Saturday, July 4, 2026
spot_img
More
    spot_img
    HomeLatest newsದಸರಾ ಒಂದು ಧರ್ಮಕ್ಕೆ ಸೇರಿದ ಹಬ್ಬವಲ್ಲ; ಬಾನು ಮುಷ್ತಾಕ್‌ ವಿರೋಧಿಸಿದ ಪ್ರತಾಪ್‌ ಸಿಂಹಗೆ ಸಿದ್ದರಾಮಯ್ಯ ಟಾಂಗ್

    ದಸರಾ ಒಂದು ಧರ್ಮಕ್ಕೆ ಸೇರಿದ ಹಬ್ಬವಲ್ಲ; ಬಾನು ಮುಷ್ತಾಕ್‌ ವಿರೋಧಿಸಿದ ಪ್ರತಾಪ್‌ ಸಿಂಹಗೆ ಸಿದ್ದರಾಮಯ್ಯ ಟಾಂಗ್

    ಮೈಸೂರು: ದಸರಾ ಉದ್ಘಾಟಕರ ಬದಲಾವಣೆಗೆ ಕಾನೂನು ಸಮರ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    Advertisement

    ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವರು ಕೋರ್ಟ್‌ಗೆ ಹೋಗಿದ್ದಾರೆ. ಕೋರ್ಟ್ ಅದನ್ನು ನೋಡಿಕೊಳ್ಳುತ್ತೆ. ಏನಾಗುತ್ತೆ ಅಂತ ಪಿ. ಐ.ಎಲ್ ಸಲ್ಲಿಸಿರುವವರನ್ನು ಕೇಳಿ. ದಸರಾ ಸಾಂಸ್ಕೃತಿಕವಾಗಿ ನಡೆಯುತ್ತಿರುವ ಕಾರ್ಯಕ್ರಮ. ದಸರಾ ಎಲ್ಲರ ಹಬ್ಬ ಒಂದು, ಜಾತಿ ಧರ್ಮಕ್ಕೆ ಸೇರಿದ ಹಬ್ಬ ಅಲ್ಲ. ಮುಸ್ಲಿಂ, ಕ್ರಿಸ್ಟಿಯನ್ ಎಲ್ಲರೂ ಬರ್ತಾರೆ. ಇದನ್ನು ಬೇರೆ ರೀತಿ ರಾಜಕೀಯವಾಗಿ ವಿರೋಧ ಮಾಡ್ತಾರೆ. ವಿರೋಧ ಮಾಡೋರನ್ನ ಈ ಬಗ್ಗೆ ಕೇಳಿ ಎಂದು ಪರೋಕ್ಷವಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದರು.

    ಇನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಗಡಿಪಾರಿಗೆ ಕೆಲ ಸಂಘಟನೆಗಳು ಒತ್ತಾಯ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪೊಲೀಸರು ಆ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಾರೆ. ನಾನೇನು ಸೂಚನೆ ಕೊಡಲ್ಲ ಎಂದು ಹೇಳಿದರು.

    ದಸರಾಗೂ ಖಾಸಗಿ ದರ್ಬಾರಿಗೂ ಯಾವುದೇ ಸಂಬಂಧವಿಲ್ಲ ಅದು ಮನೆತನಕ್ಕೆ ಸೇರಿದ ಪೂಜೆ: ಯದುವೀರ್‌

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    ಬೆಂಗಳೂರು: ಡೇ ಕೇರ್‌ನಲ್ಲಿ ಮಕ್ಕಳಿಗೆ ಹಿಂಸೆ, ಐವರು ಮಹಿಳೆಯರ ವಿರುದ್ಧ ಎಫ್‌ಐಆರ್

    ಕ್ಯಾಪ್‌ಜೆಮಿನಿ ಕ್ಯಾಂಪಸ್‌ನ ಡೇ ಕೇರ್‌ನಲ್ಲಿ ಪುಟ್ಟ ಮಕ್ಕಳಿಗೆ ಹಿಂಸೆ ನೀಡಿದ ಆರೋಪದ ವಿಡಿಯೊ ವೈರಲ್; ಐವರು ಮಹಿಳಾ ಆರೈಕೆದಾರರ ವಿರುದ್ಧ ಪ್ರಕರಣ ದಾಖಲು.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading