Saturday, November 7, 2026
spot_img
More
    spot_img
    HomeLatest newsವಿರೋಧ ಪಕ್ಷ ಬಿಜೆಪಿಯಲ್ಲಿ ಸಮರ್ಥ ನಾಯಕರಿಲ್ಲ: ರಾಮಲಿಂಗಾರೆಡ್ಡಿ

    ವಿರೋಧ ಪಕ್ಷ ಬಿಜೆಪಿಯಲ್ಲಿ ಸಮರ್ಥ ನಾಯಕರಿಲ್ಲ: ರಾಮಲಿಂಗಾರೆಡ್ಡಿ

    ಬೆಂಗಳೂರು: ವಿರೋಧ ಪಕ್ಷ ಬಿಜೆಪಿಯಲ್ಲಿ ಸಮರ್ಥ ನಾಯಕತ್ವ ಇಲ್ಲ. ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ ಸೇರಿರುವುದರಿಂದಾಗಿ ಇರುವ ಸ್ಥಾನಗಳಲ್ಲೇ ಮತ್ತಷ್ಟು ಕಡಿಮೆಯಾಗಲಿವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ ನುಡಿದಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ. ಇದು ಕಾಂಗ್ರೆಸ್ ಗೆಲುವಿಗೆ ಒಂದು ಕಾರಣವಾದರೆ, ವಿರೋಧ ಪಕ್ಷಗಳಲ್ಲಿ ನಾಯಕತ್ವದ ಕೊರತೆಯಿಂದಾಗಿ ಅವು ಸೊರಗುತ್ತಿವೆ ಎಂದು ಹೇಳಿದರು.

    ಮಾಜಿ ಸಚಿವ ಕೆ.ಎನ್. ರಾಜಣ್ಣ ಕಾಂಗ್ರೆಸ್ ಪಕ್ಷ ವೈಟ್‍ವಾಷ್ ಆಗಲಿದೆ ಎಂದು ಹೇಳಿರುವುದು ವೈಯಕ್ತಿಕ ಅಭಿಪ್ರಾಯ. ಹೀಗಾಗಿ 2028ಕ್ಕೆ ಕಾಂಗ್ರೆಸ್ ಪಕ್ಷವೇ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಮರಳಿ ಅಧಿಕಾರಕ್ಕೆ ಬರಲಿದೆ ಎಂದರು.

    ನವೆಂಬರ್ ಸೇರಿದಂತೆ ಯಾವುದೇ ರಾಜಕೀಯ ಕ್ರಾಂತಿಗಳು ನಡೆಯುವುದಿಲ್ಲ. ಬಿಜೆಪಿಯವರು ಸುಳ್ಳು ಮಾಹಿತಿಗಳ ಮೂಲಕ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    1956ರಲ್ಲಿ ಭಾಷಾವಾರು ಪ್ರಾಂತ್ಯಗಳನ್ನು ವಿಂಗಡಿಸಲಾಗಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಅಭಿವೃದ್ಧಿಗೆ ಮತ್ತಷ್ಟು ಅನುದಾನ ಕೇಳಲಿ. ಅದನ್ನು ಬಿಟ್ಟು ಪ್ರತ್ಯೇಕ ರಾಜ್ಯ ಕೇಳುವುದು ಸರಿಯಲ್ಲ ಎಂದರು.

    ಕನ್ನಡ ಮಾತನಾಡುವ ಎಲ್ಲರೂ ಒಗ್ಗಟ್ಟಾಗಿರಬೇಕು. ಕನ್ನಡ ನಾಡನ್ನು ವಿಭಾಗಿಸಬೇಕು ಎಂಬುವುದು ಸರಿಯಲ್ಲ. ಈ ಹಿಂದೆ ಎಸ್.ಎಂ. ಕೃಷ್ಣ, ಸಿದ್ದರಾಮಯ್ಯ ಹಾಗೂ ಅದಕ್ಕೂ ಮೊದಲಿನಿಂದಲೂ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.

    ಬಿಹಾರದ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ಎನ್‍ಡಿಎ ಗೆಲುವು ಸಾಧಿಸಲಿದೆ ಎಂಬುದನ್ನು ಗಮನಿಸಿದ್ದೇನೆ. ಒಂದು ವೇಳೆ ಆ ರೀತಿ ಫಲಿತಾಂಶ ಬಂದರೆ ಅದು ದೇಶದ ಮತ್ತು ಬಿಹಾರದ ದುರದೃಷ್ಟ ಎಂದರು.

    ಕಳೆದ 20 ವರ್ಷಗಳಿಂದಲೂ ಬಿಜೆಪಿ ನೇತೃತ್ವದಲ್ಲಿ ನಿತೀಶ್‍ಕುಮಾರ್ ಮುಖ್ಯಮಂತ್ರಿಯಾಗಿದ್ದಾರೆ. ಆಗಿನಿಂದಲೂ ಏಕೆ ಅಭಿವೃದ್ಧಿಯಾಗಿಲ್ಲ? ಬಡತನ ಮತ್ತು ನಿರುದ್ಯೋಗ ನಿವಾರಣೆಯಾಗಿಲ್ಲ. ಬಿಹಾರದ ಐದಾರು ಲಕ್ಷ ಜನ ಕರ್ನಾಟಕದಲ್ಲಿ ಬಂದು ಕೆಲಸ ಮಾಡುತ್ತಿದ್ದಾರೆ. ರಾಜಸ್ಥಾನ, ನಾಗಲ್ಯಾಂಡ್ ಸೇರಿದಂತೆ ಹಲವಾರು ಕಡೆ ಹೋಗಿ ಕೆಲಸ ಮಾಡುತ್ತಿದ್ದಾರೆ. ಅಲ್ಲಿ ಉದ್ಯೋಗ ಸಿಕ್ಕಿದ್ದರೆ ಜನ ಏಕೆ ವಲಸೆ ಹೋಗುತ್ತಿದ್ದರು ಎಂದರು.

    ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ದೇಶದಲ್ಲೇ ನಿರುದ್ಯೋಗ ಹೆಚ್ಚಾಗಿದೆ. ಕೇಂದ್ರ ಸರ್ಕಾರ ಇತ್ತ ಗಮನ ಹರಿಸಿಲ್ಲ. ಪಶ್ಚಿಮ ಬಂಗಾಳದ 8, 10 ಲಕ್ಷ ಜನ ಒಡಿಶಾ, ರಾಜಸ್ಥಾನ, ಮಿಜೋರಾಂ, ನಾಗಲ್ಯಾಂಡ್ ಸೇರಿದಂತೆ ಬೇರೆ ಬೇರೆ ರಾಜ್ಯಗಳ ಜನರು ಬೆಂಗಳೂರಿಗೆ ಬಂದು ಕೆಲಸ ಮಾಡುತ್ತಿದ್ದಾರೆ ಎಂದರು.

    ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಸಿದ್ದರಾಮಯ್ಯಗೆ ಪತ್ರ ಬರೆದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search