Saturday, September 19, 2026
spot_img
More
    spot_img
    HomeTop Storyರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಜಾಮೀನು ಮಂಜೂರು

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಜಾಮೀನು ಮಂಜೂರು

    ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಚಿತ್ರ ನಟ ದರ್ಶನ್ ಸೇರಿದಂತೆ ೭ ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ.

    Advertisement

    ದರ್ಶನ್ ಸೇರಿ ಮತ್ತಿತರ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ, ಆದೇಶ ಪ್ರಕಟಿಸಿದರು.ದರ್ಶನ್, ಪವಿತ್ರಾ ಗೌಡ, ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ.

    ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜುಲೈ ೧೧ ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಪ್ರಸ್ತುತ ಅವರು ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್ನಿಂದ ಮಧ್ಯಂತರ ಜಾಮೀನು ಪಡೆದಿದ್ದಾರೆ. ಈಗ ಅವರಿಗೆ ಜಾಮೀನು ಮಂಜೂರಾಗಿದ್ದು, ತಾತ್ಕಾಲಿಕ ನಿರಾಳತೆ ದೊರಕಿದೆ.

    ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಾಲ್ವರಿಗೆ ಈ ಹಿಂದೆಯೇ ಜಾಮೀನು ದೊರೆತಿತ್ತು, ಶುಕ್ರವಾರ ಏಳು ಮಂದಿಗೆ ಜಾಮೀನು ದೊರೆತಿದೆ. ಆ ಮೂಲಕ ಈ ಪ್ರಕರಣದ ೧೧ ಆರೋಪಿಗಳಿಗೆ ಜಾಮೀನು ದೊರೆತಂತಾಗಿದೆ. ಅನಾರೋಗ್ಯದ ಕಾರಣ ನೀಡಿ ಈಗಾಗಲೇ ಮಧ್ಯಂತರ ಜಾಮೀನನ್ನ ದರ್ಶನ್ ಪಡೆದಿದ್ದಾರೆ. ಇನ್ನು ಜಾಮೀನು ಪಡೆದ ಪ್ರಕರಣದ ಇತರೆ ಆರೋಪಿಗಳು ಸೋಮವಾರ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಪವಿತ್ರಾ ಗೌಡ ಸಹ ಸೋಮವಾರವೇ ಜೈಲಿನಿಂದ ಹೊರಬರಲಿದ್ದಾರೆ.

    ರೇಣುಕಾಸ್ವಾಮಿ ಕೊಲೆ ಪ್ರರಕಣದಲ್ಲಿ ಕಳೆದ ಜೂ.೧೧ ರಂದು ನಟ ದರ್ಶನ್ ಸೇರಿ ಹಲವರು ಬಂಧನಕ್ಕೊಳಗಾಗಿದ್ದರು. ಈ ನಡುವೆ ಜೈಲಿನಲ್ಲಿ ರಾಜಾತಿಥ್ಯದ ಆರೋಪದ ಹಿನ್ನೆಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ನಟನನ್ನು ಶಿಫ್ಟ್ ಮಾಡಲಾಗಿತ್ತು.

    ಬೆನ್ನು ನೋವಿನ ಕಾರಣ ನಟನಿಗೆ ಶಸ್ತ್ರಚಿಕಿತ್ಸೆ ಅಗತ್ಯತೆಯ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನಿನ ಮೇಲೆ ಈಚೆಗೆ ಬಿಡುಗಡೆ ಮಾಡಲಾಗಿತ್ತು. ಸದ್ಯ ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಇನ್ನು ಕೂಡ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ.

    ಇತ್ತ ತಮ್ಮ ಪುತ್ರಿ ಪವಿತ್ರಾ ಗೌಡಗೆ ಜಾಮೀನು ಸಿಗುತ್ತಿದ್ದಂತೆ ಅವರ ತಾಯಿ ಕಣ್ಣೀರಿಟ್ಟರು. ಮಗಳಿಗೆ ಜಾಮೀನು ಸಿಕ್ಕಿರುವುದು ಖುಷಿ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

    ದರ್ಶನ್ ಪರ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರು, ದರ್ಶನ್ ಅವರದ್ದು ರೇಣುಕಾ ಸ್ವಾಮಿ ಕೊಲೆಯಲ್ಲಿ ಪಾತ್ರವಿಲ್ಲ ಎಂದು ವಾದಿಸಿದ್ದರು. ಪೊಲೀಸರು ಕೆಲವು ಉತ್ಪ್ರೇಕ್ಷಿತ ಆರೋಪಗಳನು ದರ್ಶನ್ ವಿರುದ್ಧ ಮಾಡಿದ್ದಾರೆ ಎಂದು ವಾದಿಸಿದ್ದರು. ದರ್ಶನ್ ಪರ ವಕೀಲರ ವಾದವನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರು ದರ್ಶನ್‌ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಜೊತೆಗೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಪವಿತ್ರಾ ಗೌಡ, ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೂ ಜಾಮೀನು ದೊರೆತಿದೆ.

    ವಿಚಾರಣೆ ವೇಳೆ ದರ್ಶನ್ ಪರವಾಗಿ ವಾದಿಸಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್, ಚಿತ್ರದುರ್ಗದ ರೇಣುಕಾಸ್ವಾಮಿ ನಟ ದರ್ಶನ್ ಗೆಳತಿ ಪವಿತ್ರಾ ಗೌಡರನ್ನು ಮಂಚಕ್ಕೆ ಕರೆದಿದ್ದಾರೆ. ಸಮಾಜದಲ್ಲಿ ಮಹಿಳೆಯರನ್ನು ಗೌರವಿಸದ, ಸರಿಯಾದ ನಡತೆ ಹೊಂದಿರದ, ಕಾನೂನಿಗೆ ಎಳ್ಳಷ್ಟೂ ಗೌರವ ನೀಡದ ವ್ಯಕ್ತಿಯನ್ನು ಈ ಪ್ರಕರಣದಲ್ಲಿ ರಾಷ್ಟ್ರೀಯ ನಾಯಕ ಎಂದು ಬಿಂಬಿಸಲಾಗುತ್ತಿದೆ. ಬಣ್ಣದ ಬದುಕಿನಲ್ಲಿ ನಾಯಕನಾಗಿದ್ದರೂ ದರ್ಶನ್‌ರನ್ನು ವಿಲನ್ ರೀತಿ ಕಾಣಲಾಗುತ್ತಿದೆ. ದರ್ಶನ್ ಅವರಿಗೆ ರೇಣುಕಾಸ್ವಾಮಿ ಕೊಲೆ ಮಾಡುವ ಉದ್ದೇಶವಿದ್ದರೆ ನೀರು, ಊಟ ಕೊಡಿ ಎಂದು, ಆತನ ಚಿತ್ರ ವಿಡಿಯೋ ಸೆರೆ ಹಿಡಿದು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಬಿಡಿ ಎಂದು ಏಕೆ ಹೇಳಿದ್ದರು? ಎಂದು ವಿವರಿಸಿದ್ದರು.

    ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ.ಪ್ರಸನ್ನಕುಮಾರ್, ಪ್ರಕರಣದ ಎಲ್ಲಾ ಆರೋಪಿಗಳ ಡಿಜಿಟಲ್ ಹೆಜ್ಜೆ ಗುರುತುಗಳು ಘಟನೆಯಲ್ಲಿ ಅವರ ಪಾತ್ರವನ್ನು ನಿರೂಪಿಸುತ್ತದೆ. ಆರೋಪಿಗಳೆಲ್ಲರೂ ಒಂದಲ್ಲಾ ಒಂದು ರೀತಿಯಲ್ಲಿ ದರ್ಶನ್ ಜೊತೆ ಕೆಲಸ ಮಾಡುತ್ತಿದ್ದವರೇ. ಇಡೀ ಪ್ರಕರಣ ಪಿತೂರಿಯ ಭಾಗವಾಗಿ ನಡೆದಿದೆ. ರೇಣುಕಾಸ್ವಾಮಿ ದೇಹದಲ್ಲಿ ೧೭ ಮೂಳೆ ಮುರಿತ ಮತ್ತು ೩೯ ಗಾಯಗಳು ಪತ್ತೆಯಾಗಿವೆ. ದರ್ಶನ್ ಹಲ್ಲೆಯಿಂದ ರೇಣುಕಾಸ್ವಾಮಿ ವೃಷಣಕ್ಕೆ ತೀವ್ರ ಹಾನಿಯಾಗಿದೆ ಎಂದು ವಾದಿಸಿದ್ದರು.

    ರೇಣುಕಾಸ್ವಾಮಿಯನ್ನು ದರ್ಶನ್ ಬೆಂಗಳೂರಿಗೆ ಕರೆಸಿರುವ ವಿಚಾರವನ್ನು ತನ್ನ ಗೆಳತಿ ಪವಿತ್ರಾ ಗೌಡಗೆ ವಾಟ್ಸ್ಪ್ ಕರೆ ಮಾಡಿ ತಿಳಿಸಿದ್ದಾರೆ. ರೇಣುಕಾಸ್ವಾಮಿಯ ಕೊಲೆ ಮುಚ್ಚಿಹಾಕುವುದಕ್ಕೆ ದರ್ಶನ್ ೩೭.೪೦ ಲಕ್ಷ ರೂಪಾಯಿ ಹಣ ನೀಡಿರುವುದು ಮತ್ತು ಆ ನಂತರ ಬೇರೆ ಬೇರೆ ಆರೋಪಿಗಳಿಂದ ನಿರ್ದಿಷ್ಟ ಮೊತ್ತವನ್ನು ತನಿಖಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ದರ್ಶನ್, ಪವಿತ್ರಾ ಗೌಡ ಮತ್ತಿತರರು ಕಾರಿನಲ್ಲಿ ಬಂದಿರುವುದಕ್ಕೆ ಸಿಸಿಟಿವಿ ದೃಶ್ಯಾವಳಿ, ಕರೆ ದಾಖಲೆಗಳಿವೆ. ರೇಣುಕಾಸ್ವಾಮಿ ಹತ್ಯೆಯು ಐಪಿಸಿ ಸೆಕ್ಷನ್ ೩೦೨ ಅಡಿ ವ್ಯವಸ್ಥಿತ ಕೊಲೆಯೇ ವಿನಾ ಐಪಿಸಿ ಸೆಕ್ಷನ್ ೩೦೪ರ ಅಡಿಯ ನರಹತ್ಯೆ ಅಪರಾಧವಾಗುವುದಿಲ್ಲ ಎಂದು ವಾದಿಸಿದ್ದರು.

    ಪವಿತ್ರಾ ಗೌಡ ಪರವಾಗಿ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್, ದರ್ಶನ್ ಕಾರು ಚಾಲಕ ಎಂ.ಲಕ್ಷ್ಮಣ್ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್, ಪ್ರದೋಷ್ ಪರವಾಗಿ ವಕೀಲ ಕೆ.ದಿವಾಕರ್, ೧೧ನೇ ಆರೋಪಿಯಾಗಿರುವ ದರ್ಶನ್ ವ್ಯವಸ್ಥಾಪಕ ಆರ್.ನಾಗರಾಜು ಪರವಾಗಿ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ದರು.

    ಪ್ರಕರಣದ ಹಿನ್ನೆಲೆ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಜೂನ್ ೧೧ರಂದು ದರ್ಶನ್ ಮತ್ತಿತರರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು. ಜೂನ್ ೨೨ರಿಂದ ದರ್ಶನ್ ಹಾಗೂ ಇತರೆ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ದರ್ಶನ್‌ಗೆ ಅಕ್ಟೋಬರ್ ೩೦ರಂದು ಹೈಕೋರ್ಟ್ ವೈದ್ಯಕೀಯ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಅಂದಿನಿಂದ ಅವರು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಬೆನ್ನುಹುರಿ ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆಬೆಂಗಳೂರು- ಚಿತ್ರದುರ್ಗಾ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಚಿತ್ರ ನಟ ದರ್ಶನ್ ಸೇರಿದಂತೆ ೭ ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ.

    ದರ್ಶನ್ ಸೇರಿ ಮತ್ತಿತರ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ, ಆದೇಶ ಪ್ರಕಟಿಸಿದರು.ದರ್ಶನ್, ಪವಿತ್ರಾ ಗೌಡ, ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ.

    ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜುಲೈ ೧೧ ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಪ್ರಸ್ತುತ ಅವರು ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್ನಿಂದ ಮಧ್ಯಂತರ ಜಾಮೀನು ಪಡೆದಿದ್ದಾರೆ. ಈಗ ಅವರಿಗೆ ಜಾಮೀನು ಮಂಜೂರಾಗಿದ್ದು, ತಾತ್ಕಾಲಿಕ ನಿರಾಳತೆ ದೊರಕಿದೆ.

    ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಾಲ್ವರಿಗೆ ಈ ಹಿಂದೆಯೇ ಜಾಮೀನು ದೊರೆತಿತ್ತು, ಶುಕ್ರವಾರ ಏಳು ಮಂದಿಗೆ ಜಾಮೀನು ದೊರೆತಿದೆ. ಆ ಮೂಲಕ ಈ ಪ್ರಕರಣದ ೧೧ ಆರೋಪಿಗಳಿಗೆ ಜಾಮೀನು ದೊರೆತಂತಾಗಿದೆ. ಅನಾರೋಗ್ಯದ ಕಾರಣ ನೀಡಿ ಈಗಾಗಲೇ ಮಧ್ಯಂತರ ಜಾಮೀನನ್ನ ದರ್ಶನ್ ಪಡೆದಿದ್ದಾರೆ. ಇನ್ನು ಜಾಮೀನು ಪಡೆದ ಪ್ರಕರಣದ ಇತರೆ ಆರೋಪಿಗಳು ಸೋಮವಾರ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಪವಿತ್ರಾ ಗೌಡ ಸಹ ಸೋಮವಾರವೇ ಜೈಲಿನಿಂದ ಹೊರಬರಲಿದ್ದಾರೆ.

    ದರ್ಶನ್‌, ಪವಿತ್ರಾ ಗೌಡ, ನಾಗರಾಜ್‌, ಅನು


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading