ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದ ಹಾಟ್ ಏರ್ ಬಲೂನ್ನ್ನ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೊದಲೆಳೆ ಅಂತರದಲ್ಲಿ ಪ್ರಾಣಾಪಯದಿಂದ ಪಾರಾಗಿದ್ದಾರೆ.
ಮಂದಸೋರ್ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಮೋಹನ್ ಯಾದವ್ ಅವರು ಅಪಾಯದಿಂದ ಪಾರಾಗಿದ್ದಾರೆ. ಬೆಳಿಗ್ಗೆ ಮಂದಸೋರ್ನ ಗಾಂಧಿ ಸಾಗರ್ ಅರಣ್ಯ ಪ್ರದೇಶದಲ್ಲಿ ಮೋಹನ್ ಯಾದವ್ ಹಾಟ್ ಏರ್ ಬಲೂನ್ನಲ್ಲಿ ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದರು. ಅಷ್ಟರಲ್ಲೇ ಎಂಜಿನ್ ಭಾಗದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಭದ್ರತಾ ಸಿಬ್ಬಂದಿ ಅವರನ್ನು ಕೆಳಗಿಳಿಸಿ, ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ.
ಹಾಟ್ ಏರ್ ಬಲೂನ್ ಹಾರಾಟದಲ್ಲಿದ್ದಾಗ ಬೆಂಕಿ ಹೊತ್ತಿಕೊಂಡಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ಅದೃಷ್ಟವಶಾತ್ ನೆಲದಲ್ಲಿದ್ದಾಗ ಈ ಅವಘಡ ಸಂಭವಿಸಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ ಮೋಹನ್ ಯಾದವ್ ಅವರು ಹಾಟ್ ಏರ್ ಬಲೂಲ್ನಲ್ಲಿದ್ದಾಗ ಎಂಜಿನ್ನಿಂದ ಬೆಂಕಿಯ ಜ್ವಾಲೆ ಹೊರಹೊಮುತ್ತಿರುವುದು ಕಾಣಿಸುತ್ತದೆ. ತಕ್ಷಣ ಹಾಟ್ ಏರ್ ಬಲೂನ್ನನ್ನು ನಿಯಂತ್ರಣಕ್ಕೆ ತೆಗೆದುಕೊಂಡು, ಬೆಂಕಿ ನಂದಿಸಲಾಗಿದೆ. ಈ ಅವಘಡದಲ್ಲಿ ಯಾರಿಗೂ ಯಾವುದೇ ಅಪಾಯವಾಗಿಲ್ಲ ಎಂದು ವರದಿಯಾಗಿದೆ.
ಭಾರತ ರಷ್ಯಾದಿಂದ ತೈಲ ಖರೀದಿಸುವುದರ ಮೇಲೆ ಸುಂಕ ವಿಧಿಸುವುದು ಸುಲಭವಲ್ಲ ಎಂದ ಟ್ರಂಪ್
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


