Monday, November 9, 2026
spot_img
More
    spot_img
    HomeLatest newsರಾಜ್ಯದಲ್ಲಿ 1 ಲಕ್ಷ ಕೋಟಿ ಮೊತ್ತದ ಗಣಿ ಹಗರಣ ನಡೆದಿದೆ: ಸಿಎಂಗೆ ಪತ್ರ ಬರೆದ ಕೈ...

    ರಾಜ್ಯದಲ್ಲಿ 1 ಲಕ್ಷ ಕೋಟಿ ಮೊತ್ತದ ಗಣಿ ಹಗರಣ ನಡೆದಿದೆ: ಸಿಎಂಗೆ ಪತ್ರ ಬರೆದ ಕೈ ಮುಖಂಡರು

    ಬೆಂಗಳೂರು: ರಾಜ್ಯದಲ್ಲಿ 1 ಲಕ್ಷ ಕೋಟಿ ಮೊತ್ತದ ಗಣಿ ಹಗರಣ ನಡೆದಿದೆ. ಈ ಸಂಬಂಧ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಕೋರಿ ಕಾಂಗ್ರೆಸ್ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

    ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಎಚ್.ಎಂ.ರೇವಣ್ಣ, ಡಾ.ಸಿ.ಎಸ್.ದ್ವಾರಕಾನಾಥ್, ವಿ.ಆರ್.ಸುದರ್ಶನ್, ಡಾ.ಎಲ್.ಹನುಮಂತಯ್ಯ, ಮೋಹನ್ ಕೊಂಡಜ್ಜಿ ಅವರು ಪತ್ರ ಬರೆದಿದ್ದಾರೆ.

    ಅಕ್ರಮ ಗಣಿಗಾರಿಕೆ ವಿಚಾರದ ಕುರಿತು ಅಧ್ಯಯನ ನಡೆಸಲು ಕಾನೂನು ಸಚಿವ ಎಚ್.ಕೆ. ಪಾಟೀಲ್ ನೇತೃತ್ವದಲ್ಲಿ ರಚಿಸಲಾಗಿದ್ದ ಸಂಪುಟ ಉಪ ಸಮಿತಿ ಸರಕಾರಕ್ಕೆ ಸಲ್ಲಿಸಿದ ವರದಿಯಂತೆ 1 ಲಕ್ಷ ಕೋಟಿ ರೂ.ಗೂ ಅಧಿಕ ಬೆಲೆ ಬಾಳುವ ಕಬ್ಬಿಣದ ಅದಿರನ್ನು ಲೂಟಿ ಮಾಡಿರುವುದು ತಿಳಿದು ಬಂದಿದೆಎಚ್.ಕೆ.ಪಾಟೀಲ್ ನೇತೃತ್ವದ ಸಂಪುಟ ಉಪ ಸಮಿತಿ ವರದಿಯನ್ನು ರಾಜ್ಯ ಸರಕಾರ ಸ್ವೀಕರಿಸಿದ್ದರೂ ಇದುವರೆಗೂ ಯಾವುದೇ ಕ್ರಮವಹಿಸಿಲ್ಲ. ಆದ್ದರಿಂದ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

    ಕೆಲವು ವ್ಯಕ್ತಿ, ಸಂಘ-ಸಂಸ್ಥೆಗಳು, ರಾಜಕಾರಣಿಗಳು ಮತ್ತು ಅಧಿಕಾರಿಗಳ ಸಹಕಾರದಿಂದ ಅಕ್ರಮವಾಗಿ 1ಲಕ್ಷ ಕೋಟಿ ರೂ. ಬೆಲೆಬಾಳುವ ಕಬ್ಬಿಣದ ಅದಿರನ್ನು ಲೂಟಿ ಮಾಡಿ, ಸರಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡಿದ್ದಾರೆ. ಆದ್ದರಿಂದ ಕಾನೂನು ಸಚಿವ ಎಚ್.ಕೆ.ಪಾಟೀಲ್ ನೇತೃತ್ವದ ಸಂಪುಟ ಉಪ ಸಮಿತಿ ನೀಡಿರುವ ವರದಿಯಂತೆ ತಪ್ಪಿತಸ್ಥರು ಯಾವುದೇ ಪಕ್ಷದವರಾಗಿದ್ದರೂ, ಯಾವುದೇ ಅಧಿಕಾರಿಗಳಾಗಿರಲಿ, ಯಾವುದೇ ಸಂಘ-ಸಂಸ್ಥೆಯವರಾಗಿರಲಿ ಅಂತವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

    ರಾಜ್ಯದ ಬಳ್ಳಾರಿ, ತುಮಕೂರು, ಚಿತ್ರದುರ್ಗ ಮತ್ತು ಇನ್ನಿತರ ಭಾಗಗಳಲ್ಲಿ ಅತ್ಯಂತ ಉತ್ಕೃಷ್ಟವಾದ ಕಬ್ಬಿಣದ ಅದಿರು ಲಭ್ಯವಾಗುತ್ತಿರುವುದನ್ನು ಗಮನಿಸಿದ ಕೆಲವು ಗಣಿ ಮಾಲೀಕರು 2000 ಇಸವಿಯಿಂದ ಅಕ್ರಮವಾಗಿ ಗಣಿ ಲೂಟಿ ಮಾಡುತ್ತಿದ್ದರು. ಇದನ್ನು ಗಮನಿಸಿದ ಕಾಂಗ್ರೆಸ್ ಪಕ್ಷದ ನಾಯಕತ್ವವು ವಿಧಾನ ಪರಿಷತ್‍ನಲ್ಲಿ ಹೋರಾಟ ಮಾಡಿ ಹಗರಣವನ್ನು ನ್ಯಾ. ಮೂರ್ತಿ ಯು.ಎಲ್ ಭಟ್ ಆಯೋಗಕ್ಕೆ ತನಿಖೆ ಮಾಡಲು ಒಪ್ಪಿಸಲಾಗಿತ್ತು.

    ಭಟ್ ಅವರ ಆಯೋಗವು ಒದೊಂದು ಅಂತರರಾಜ್ಯ ಮತ್ತು ಅಂತಾರಾಷ್ಟ್ರೀಯ ಹಗರಣವಾಗಿರುವುದರಿಂದ ಸಿಬಿಐ ತನಿಖೆಗೆ ವಹಿಸುವುದು ಸೂಕ್ತವೆಂದು ಆದೇಶ ಮಾಡಿತ್ತು. ಆದರೆ, ಅದನ್ನ ಅಂದಿನ ರಾಜ್ಯ ಸರ್ಕಾರ ಒಪ್ಪಿರಲಿಲ್ಲ. ಅದನ್ನು ವಿರೋಧಿಸಿ ವಿಧಾನ ಪರಿಷತ್ತಿನಲ್ಲಿ ಮತ್ತೆ ಕಾಂಗ್ರೆಸ್ ಪಕ್ಷದ ನಾಯಕತ್ವ ಮಾಡಿದ ಹೋರಾಟದಿಂದ ಅಂದಿನ ಸರ್ಕಾರ ಈ ಹಗರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಲಾಗಿತ್ತು.

    ಆ ಮಧ್ಯೆ ಕಾಂಗ್ರೆಸ್ ಪಕ್ಷದಿಂದ `ಸತ್ಯ ಶೋಧನಾ ಸಮಿತಿ’ಯನ್ನು ವಿ.ಎಸ್. ಉಗ್ರಪ್ಪನವರ ನೇತೃತ್ವದಲ್ಲಿ ಬಸವರಾಜ ರಾಯರೆಡ್ಡಿ, ಅಮರೇಗೌಡ ಬಯ್ಯಾಮರ, ವಿ.ಮುನಿಯಪ್ಪ, ಕೆ. ಶಿವಮೂರ್ತಿ ನಾಯಕ್ ಅವರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಯಿತು. ಆ ಸಮಿತಿಯು ಅಕ್ರಮ ಗಣಿಗಾರಿಕೆಯ ಪೂರ್ಣ ಮಾಹಿತಿಯನ್ನು ಸಂಗ್ರಹಿಸಿ. 2008ರ ನವೆಂಬರ್ 16ರಂದು ವರದಿ ನೀಡಿ. ಹತ್ತಾರು ಸಾವಿರ ಕೋಟಿ ಮೌಲ್ಯದ ಕಬ್ಬಿಣದ ಅದಿರನ್ನು ಕೆಲವರು ಲೂಟಿ ಮಾಡಿ ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ. ಆದ್ದರಿಂದ ಅಕ್ರಮ ಗಣಿಗಾರಿಕೆ ವಿಷಯವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಿ ರಾಜ್ಯದ ಸಂಪತ್ತನ್ನು ಉಳಿಸಬೇಕು ಎಂದು ಸಮಿತಿಯು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಯಿತು. ಇದಾದ ಬಳಿಕ ಅನೇಕ ಬೆಳವಣಿಗೆ ನಡೆದಿದೆ.

    ಈ ಎಲ್ಲಾ ವರದಿಗಳಿಂದ ಸ್ಪಷ್ಟಪಡಿಸುವುದೇನೆಂದ್ರೆ ರಾಜ್ಯದ ಕಬ್ಬಿಣ ಅದಿರು ಸಂಪತ್ತನ್ನು ಕೆಲವು ವ್ಯಕ್ತಿಗಳು/ ಸಂಘ ಸಂಸ್ಥೆಗಳು, ರಾಜಕಾರಣಿಗಳ ಮತ್ತು ಅಧಿಕಾರಿಗಳ ಸಹಕಾರದಿಂದ ಅಕ್ರಮವಾಗಿ 1 ಲಕ್ಷ ಕೋಟಿಗೂ ಅಧಿಕ ಸಂಪತ್ತನ್ನು ಲೂಟಿ ಮಾಡಿ, ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ್ದಾರೆ.

    ಆದ್ದರಿಂದ ರಾಜ್ಯ ಸರ್ಕಾರ ಹೆಚ್.ಕೆ ಪಾಟೀಲ್ ಅವರ ನೇತೃತ್ವದ ಉಪಸಮಿತಿ ನೀಡಿರುವ ವರದಿ ಆಧಾರದ ಮೇಲೆ ತಪ್ಪಿತಸ್ಥರು ಯಾವುದೇ ಪಕ್ಷದವರಾಗಲಿ, ಯಾವುದೇ ಅಧಿಕಾರಿಗಳಾಗಲಿ, ಯಾವುದೇ ಸಂಘ ಸಂಸ್ಥೆಗೆ ಸೇರಿದವರಾಗಿರಲಿ, ಎಸ್‍ಐಟಿ ರಚಿಸಿ ತನಿಖೆ ನಡೆಸಬೇಕು. ಲೂಟಿಕೋರರ ವಿರುದ್ಧ ಕ್ರಮ ಆಗಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search