ಹಾಸನ: ಗಣೇಶ ಮೆರವಣಿಗೆಯಲ್ಲಿ ಹೋಗುತ್ತಿದ್ದವರ ಮೇಲೆ ಏಕಾಏಕಿ ಟ್ರಕ್ ಹರಿದು ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಮೊಸಳೆಹೊಸಳ್ಳಿ ಗ್ರಾಮದ ವರ್ತಕರು ಇಂದು ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಿದ್ದಾರೆ.
ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಸುತ್ತಮುತ್ತಲಿನ ಗ್ರಾಮಸ್ಥರು ನೂರಾರು ಸಂಖ್ಯೆಯಲ್ಲಿ ಸ್ಥಳಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಕೆಎಸ್‍ಆರ್‍ಪಿ ತುಕಡಿಯನ್ನು ನಿಯೋಜನೆ ಮಾಡಲಾಗಿದೆ.
ವರ್ತಕರು ಕೂಡ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಿ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿದ್ದಾರೆ.
ಮೊಸಳೆಹೊಸಳ್ಳಿ ಗ್ರಾಮಸ್ಥರು 25 ವರ್ಷಗಳಿಂದ ಗ್ರಾಮದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪಿಸುತ್ತಿದ್ದಾರೆ. ನಿನ್ನೆ ಆರ್ಕೇಸ್ಟ್ರಾ ಆಯೋಜಿಸಲಾಗಿತ್ತು. ಮೆರವಣಿಗೆಯಲ್ಲಿ ಆರ್ಕೇಸ್ಟ್ರಾ ನೋಡಲು ನೂರಾರು ಮಂದಿ ಬರುತ್ತಿದ್ದರು. ಈ ವೇಳೆ ಮೆರವಣಿಗೆಯಲ್ಲಿ ತೆರಳುತ್ತಿದ್ದ ಅವರ ಮೇಲೆ ಯಮರೂಪಿ ಟ್ರಕ್ ಹರಿದು ದುರಂತ ಸಂಭವಿಸಿದೆ.
ನಾನು ಕೂಡ ಹಿಂದೂ, ನನ್ನ ಹೆಸರಿನಲ್ಲಿ ಈಶ್ವರ, ರಾಮ ಇಬ್ಬರೂ ಇದ್ದಾರೆ; ಬಿಜೆಪಿಗರಿಗೆ ಸಿದ್ದರಾಮಯ್ಯ ಟಾಂಗ್
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


