Thursday, September 3, 2026
spot_img
More
    spot_img
    HomeLatest newsಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ? ಸಿದ್ದರಾಮಯ್ಯ ಪ್ರಶ್ನೆ

    ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ? ಸಿದ್ದರಾಮಯ್ಯ ಪ್ರಶ್ನೆ

    ಬೆಂಗಳೂರು: ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

    Advertisement

    ಸಿಎಂ ಸಿದ್ದರಾಮಯ್ಯ ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿದರು.

    ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮ್ಮ ಸಂಪುಟ ಸದಸ್ಯರಿಗಾಗಿ ಆಯೋಜಿಸಿರುವ ಭೋಜನಕೂಟದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

    ನಾವು ಆಗಾಗ್ಗೆ ಊಟಕ್ಕೆಂದು ಎಲ್ಲರೂ ಒಟ್ಟಿಗೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಪ್ರಶ್ನಿಸಿ ತೆರಳಿದರು.

    ಇನ್ನು ಬಿಹಾರ ಚುನಾವಣೆ ಬಳಿಕ ಬದಲಾವಣೆ, ಸಂಪುಟ ಪುನಾರಚನೆಯ ಕೂಗು ಬಲವಾಗಿ ಕೇಳಿ ಬರುತ್ತಿದೆ. ಎರಡೂವರೆ ವರ್ಷ ಪೂರ್ಣಗೊಳಿಸಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಬದಲಾವಣೆ ಆಗಲಿದೆ ಎಂಬ ಕೂಗು ಸದ್ದು ಮಾಡುತ್ತಿದೆ.

    ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಹುದಿನಗಳ ಬಳಿಕ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಭೋಜನಕೂಟ ಆಯೋಜನೆ ಮಾಡಿದ್ದು, ಇದು ಹಲವು ವ್ಯಾಖ್ಯಾನಗಳನ್ನು ಹುಟ್ಟು ಹಾಕಿದೆ.

    ಸಂಪುಟ ಪುನರ್‌ ರಚನೆ ಸಾಧ್ಯತೆ ಬಗ್ಗೆ ಕೆಲವು ಸಚಿವರು ಅಲ್ಲಗೆಳೆದಿದ್ದಾರೆ. ಆದರೆ, ನವೆಂಬರ್ ಕ್ರಾಂತಿ, ಬದಲಾವಣೆಯ ಮಧ್ಯೆ ಈ ಬೆಳವಣಿಗೆಗಳು ಸಾಕಷ್ಟು ಕುತೂಹಲ ಕೆರಳಿಸಿದೆ. ಹೈಕಮಾಂಡ್ ಜೊತೆಗಿನ ಚರ್ಚೆಯ ಸಂದರ್ಭದಲ್ಲಿ ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ನಂತರ ನವೆಂಬರ್‌ನಲ್ಲಿ ಸಂಪುಟ ಪುನಾರಚನೆಯನ್ನು ಕೈಗೊಳ್ಳುವ ಯೋಜನೆಯನ್ನು ಸೂಚಿಸಿದ್ದಾರೆಂದು ತಿಳಿದು ಬಂದಿದೆ.

    ಮೂಲಗಳ ಪ್ರಕಾರ ಹಾಲಿ ಶೇ.50ರಷ್ಟು ಸಚಿವರನ್ನು ಕೈಬಿಟ್ಟು ಹೊಸ ಮುಖಗಳಿಗೆ ಮಣೆ ಹಾಕುವ ಉದ್ದೇಶವನ್ನು ಮುಖ್ಯಮಂತ್ರಿ ಹೊಂದಿದ್ದಾರೆ. ನವೆಂಬರ್‌ನಲ್ಲಿ ಸುಮಾರು 15 ಹೊಸ ಸಚಿವರನ್ನು ಸೇರ್ಪಡೆಗೊಳಿಸುವುದರಿಂದ ಮುಖ್ಯಮಂತ್ರಿಯನ್ನು ತಕ್ಷಣವೇ ಬದಲಾಯಿಸಲು ಹೈಕಮಾಂಡ್‍ಗೆ ಕಷ್ಟವಾಗಬಹುದು. ಏಕೆಂದರೆ ಅಷ್ಟರಲ್ಲಿ ಹೊಸ ಕ್ಯಾಬಿನೆಟ್ ಅಸ್ತಿತ್ವಕ್ಕೆ ಬಂದಿರುತ್ತದೆ. ಬಿಹಾರ ಚುನಾವಣೆಯ ನಂತರದ ಸಂಪುಟ ಪುನರ್ ರಚನೆ ಕಾರ್ಯತಂತ್ರ ಮುಖ್ಯಮಂತ್ರಿ ಸ್ಥಾನವನ್ನು ಬಲಪಡಿಸಬಹುದು ಎಂದು ಪಕ್ಷದೊಳಗಿನವರು ಹೇಳುತ್ತಾರೆ.

    ಬೆಂಗಳೂರು: ಹೆಂಡತಿ, ಮಗು ಮುಂದೆಯೇ ಹಾಲಿನ ಅಂಗಡಿ ಮಾಲೀಕನಿಗೆ ಮನಬಂದಂತೆ ಥಳಿಸಿದ ಬಿಹಾರಿ ರೌಡಿ; ವಿಡಿಯೊ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading