ಹಾಸನ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೇರಿದೆ.
ತಾಲ್ಲೂಕಿನ ಶಾಂತಿಗ್ರಾಮ ಹೋಬಳಿಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಪ್ರತಿಷ್ಠಾಪಿಸಿದ್ದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ಸುತ್ತಮುತ್ತಲ ಗ್ರಾಮಗಳ ನೂರಾರು ಗ್ರಾಮಸ್ಥರು ಪಾಲ್ಗೊಂಡಿದ್ದರು.
ನಿನ್ನೆ ಮಧ್ಯಾಹ್ನ 3.30ರ ಸುಮಾರಿನಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದ ಸ್ಥಳದಿಂದ ಡೆಕೋರೆಟೆಡ್ ರಥದಲ್ಲಿ ಕೂರಿಸಿಕೊಂಡು ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ಮಾಡಿಕೊಂಡು ಹೋಗಲಾಗುತ್ತಿತ್ತು.
ರಾತ್ರಿ 8.45ರ ಸುಮಾರಿನಲ್ಲಿ ಈ ವಾಹನ ರಾಷ್ಟ್ರೀಯ ಹೆದ್ದಾರಿ-373ರ ಹೊಳೆನರಸೀಪುರ ಕಡೆಯಿಂದ ಹಾಸನ ಕಡೆಗೆ ಹೋಗುವ ರಸ್ತೆಯಲ್ಲಿ ಮೊಸಳೆಹೊಸಳ್ಳಿ ಗ್ರಾಮದ ಬಾಬು ಟ್ರೇಡರ್ಸ್ ಮುಂಭಾಗ ಮೆರವಣಿಗೆ ಸಾಗುತ್ತಿತ್ತು.
ಅದೇ ಸಮಯಕ್ಕೆ ಕಂಟೈನರ್ ಲಾರಿಯನ್ನು ಚಾಲನೆ ಮಾಡಿಕೊಂಡು ಬರುತ್ತಿದ್ದ ಚಾಲಕ ಹಾಸನ ಕಡೆಯಿಂದ ಹೊಳೆನರಸೀಪುರದ ಕಡೆಗೆ ಹೋಗುತ್ತಿದ್ದಾಗ ಮುಂದೆ ಹೋಗುತ್ತಿದ್ದ ಬೈಕ್‍ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದಾಗ ಅದು ಸಾಧ್ಯವಾಗದೇ ಬೈಕ್‍ಗೆ ಡಿಕ್ಕಿ ಹೊಡೆದು ನಂತರ ರಸ್ತೆ ಮಧ್ಯದ ಡಿವೈಡರ್ ದಾಟಿ ಮೆರವಣಿಗೆಯಲ್ಲಿದ್ದ ಸಾರ್ವಜನಿಕರ ಮೇಲೆ ಹರಿಸಿದ ಪರಿಣಾಮ 8 ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಈಶ್ವರ್, ರಾಜೇಶ್, ಗೋಕುಲ್, ಕುಮಾರ್, ಪ್ರವೀಣ್‍ಕುಮಾರ್, ಮಿಥುನ್, ಪ್ರವೀಣ್ ಮತ್ತು ಸುರೇಶ್ ಎಂದು ಗುರುತಿಸಲಾಗಿದೆ.
ಅಲ್ಲದೆ, ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟರಹಳ್ಳಿಯ ಪ್ರಭಾಕರ್ ಎಂಬುವರು ಚಿಕಿತ್ಸೆ ಫಲಿಸದೆ ತಡರಾತ್ರಿ ಮೃತಪಟ್ಟಿದ್ದು, ಮೃತರ ಸಂಖ್ಯೆ 9 ಕ್ಕೆ ಏರಿದಂತಾಗಿದೆ.
ಮೆರವಣಿಗೆಯಲ್ಲಿದ್ದ 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರೆಲ್ಲರನ್ನೂ ಸರ್ಕಾರಿ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಟ್ರಕ್ ಚಾಲಕನಿಂದ ಮತ್ತೊಂದು ಅಪಘಾತ!
ಟ್ರಕ್ ಚಾಲಕ ಭುವನೇಶ್ ಈ ಅಪಘಾತಕ್ಕೂ ಮುನ್ನ ಹಾಸನ ಜಿಲ್ಲೆ ಚನ್ನಪಟ್ಟಣದ ಬೈಪಾಸ್‍ನಲ್ಲಿ ಆಟೋ ಮತ್ತು ಬೈಕ್‍ಗಳಿಗೆ ಡಿಕ್ಕಿ ಹೊಡೆದು ಈ ಮಾರ್ಗಕ್ಕೆ ಬಂದಿದ್ದ ಎಂದು ತಿಳಿದುಬಂದಿದೆ.
ಈ ಬಗ್ಗೆಯೂ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು, ಆರೋಪಿ ಭುವನೇಶ್ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದನೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.
ಹಾಸನ ದುರಂತ: ಮೃತರ ಕುಟುಂಬಸ್ಥರಿಗೆ 5 ಲಕ್ಷ ಸಾಕಾಗಲ್ಲ ಇನ್ನೂ ಹೆಚ್ಚು ಪರಿಹಾರ ನೀಡಿ ಎಂದ ಅಶೋಕ್
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


