Monday, August 31, 2026
spot_img
More
    spot_img
    HomeLatest newsಹಾಸನ ದುರಂತ: ಮೃತರ ಕುಟುಂಬಸ್ಥರಿಗೆ 5 ಲಕ್ಷ ಸಾಕಾಗಲ್ಲ ಇನ್ನೂ ಹೆಚ್ಚು ಪರಿಹಾರ ನೀಡಿ ಎಂದ...

    ಹಾಸನ ದುರಂತ: ಮೃತರ ಕುಟುಂಬಸ್ಥರಿಗೆ 5 ಲಕ್ಷ ಸಾಕಾಗಲ್ಲ ಇನ್ನೂ ಹೆಚ್ಚು ಪರಿಹಾರ ನೀಡಿ ಎಂದ ಅಶೋಕ್

    ಬೆಂಗಳೂರು: ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಗಣೇಶ ಉತ್ಸವದ ವೇಳೆ ಸಂಭವಿಸಿದ ಆಪಘಾತದಲ್ಲಿ ಮೃತಪಟ್ಟವರು ಹಳ್ಳಿಯವರು, 10 ಲಕ್ಷ ರೂ. ಪರಿಹಾರ ಕೊಟ್ಟರೆ ಒಳ್ಳೆಯದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

    Advertisement

    ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ರೀತಿಯ ಘಟನೆ ಆಗಬಾರದಿತ್ತು. ಗಣೇಶೋತ್ಸವ ಸಂದರ್ಭದಲ್ಲಿ ಹೀಗೆ ಆಗಿದ್ದು ನೋವು ತಂದಿದೆ. ಮೃತರ ಆತಕ್ಕೆ ಶಾಂತಿ ಸಿಗಲಿ. ಸರ್ಕಾರ ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಮೃತರೆಲ್ಲ ಹಳ್ಳಿಯವರು, ಹೀಗಾಗಿ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಬೇಕು ಎಂದು ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.

    ನಾನು ಹಾಸನಕ್ಕೆ ಹೋಗುವೆ. ಡಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಆಸ್ಪತ್ರೆಗೂ ಭೇಟಿ ನೀಡುತ್ತೇನೆ. ಸರ್ಕಾರ ಗಾಯಾಳುಗಳನ್ನು ಬೆಂಗಳೂರು, ಮೈಸೂರಿಗೆ ಕರೆದುಕೊಂಡು ಹೋಗಿ ಚಿಕಿತ್ಸೆಕೊಡಿಸಬೇಕು ಎಂದು ಒತ್ತಾಯ ಮಾಡಿದರು.

    ಇದೇ ವೇಳೆ ಚಿತ್ರದುರ್ಗದಲ್ಲಿ ಗಣೇಶ ವಿಸರ್ಜನೆ ವಿಚಾರವಾಗಿ ಮಾತನಾಡಿ, ಚಿತ್ರದುರ್ಗದಲ್ಲಿ ಪ್ರತಿ ವರ್ಷ ಗಣೇಶ ವಿಸರ್ಜನೆ ದೊಡ್ಡ ಮಟ್ಟದಲ್ಲಿ ಮಾಡುತ್ತಾರೆ. ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಸುತ್ತಮುತ್ತಲಿನ ಜಿಲ್ಲೆಯ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಬೇಕು. ಯಾವುದೇ ಕಿಡಿಗೇಡಿಗಳು ಮಸೀದಿಯಿಂದ ಕಲ್ಲು ಹಾಕೋದಕ್ಕೆ ಅವಕಾಶ ಕೊಡಬಾರದು. ಎಲ್ಲಾ ರಸ್ತೆಯಲ್ಲಿ ಗಣೇಶ ಹೋಗಬಹುದು, ಯಾರು ಅಡ್ಡಿ ಮಾಡಬಾರದು ಅಂತ ಮುಸ್ಲಿಮರೇ ಹೇಳಿದ್ದಾರೆ. ಕೆಲವು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಕೋಮುಗಲಭೆ ಸೃಷ್ಟಿ ಮಾಡುತ್ತಾರೆ. ಸರ್ಕಾರ ಕೂಡಾ ಅಂತಹವರ ಕೇಸ್ ವಾಪಸ್ ಪಡೆಯುವುದರಿಂದ ಅವರಿಗೆ ಕುಮಕ್ಕು ಬರ್ತಿದೆ. ಪಾಕಿಸ್ತಾನ ಗಿರಾಕಿಗಳಿಗೆ ಪಾಠ ಕಲಿಸಬೇಕು. ಆಗ ಇಂತಹ ಘಟನೆಗಳು ಆಗುವದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಧರ್ಮಸ್ಥಳ ಪ್ರಕರಣದ ತನಿಖೆ ವಿಳಂಬ ವಿಚಾರವಾಗಿ ಮಾತನಾಡಿ, ಸರ್ಕಾರ ಯಾರನ್ನೋ ರಕ್ಷಣೆ ಮಾಡಲು ತನಿಖೆಯನ್ನು ವಿಳಂಬ ಮಾಡಿಸುತ್ತಿದೆ. ಎಸ್‍ಐಟಿಗೆ ಬುರುಡೆ ಅಗೆಯುವುದರಲ್ಲಿ ಇದ್ದ ಉತ್ಸಾಹ ತನಿಖೆ ಮಾಡುವುದರಲ್ಲಿ ಇಲ್ಲ. ಜಿಂಕೆಯಂತೆ ಬುರುಡೆ ಅಗೆದು ಆಮೆಗತಿಯಲ್ಲಿ ತನಿಖೆ ಮಾಡುತ್ತಿದ್ದಾರೆ. ತನಿಖೆ ನಡೆಯುವುದು ನೋಡಿದರೆ ಸರ್ಕಾರವೇ ನಿಧಾನವಾಗಿ ತನಿಖೆ ಮಾಡಿ ಎಂದು ಸೂಚನೆ ಕೊಟ್ಟಂತೆ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಈ ಕೇಸ್‍ನಲ್ಲಿ ಕೇರಳ, ತಮಿಳುನಾಡು, ದೆಹಲಿಗೂ ಲಿಂಕ್ ಇದೆ. ಎಸ್‍ಐಟಿ ಅಲ್ಲಿಗೆ ಹೋಗಿಲ್ಲ. ಇದನ್ನ ನೋಡಿದ್ರೆ ತನಿಖೆ ಹಳ್ಳ ಹಿಡಿಸೋಕೆ, ಕೇಸ್ ಮುಚ್ಚಿ ಹಾಕೋ ಹುನ್ನಾರ ನಡೆಯುತ್ತಿದೆ ಎನಿಸುತ್ತಿದೆ. ಧರ್ಮಸ್ಥಳ ಪ್ರಕರಣದಲ್ಲಿ ದೊಡ್ಡ ತಿಮಿಂಗಿಲಗಳು ಇವೆ. ಇವುಗಳ ಬೇಟೆಯಾಡಬೇಕು. ಆದರೆ ಸರ್ಕಾರ ಯಾರದ್ದೋ ರಕ್ಷಣೆಗೆ ನಿಂತಂತೆ ಕಾಣುತ್ತಿದೆ. ಎಸ್‍ಐಟಿ ತನಿಖೆ ಹೀಗೆ ವಿಳಂಬ ಆದರೆ, ಬಿಜೆಪಿ ಮತ್ತೆ ಹೋರಾಟಕ್ಕೆ ಇಳಿಯಲಿದೆ ಎಂದು ಅಶೋಕ್ ಎಚ್ಚರಿಕೆ ನೀಡಿದರು.

    ನಾನು ಕೂಡ ಹಿಂದೂ, ನನ್ನ ಹೆಸರಿನಲ್ಲಿ ಈಶ್ವರ, ರಾಮ ಇಬ್ಬರೂ ಇದ್ದಾರೆ; ಬಿಜೆಪಿಗರಿಗೆ ಸಿದ್ದರಾಮಯ್ಯ ಟಾಂಗ್‌

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading