Tuesday, November 3, 2026
spot_img
More
    spot_img
    HomeLatest newsಹಾಸನ ಗಣೇಶೋತ್ಸವ ಮೆರವಣಿಗೆಯಲ್ಲಿ 9 ಸಾವು;ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

    ಹಾಸನ ಗಣೇಶೋತ್ಸವ ಮೆರವಣಿಗೆಯಲ್ಲಿ 9 ಸಾವು;ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಗಣೇಶ ವಿಸರ್ಜನೆಯ ಸಡಗರದಲ್ಲಿದ್ದ ಹಾಸನ ಜಿಲ್ಲೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಶುಕ್ರವಾರ ರಾತ್ರಿ ಹಾಸನ-ಮೈಸೂರು ಮಾರ್ಗದ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ಮೆರವಣಿಗೆಯಲ್ಲಿ ಸಾಗುತ್ತಿದ್ದ ಜನರ ಗುಂಪಿನ ಮೇಲೆ ಲಾರಿ ಹರಿದಿದ್ದು, ಈ ದುರ್ಘಟನೆಯಲ್ಲಿ 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಇಡೀ ಜಿಲ್ಲೆಯಾದ್ಯಂತ ಶೋಕದ ಛಾಯೆ ಮೂಡಿಸಿದೆ

    ಘಟನೆ ನಡೆದ ಕೂಡಲೇ ಪೊಲೀಸರು ರಕ್ಷಣಾ ಕಾರ್ಯಾಚರಣೆ ಕೈಗೊಂಡು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕನ ನಿರ್ಲಕ್ಷ್ಯವೇ ಅಥವಾ ಲಾರಿಯಲ್ಲಿನ ತಾಂತ್ರಿಕ ದೋಷವೇ ಈ ದುರಂತಕ್ಕೆ ಕಾರಣವಾಯಿತೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

    5 ಲಕ್ಷ ಪರಿಹಾರ ಘೋಷಣೆ-ಸಿಎಂ

    ಘಟನೆ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಗಾಯಗೊಂಡವರಿಗೆ ಅಗತ್ಯ ವೈದ್ಯಕೀಯ ನೆರವು ನೀಡಲು ಮತ್ತು ಅವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲು ಸೂಚಿಸಿದ್ದಾರೆ. ಇದು ಅತ್ಯಂತ ನೋವಿನ ಘಳಿಗೆ ಎಂದು ತಿಳಿಸಿರುವ ಅವರು, ದುಃಖತಪ್ತ ಕುಟುಂಬಗಳ ಜೊತೆ ಸರ್ಕಾರ ಇದೆ ಎಂದು ಭರವಸೆ ನೀಡಿದ್ದಾರೆ.ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

    ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸಂತಾಪ

    ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಭೀಕರ ಅಪಘಾತಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.ಅಲ್ಲದೆ, “ಇದು ಅತ್ಯಂತ ದುರ್ದೈವದ ಘಟನೆ. ರಾಜ್ಯ ಸರ್ಕಾರವು ಎಲ್ಲಾ ಗಾಯಾಳುಗಳಿಗೆ ಉತ್ತಮ ಮತ್ತು ಉಚಿತ ಚಿಕಿತ್ಸೆ ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಅವರು ಒತ್ತಾಯಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search