ಠ 27.8°ಸೆ., ಕನಿಷ್ಠ 18.8°ಸೆ. ತಾಪಮಾನ ದಾಖಲಿಸಲಾಗಿದೆ.

    ಆ.13ರಿಂದ ಕರ್ನಾಟಕದಲ್ಲಿ ವ್ಯಾಪಕ ಮಳೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search