ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಇದೇ ಆ.15ರಿಂದ ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‍ಗೆ ತಿಳಿಸಿದರು.
ಸದಸ್ಯ ಮಧುಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮುಜರಾಯಿ ಇಲಾಖೆಯು ಆ.15ರಿಂದ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಿ, ಆದೇಶ ಹೊರಡಿಸಲಾಗುವುದು. ಬಳಕೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.
ದೇವಸ್ಥಾನದ ಒಳಗಡೆ ಮುಜರಾಯಿ ಇಲಾಖೆಯವರು ನಿಷೇಧ ಮಾಡಲು ಅವಕಾಶವಿದೆ. ಆವರಣದ ಒಳಗಡೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಬೇಕು. ಪ್ಲಾಸ್ಟಿಕ್ ಬಳಕೆಯಿಂದ ಪರಿಸರ, ಮಾನವನ ಆರೋಗ್ಯದ ಮೇಲ ದುಷ್ಪರಿಣಾಮ ಬೀರುತ್ತಿರುವುದರಿಂದ ಇದನ್ನು ನಿಷೇಧ ಮಾಡುತ್ತಿರುವುದಾಗಿ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.
ಮುಜರಾಯಿ ದೇವಸ್ಥಾನಗಳ ನಿರ್ವಹಣೆಗಾಗಿ ಧಾರ್ಮಿಕ ಪರಿಷತ್‍ಗಳನ್ನು ನಿರ್ಮಿಸಲಾಗಿದೆ. ಈ ಸಮಿತಿಗೆ ಮುಜರಾಯಿ ಸಚಿವರು ಅಧ್ಯಕ್ಷರಾಗಿರುತ್ತಾರೆ. ಎ ಗ್ರೇಡ್, ಬಿ ಗ್ರೇಡ್, ಸಿ ಗ್ರೇಡ್ ದೇವಸ್ಥಾನಗಳನ್ನು ನಿರ್ವಹಣೆ ಮಾಡಲಾಗುತ್ತದೆ ಎಂದರು.
ಇ-ಸ್ವತ್ತು ಮೂಲಕ ನಮೂನೆ 11 ಬಿ ಖಾತೆ ವಿತರಿಸಲು ಕ್ರಮ: ಪ್ರಿಯಾಂಕ್ ಖರ್ಗೆ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


