ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕಿದ ಬೆನ್ನಲ್ಲೇ ನಟ ದರ್ಶನ್‌ಗೆ ಆಪರೇಷನ್ ಮಾಡುವುದು ಅನುಮಾನ ಎಂಬ ಮಾತುಗಳು ಕೇಳಿಬಂದಿವೆ.
ಪಿಸಿಯೋಥೆರಪಿ ಅಥವಾ ಕನ್ಸರ್ವೇಟಿವ್ ಟ್ರೀಟ್‌ಮೆಂಟ್ ಮೂಲಕ ಬೆನ್ನು ನೋವಿಗೆ ಚಿಕಿತ್ಸೆ ಪಡೆಯುವ ಸಾಧ್ಯತೆ ಹೆಚ್ಚಿದೆ. ಈ ನಿರ್ಧಾರಕ್ಕೆ ವೈದ್ಯರು ಬಂದರೆ ಇನ್ನು ಒಂದೆರಡು ವಾರ ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸಾಧ್ಯತೆಯಿದೆ.
ಕೋರ್ಟ್ ಷರತ್ತು ನೀಡಿರುವ ಅನ್ವಯ ದರ್ಶನ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಅನಾರೋಗ್ಯದ ಕಾರಣ ನೀಡಿ ದರ್ಶನ್ ಅವರಿಗೆ ಹೈಕೋರ್ಟ್ ಆರು ವಾರಗಳ ಜಾಮೀನು ನೀಡಿತ್ತು. ಜಾಮೀನು ನೀಡಿದರೂ ದರ್ಶನ್ ಅವರಿಗೆ ಶಸ್ತ್ರಚಿಕಿತ್ಸೆ ನಡೆದಿರಲಿಲ್ಲ. ಹೀಗಾಗಿ ಶಸ್ತ್ರಚಿಕಿತ್ಸೆ ಯಾಕೆ ನಡೆದಿಲ್ಲ ಎಂಬ ಪ್ರಶ್ನೆಗೆ ದರ್ಶನ್ ಪರ ವಕೀಲರು ಆರೋಗ್ಯಕ್ಕೆ ಸಂಬಂಧಿಸಿದ ವರದಿಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದ್ದರು.
ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಡಬೇಕೆಂದು ಕೋರಿ ದರ್ಶನ್ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಅಕ್ಟೋಬರ್.30ರಂದು ಆರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.
ಈಗ ದರ್ಶನ್‌ಗೆ ಆಪರೇಷನ್ ಆಗೋದು ಅನುಮಾನ ಎನ್ನಲಾಗುತ್ತಿದ್ದು, ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


