ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ ಎರಡು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ನಾಲ್ಕೈದು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದು ಇನ್ನೂ ಎರಡು ದಿನಗಳ ಕಾಲ ಹೀಗೆಯೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಅಕ್ಟೋಬರ್.14ರವರೆಗೂ ಮಳೆ ಮುಂದುವರಿಯಲಿದ್ದು, ಅಕ್ಟೋಬರ್.14ರ ಬಳಿಕ ಮಳೆ ಅಬ್ಬರ ಕೊಂಚ ಕಡಿಮೆಯಾಗಲಿದೆ. ಅಕ್ಟೋಬರ್.13ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಕೆಲವಡೆ ಭೂಕುಸಿತ ಸಂಭವಿಸುವ ಸಾಧ್ಯತೆಯಿದೆ. ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಭಾರತದ ಜನಪ್ರಿಯ ತಿಂಡಿ ‘ಇಡ್ಲಿ’ಗೆ ಗೂಗಲ್‌ನಿಂದ ಸ್ಪೆಷಲ್ ಡೂಡಲ್ ಗೌರವ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


