ಬೆಂಗಳೂರು: ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು 1,150 ಪುಟಗಳ ಚಾರ್ಜ್ಶೀಟ್ ಅನ್ನು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಈ ಚಾರ್ಜ್ಶೀಟ್ನಲ್ಲಿ ಓಂ ಪ್ರಕಾಶ್ ಅವರ ಪುತ್ರಿ ಕೃತಿಕಾ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.
ಚಾರ್ಜ್ ಶೀಟ್ ನಲ್ಲಿ ಓಂ ಪ್ರಕಾಶ್ ಪುತ್ರಿ ಕೃತಿಕಾ ಹೆಸರು ಕೈಬಿಡಲಾಗಿದ್ದು, ತನಿಖೆ ವೇಳೆ ಕೃತಿಕಾ ಪಾತ್ರ ಕಂಡುಬಾರದ ಹಿನ್ನೆಲೆಯಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಕೊಲೆ ನಡೆದ ಸಮಯದಲ್ಲಿ ಅವರು ಮನೆಯ ಮೇಲ್ಮಹಡಿಯಲ್ಲಿ ಇದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.ಏಪ್ರಿಲ್ 22 ರಂದು ನಿವೃತ್ತ ಐಜಿ ಮತ್ತು ಡಿಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶಿಸಿತ್ತು. ಹೆಚ್ ಎಸ್ ಆರ್ ಲೇಔಟ್ ನಲ್ಲಿರುವಂತ ಅವರ ಮನೆಯಲ್ಲಿ ರಕ್ತದ ಮಡುವಿನಲ್ಲಿ ಓಂ ಪ್ರಕಾಶ್ ಅವರ ಮೃತದೇಹ ಪತ್ತೆಯಾಗಿತ್ತು. ತನಿಖೆ ನಡೆಸಿದಂತ ಪೊಲೀಸರಿಗೆ ಸ್ಥಳದಲ್ಲಿ ಖಾರದಪುಡಿ ಡಬ್ಬಿ, ಚಾಕು ಪತ್ತೆಯಾಗಿತ್ತು. ಈ ಸಂಬಂಧ ಪೊಲೀಸರು ಪತ್ನಿ ಪಲ್ಲವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
ಗತ ಏಪ್ರಿಲ್ 20ರಂದು ಹೆಚ್ಎಸ್ಆರ್ ಲೇಔಟ್ನ ಮನೆಯಲ್ಲಿ ಓಂ ಪ್ರಕಾಶ್ ಅವರನ್ನು ಅವರ ಪತ್ನಿ ಪಲ್ಲವಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದರು. ಘಟನಾ ಸ್ಥಳದಿಂದ ಸಿಸಿಬಿ ಪೊಲೀಸರು ರಕ್ತದ ಕಲೆಗಳು, ಚಾಕುವಿನ ಮೇಲಿನ ಫಿಂಗರ್ಪ್ರಿಂಟ್, ಗೋಡೆಗಳ ಮೇಲಿನ ರಕ್ತದ ಗುರುತು ಸೇರಿದಂತೆ ವೈಜ್ಞಾನಿಕ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಪ್ರಕರಣವನ್ನು ರಾಜ್ಯ ಸರ್ಕಾರವು ಸಿಸಿಬಿಗೆ ವರ್ಗಾಯಿಸಿದ್ದಲ್ಲದೆ, ತನಿಖೆ ಪೂರ್ಣಗೊಂಡ ಬಳಿಕ ಪಲ್ಲವಿಯ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲಾಗಿದೆ.
ಧರ್ಮಸ್ಥಳ ನಿಗೂಢ ಸಾವಿನ ಪ್ರಕರಣ: ತನಿಖೆ ಅಂತಿಮ ಹಂತದಲ್ಲಿ, ದಿನವೂ ಲಕ್ಷಾಂತರ ವೆಚ್ಚ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


