Tuesday, November 3, 2026
spot_img
More
    spot_img
    HomeStateDistrictಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ರಾಜು ಕಾಗೆ ಪತ್ರದ ಬೆನ್ನಲ್ಲೇ ಪ್ರತ್ಯೇಕ ದಕ್ಷಿಣ ಕರ್ನಾಟಕ ರಾಜ್ಯಕ್ಕೆ...

    ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ರಾಜು ಕಾಗೆ ಪತ್ರದ ಬೆನ್ನಲ್ಲೇ ಪ್ರತ್ಯೇಕ ದಕ್ಷಿಣ ಕರ್ನಾಟಕ ರಾಜ್ಯಕ್ಕೆ ಒತ್ತಾಯ!

    ಬೆಂಗಳೂರು: ನಿನ್ನೆಯಿಂದ ಭಾರೀ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್‌ ಶಾಸಕ ರಾಜು ಕಾಗೆ ಪ್ರತ್ಯೇಕ ರಾಜ್ಯಕ್ಕಾಗಿ ರಾಷ್ಟ್ರಪತಿಗೆ ಬರೆದ ಪತ್ರ ಸದ್ದು ಮಾಡುತ್ತಿದೆ.

    ರಾಜು ಕಾಗೆ ಬೀದರ್,ಕಲಬುರಗಿ,ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ಹಾವೇರಿ, ವಿಜಯನಗರ, ಬಳ್ಳಾರಿ ಮತ್ತು ದಾವಣಗೆರೆ ಹೀಗೆ 15 ಜಿಲ್ಲೆಗಳನ್ನೊಳಗೊಂಡ ಪ್ರತ್ಯೇಕ ರಾಜ್ಯವನ್ನು ರಚಿಸುವಂತೆ ಆದೇಶ ಹೊರಡಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಇದಕ್ಕೆ ಈ ಜಿಲ್ಲೆಗಳನ್ನು ಕಡೆಗಣಿಸಿರುವುದು ಹಾಗೂ ಅಭಿವೃದ್ಧಿ ಕೆಲಸಗಳನ್ನು ಮಾಡದೇ ಇರುವುದನ್ನು ಕಾರಣವನ್ನಾಗಿ ನೀಡಿದ್ದರು.

    ಈ ಸುದ್ದಿ ವೈರಲ್‌ ಆಗಿ ವಿರೋಧ ಕೇಳಿಬಂದ ಬೆನ್ನಲ್ಲೇ ಇದೀಗ ಪ್ರತ್ಯೇಕ ದಕ್ಷಿಣ ಕರ್ನಾಟಕ ರಾಜ್ಯಕ್ಕೂ ಸಹ ಒತ್ತಾಯ ಅದೇ ದಿನ ಕೇಳಿಬಂದಿದೆ. ಹೌದು, ಮೈಸೂರು ರಾಜ್ಯ ರಚನಾ ಒತ್ತಾಯ ಸಮಿತಿ ( ತಾತ್ಕಾಲಿಕ ) ಈ ಕುರಿತಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

    ‘ಆಡಳಿತದ ದೃಷ್ಟಿಯಿಂದ ಮೂರೂವರೆ ಕೋಟಿ ಜನಸಂಖ್ಯೆಗೆ ಅನ್ವಯವಾಗುವಂತೆ ರಾಜ್ಯವನ್ನು ರಚಿಸುವುದು ಸಮಂಜಸವಾಗಿದೆ. ಹಾಗಾಗಿ, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಮಂಗಳೂರು, ಬೆಂಗಳೂರು ದಕ್ಷಿಣ (ರಾಮನಗರ), ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡಂತೆ ಮೈಸೂರು ರಾಜ್ಯ ಅಥವಾ ದಕ್ಷಿಣ ಕರ್ನಾಟಕ ರಾಜ್ಯ ರಚನೆಯಾಗಬೇಕುʼ ಎಂದು ಮೈಸೂರು ರಾಜ್ಯ ರಚನಾ ಒತ್ತಾಯ ಸಮಿತಿಯ ರಾಜ್ಯಾಧ್ಯಕ್ಷ ಮರಿಮಲ್ಲಯ್ಯ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.

    ಬಿಹಾರ ಚುನಾವಣೆ: ಕಾಂಗ್ರೆಸ್‌ ಮೈತ್ರಿಕೂಟಕ್ಕೆ ಭರ್ಜರಿ ಜಯ; ಎನ್‌ಡಿಎಗೆ ಸೋಲು ಎಂದ ಆ ‘ಒಂದು ಸಮೀಕ್ಷೆ’!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search