ಹೈದರಾಬಾದ್: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್‌ಗೆ ತೆಲಂಗಾನ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ತುರ್ತು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಅಲ್ಲು ಅರ್ಜುನ್‌ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಚಿಕ್ಕಡಪಲ್ಲಿ ಪೊಲೀಸರು ಇಂದು ಅಲ್ಲು ಅರ್ಜುನ್ ಅವರನ್ನು ಬಂಧಿಸಿ ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿತ್ತು. ಕೋರ್ಟ್ ಆದೇಶದ ಬೆನ್ನಲ್ಲೇ ಅಲ್ಲು ಅರ್ಜುನ್ ಅವರನ್ನು ಚಂಚಲಗೊಂಡ ಜೈಲಿಗೆ ಶಿಫ್ಟ್ ಮಾಡುವ ಪ್ರಕ್ರಿಯೆ ಆರಂಭವಾಗಿತ್ತು.
ಡಿಸೆಂಬರ್.4ರಂದು ಪುಷ್ಪ-2 ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದರು. ಅವರ ಪುತ್ರ ಗಂಭೀರವಾಗಿ ಗಾಯಗೊಂಡಿದ್ದರು. ಈ ಘಟನೆ ಕುರಿತಂತೆ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು.
ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚಿಕ್ಕಡಹಳ್ಳಿ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ನೋಟಿಸ್‌ಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


