ನವದೆಹಲಿ: ಹಾಸನದಲ್ಲಿ ಗಣೇಶ ಮೆರವಣಿಗೆ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ರಾಜ್ಯದ ಹಾಸನದಲ್ಲಿ ನಡೆದ ಘಟನೆ ಹೃದಯ ವಿದ್ರಾವಕ. ಈ ದುರಂತದ ಸಮಯದಲ್ಲಿ ನನ್ನ ಆಲೋಚನೆಗಳು ಮೃತರ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಬೇಕೆಂದು ಭಾವಿಸುತ್ತೇನೆ. ಮೃತ ಪ್ರತಿ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ ಪರಿಹಾರ ನೀಡಲಾಗುವುದು.
ಗಾಯಾಳುಗಳಿಗೆ 50,000ರೂ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಹಾಸನದಲ್ಲಿ ಗಣಪತಿ ವಿಸರ್ಜನೆ ವೇಳೆ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ್ದು, ಸಂಭ್ರಮದಿಂದ ಕುಣಿದು ಕುಪ್ಪಳಿಸುತ್ತಿದ್ದ ಜನರ ಮೇಲೆ ಏಕಾಏಕಿ ಟ್ರಕ್ ನುಗ್ಗಿದೆ. ಪರಿಣಾಮ ೯ ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ನೂತನ ಉಪರಾಷ್ಟ್ರಪತಿ ಪೊನ್ನಸ್ವಾಮಿ ರಾಧಾಕೃಷ್ಣನ್ ಹಿನ್ನೆಲೆ ಇಲ್ಲಿದೆ
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


